ದಾವಣಗೆರೆ: ಸಾಮರ್ಥ್ಯಕ್ಕಿಂತ ಹೆಚ್ಚು ವಿದ್ಯಾರ್ಥಿಗಳನ್ನ ತುಂಬಿದ ಆಟೋ ಚಾಲಕರಿಗೆ ಬಿತ್ತು 20,600 ರೂಪಾಯಿ ದಂಡ
ದಾವಣಗೆರೆ, ಜೂನ್ 7: ಇತ್ತೀಚಿನ ದಿನಗಳಲ್ಲಿ ಸಂಚಾರ ನಿಯಮ ಉಲ್ಲಂಘಟನೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಲಿವೆ. ಅದರಲ್ಲೂ ಶಾಲಾ-ಕಾಲೇಜು ಬಸ್, ಆಟೋಗಳಲ್ಲಿ ಸಾಮಾರ್ಥ್ಯಕ್ಕಿಂತ ಹೆಚ್ಚು ಮಕ್ಕಳನ್ನು ತುಂಬುವಂತಿಲ್ಲ ಎಂಬ ನಿಯಮವಿದೆ. ಆದರೂ ಇದನ್ನು ಪಾಲನೆ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಹಾಗೆಯೇ ಇದೀಗ ದಾವಣಗೆರೆ ಜಿಲ್ಲೆಯಲ್ಲಿ ಇಂತಹದ್ದೇ ಒಂದು ಘಟನೆ ನಡೆದಿದೆ. ಹಾಗಾದ್ರೆ ಪೊಲೀಸರು ತೆಗೆದುಕೊಂಡು ಕ್ರಮ ಏನೆಂದು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಆಟೋದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಶಾಲಾ ಮಕ್ಕಳನ್ನು ತುಂಬಿಕೊಂಡು ಹೋಗುತ್ತಿದ್ದ ಆಟೋಗಳನ್ನು ಹಿಡಿದು ಪೊಲೀಸರು 105 ಪ್ರಕರಣಗಳನ್ನು ದಾಖಲಿಸಿ ಒಟ್ಟು 20,600 ರೂಪಾಯಿ ವಿಧಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ ಎಂದು ಡಿವಿಜಿ ವರದಿ ಮಾಡಿದೆ.

ಜಿಲ್ಲಾ ಎಸ್ಪಿ ಉಮಾ ಪ್ರಶಾಂತ್ ಅವರ ನಿರ್ದೇಶನದಂತೆ ಎಎಸ್ಪಿ ಮಂಜುನಾಥ ಜಿ ಮತ್ತು ಡಿವೈಎಸ್ಪಿ ಶರಣಬಸವೇಶ್ವರ ಮಾರ್ಗದರ್ಶನದಲ್ಲಿ ದಾವಣಗೆರೆ ಸಂಚಾರ ವೃತ್ತ ಪೊಲೀಸ್ ನಿರೀಕ್ಷಕ ಮಂಜುನಾಥ ನಲವಾಗಲು ನೇತೃತ್ವದಲ್ಲಿ ದಕ್ಷಿಣ ಸಂಚಾರ & ಉತ್ತರ ಸಂಚಾರ ಪೊಲೀಸ್ ಅಧಿಕಾರಿ, ಸಿಬ್ಬಂದಿ ಈ ವಿಶೇಷ ಕಾರ್ಯಚರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ದಾವಣಗೆರೆ ನಗರದಲ್ಲಿ ಆಟೋದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ತುಂಬಿಕೊಂಡು ಹೋಗುತ್ತಿದ್ದ ಆಟೋಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಅವರ ವಿರುದ್ಧ ಒಟ್ಟು 105 ಪ್ರಕರಣಗಳನ್ನು ದಾಖಲಿಸಿದ್ದು, 20,600 ರೂಪಾಯಿ ದಂಡ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.
ಇನ್ಮುಂದೆ ಆಟೋದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಬಾರದು. ಒಂದು ವೇಳೆ ಈ ನಿಯಮವನ್ನು ಮೀರಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ಅಲ್ಲದೆ, ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ತಿಳಿಹೇಳುವ ಕೆಲಸ ನಡೆದಿದೆ.
ಶಾಲಾ ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಶಾಲಾ ಮಕ್ಕಳನ್ನು ಕರೆದೊಯ್ಯುವ ಆಟೋ ಚಾಲಕರು ಹಾಗೂ ಇತರೆ ವಾಹನಗಳಿಗೆ ಸೂಚಿಸುವುದೇನೆಂದರೆ ತಮ್ಮ ವಾಹನಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಬಾರದು. ಸಂಚಾರ ನಿಯಮಗಳನ್ನು ಉಲ್ಲಂಘಿಸಬಾರದು. ಒಂದು ವೇಳೆ ಇದನ್ನೂ ಮೀರಿ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ತುಂಬಿಕೊಂಡು ಹೋಗುವುದು ಕಂಡುಬಂದರೆ ಹಾಗೂ ನಿಯಮ ಮೀರಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಸ್ಪಿ ಉಮಾ ಪ್ರಶಾಂತ್ ಎಚ್ಚರಿಕೆ ನೀಡಿದ್ದಾರೆ.
ಬರೀ ದಾವಣಗೆರೆ ಅಷ್ಟೇ ಅಲ್ಲ, ರಾಜ್ಯದ ಬಹುತೇಕ ಜಿಲ್ಲೆಗಳ ಹಳ್ಳಿ ಪ್ರದೇಶಗಳಿಂದ ಸಾಮಾರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಆಟೋಗಳಲ್ಲಿ ಶಾಲಾ-ಕಾಲೇಜುಗಳಿಗೆ ತುಂಬಿಕೊಂಡು ಹೋಗುವ ಘಟನೆಗಳು ಮುಂದುವರೆದಿವೆ. ಈ ಬಗ್ಗೆ ಪ್ರಶ್ನೆ ಮಾಡಿದರೆ, ನಮಗೆ ನಷ್ಟ ಆದರೆ ನೀವು ಅದನ್ನು ಕಟ್ಟಿಕೊಡುತ್ತೀರಾ ಎಂದು ವಿಧ್ಯಾರ್ಥಿಗಳಿಗೆ ಮರುಪ್ರಶ್ನೆ ಮಾಡುವ ಪ್ರಸಂಗಗಳು ನಡೆಯುತ್ತಲೇ ಇವೆ. ಇಂತಹ ಆಟೋ ಚಾಲಕರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಅಂತಾ ವಿದ್ಯಾರ್ಥಿಗಳು, ಪೋಷಕರು ಕೇಳಿಕೊಳ್ಳುತ್ತಲೇ ಇರುತ್ತಾರೆ. ಮತ್ತೊಂದೆಡೆ ಕೆಲವೆಡೆ ಸಮಯಕ್ಕೆ ಸರಿಯಾಗಿ ಬಸ್‌ಗಳ ಬಾರದ ಹಿನ್ನೆಲೆ ಬೇರೆ ದಾರಿಯಿಲ್ಲದೆ, ರಷ್ ಆಗಿರುವ ಆಟೋಗಳಲ್ಲೇ ವಿದ್ಯಾರ್ಥಿಗಳು ಪ್ರಯಾಣ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.












Click it and Unblock the Notifications