ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಡಿಯೋ; ರಾಜ್ಯಪಾಲರಿಗೆ ಕಾಂಗ್ರೆಸ್ ದೂರು, ಸಿಎಂ ಹೇಳಿದ್ದೇನು?

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ನವೆಂಬರ್ 26; "ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದಲ್ಲಿ ಆ ರೀತಿ ಯಾವುದೇ ತೀರ್ಮಾನ ಆಗಿಲ್ಲ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಶುಕ್ರವಾರ ದಾವಣಗೆರೆಯಲ್ಲಿ ಮಾತನಾಡಿದ ಅವರು, "ಮಾಜಿ ಸಿಎಂ ಯಡಿಯೂರಪ್ಪ ಜೆಡಿಎಸ್ ಜೊತೆ ಬೆಂಬಲ ಪಡೆಯುತ್ತೇವೆ ಎಂಬ ಬಗ್ಗೆ ಮಾತ್ರ ಹೇಳಿದ್ದಾರೆ. ಅವರ ತಮ್ಮ 40 ವರ್ಷದ ಅನುಭವದ ಮಾತನ್ನು ಹೇಳಿದ್ದಾರೆ. ನಾನು ಅವರ ಜೊತೆ ಚರ್ಚೆ ಮಾಡುತ್ತೇನೆ" ಎಂದು ಹೇಳಿದರು.

ಕಾಂಗ್ರೆಸ್ ನಾಯಕರ ನಿಯೋಗ ರಾಜ್ಯ ಸರ್ಕಾರವನ್ನು ವಜಾಗೊಳಿಸಿ ಎಂದು ರಾಜ್ಯಪಾಲರಿಗೆ ದೂರು ನೀಡಿವೆ. ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಮುಖ್ಯಮಂತ್ರಿಗಳು, "ಭ್ರಷ್ಟಾಚಾರ ನಡೆಸುತ್ತಿರುವ ಸರ್ಕಾರ ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರು ರಾಜ್ಯಪಾಲರಿಗೆ ನೀಡಿರುವ ದೂರು ಅತ್ಯಂತ ಹಾಸ್ಯಾಸ್ಪದ ಮನವಿ" ಎಂದರು.

ಬಿಜೆಪಿ ಸರ್ಕಾರದ ಭ್ರಷ್ಟಾಚಾರ; ರಾಜ್ಯಪಾಲರಿಗೆ ಕಾಂಗ್ರೆಸ್ ದೂರು ಬಿಜೆಪಿ ಸರ್ಕಾರದ ಭ್ರಷ್ಟಾಚಾರ; ರಾಜ್ಯಪಾಲರಿಗೆ ಕಾಂಗ್ರೆಸ್ ದೂರು

Basavaraj Bommai Reaction On Congress Delegation Complaint To Governor

"ಕಾಂಟ್ರಕ್ಟರ್‌ಗಳಿಗೆ ಯಾವ ಅವಧಿಯಲ್ಲಿ ಅನುಭವ ಆಗಿದೆ ಎಂಬ ಬಗ್ಗೆ ಪತ್ರದಲ್ಲಿ ಬರೆದಿಲ್ಲ. ಪರ್ಸೆಂಟ್ ಜನಕರಿದ್ದರೇ ಅದು ಕಾಂಗ್ರೆಸಿಗರು. ಆ ಪರ್ಸೆಂಟ್ ಜಾಸ್ತಿಯಾಗಿದ್ದರೇ ಅದು ಕಾಂಗ್ರೆಸ್ ಕಾಲದಲ್ಲಿ" ಎಂದು ಆರೋಪಿಸಿದರು.

68 ಕಡೆ ಎಸಿಬಿ ದಾಳಿ; ಪತ್ತೆಯಾದ ಅಕ್ರಮ ಆಸ್ತಿಗಳ ವಿವರ 68 ಕಡೆ ಎಸಿಬಿ ದಾಳಿ; ಪತ್ತೆಯಾದ ಅಕ್ರಮ ಆಸ್ತಿಗಳ ವಿವರ

"ಪರ್ಸೆಂಟೇಜ್ ಬಗ್ಗೆ ಮಾತನಾಡಿದ ವಿಡಿಯೋ ಪ್ರಚಾರ ಆಗಿದ್ದು ಎಲ್ಲರಿಗೂ ಗೊತ್ತಿದೆ.‌ ಪರ್ಸೆಂಟ್ ಜಾಸ್ತಿಯಾಗಿದ್ದು ಕಾಂಗ್ರೆಸ್ ಅವಧಿಯಲ್ಲೇ.‌ ಕೊಟ್ಟಿರುವ ಪತ್ರದಲ್ಲೇ ಸ್ಪಷ್ಟತೆ ಇಲ್ಲ.‌ಯಾವ ಕಾಲದಲ್ಲಿ ಹೀಗೆ ಆಗಿದೆ ಎಂಬ ಮಾಹಿತಿಯು ಪತ್ರದಲ್ಲಿಲ್ಲ. ‌ಕಾಂಗ್ರೆಸ್ ಅವಧಿಯ ಟೆಂಡರ್‌ಗಳನ್ನು ತನಿಖೆ ಮಾಡಿಸುತ್ತೇವೆ" ಎಂದು ಮುಖ್ಯಮಂತ್ರಿಗಳು ಹೇಳಿದರು.

 ಬಿಡಿಎ ಭ್ರಷ್ಟಾಚಾರ: ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಎಂದ ಸಿಎಂ ಬಿಡಿಎ ಭ್ರಷ್ಟಾಚಾರ: ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಎಂದ ಸಿಎಂ

Recommended Video

ರಾಜ್ಯದಲ್ಲಿ ACB ದಾಳಿ ಬಗ್ಗೆ B S Yediyurappa ಹೇಳಿಕೆ | Oneindia Kannada

"ಎಸಿಬಿಗೆ ಮುಕ್ತ ಸ್ವಾತಂತ್ರ್ಯ ಕೊಟ್ಟಿದ್ದೇವೆ.‌ ಇದರಿಂದ ಭ್ರಷ್ಟರ ಬಂಡವಾಳ ಬಯಲಾಗಿದೆ. ‌ವ್ಯವಸ್ಥೆ ಶುದ್ಧೀಕರಣ ಮಾಡಬೇಕೆಂದು ನಿರ್ಧಾರ ಮಾಡಿದ್ದೇವೆ. ಆದ್ದರಿಂದಲೇ ಈ ಕ್ರಮ ಆಗಿದೆ" ಎಂದರು.

English summary
Congress leaders delegation met governor Thawarchand Gehlot and submit memorandum and seeks probe on corruption of BJP government. CM Basavaraj Bommai reaction for issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X