ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಕಲಿ ಬಂಗಾರದ ಆಸೆಗೆ ಬಿದ್ದು ಲಕ್ಷಾಂತರ ಹಣ ಕಳೆದುಕೊಂಡ ಬೆಂಗಳೂರಿಗ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಫೆಬ್ರವರಿ 05: ವ್ಯಕ್ತಿಯೊಬ್ಬರಿಗೆ ಕಡಿಮೆ‌ ಬೆಲೆಯಲ್ಲಿ ಕೆಜಿಗಟ್ಟಲೇ ಬಂಗಾರದ ನಾಣ್ಯಗಳನ್ನು‌ ನೀಡುವುದಾಗಿ ನಂಬಿಸಿ ನಕಲಿ ಬಂಗಾರದ ಬಿಲ್ಲೆಗಳನ್ನು ನೀಡಿ 3.50 ಲಕ್ಷ ವಂಚಿಸಿರುವ ಪ್ರಕರಣ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ.

ಬೆಂಗಳೂರಿನ ಮೂಡಲಪಾಳ್ಯದ ನಿವಾಸಿ ಶ್ರೀನಿವಾಸ ಮೋಸ ಹೋದವರಾಗಿದ್ದು, ಶಿವಮೊಗ್ಗದ ಹರೀಶ್ ಹಾಗೂ ಆತನ ಸಹಚರ ಮೋಸ ಮಾಡಿದ್ದಾರೆ ಎನ್ನಲಾಗಿದೆ. ಹೋಟೆಲ್‌ನಲ್ಲಿ ಕೆಲಸ ಮಾಡುವ ಶ್ರೀನಿವಾಸ್‌ಗೆ ಕರೆ ಮಾಡಿದ ಹರೀಶ್, ""ನಾನು ನಿಮ್ಮ ಹೋಟೆಲ್‌ಗೆ ಪ್ರತಿ ದಿವಸ ಬರುತ್ತೇನೆ. ನೀವು ನನ್ನನ್ನು ನೋಡಿದ್ದೀರಿ'' ಎಂದು ಪರಿಚಯ ಮಾಡಿಕೊಂಡಿದ್ದಾನೆ .

 ದಾವಣಗೆರೆ; ಪೆಟ್ರೋಲ್ ಬಂಕ್ ಆಮಿಷ ಒಡ್ಡಿ ದೋಚಿದ್ದು ಲಕ್ಷಲಕ್ಷ ದಾವಣಗೆರೆ; ಪೆಟ್ರೋಲ್ ಬಂಕ್ ಆಮಿಷ ಒಡ್ಡಿ ದೋಚಿದ್ದು ಲಕ್ಷಲಕ್ಷ

ಮತ್ತೊಂದು ದಿನ ಕರೆ ಮಾಡಿ, ""ಕಲಬುರಗಿಯಲ್ಲಿರುವ ನನ್ನ ಅಜ್ಜ ಒಂದು ತಿಂಗಳ ಹಿಂದೆ ಮನೆಯ ಪಾಯ ತೆಗೆಯುತ್ತಿರುವಾಗ ನಿಧಿ ಸಿಕ್ಕಿದೆ. ನಿಮಗೆ ಬೇಕಾದರೆ ಒಂದು ಕೆಜಿಯಷ್ಟು ತಂದು ಕೊಡುತ್ತೇನೆ . ಈ ವಿಷಯವನ್ನು ಯಾರಿಗೂ ಹೇಳಬೇಡಿ. ಸ್ಯಾಂಪಲ್ ಕೊಡುತ್ತೇನೆ ಶಿವಮೊಗ್ಗಕ್ಕೆ ಬನ್ನಿ'' ಎಂದು ತಿಳಿಸಿದ್ದಾನೆ.

Bengaluru Person Lost 3.50 Lakhs For Artficial Gold

ಹರೀಶ್ ಮಾತನ್ನು ನಂಬಿದ ಶ್ರೀನಿವಾಸ ಶಿವಮೊಗ್ಗಕ್ಕೆ ಬಂದಿದ್ದಾರೆ. ನಂತರ ಅವರನ್ನು ಹರೀಶ್ ಚೀಲೂರಿಗೆ ಕರೆಸಿಕೊಂಡಿದ್ದಾನೆ. ಒಂದು ಬಿಲ್ಲೆಯನ್ನು ನೀಡಿದ್ದಾನೆ. ಇದನ್ನು ಪರೀಕ್ಷಿಸಿದಾಗ ಅದು ಅಸಲಿ ಬಂಗಾರವಾಗಿತ್ತು. ""5 ಲಕ್ಷ ರುಪಾಯಿ ಕೊಟ್ಟರೆ ಒಂದು ಕೆಜಿ ಬಂಗಾರ ನೀಡುತ್ತೇನೆ'' ಎಂದು ಹರೀಶ್ ನಂಬಿಸಿದ್ದಾನೆ.

Bengaluru Person Lost 3.50 Lakhs For Artficial Gold

ಶ್ರೀನಿವಾಸ್ ಅವರು ಕಳೆದ ಜನವರಿಯಲ್ಲಿ 3.50 ಲಕ್ಷ ತೆಗೆದುಕೊಂಡು ಚೀಲೂರಿಗೆ ಬಂದಿದ್ದಾರೆ. ಆಗ ಆರೋಪಿಗಳು ನಕಲಿ ಬಂಗಾರ ನೀಡಿ ಹಣ ತೆಗೆದುಕೊಂಡು ಪರಾರಿಯಾಗಿದ್ದಾರೆ. ನಂತರ ಮನೆಗೆ ಹೋಗಿ ಪರೀಕ್ಷಿಸಿದಾಗ, ಕೆಜಿಗಟ್ಟಲೆ ನಕಲಿ ಬಂಗಾರ ಇರುವುದು ಗೊತ್ತಾಗಿದ್ದ, ಈ ಪ್ರಕರಣ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

English summary
A Bengaluru Person lost Lakhs of money by Desiring on Artificial Gold In Nyamathi, Honnali Taluk Davanagere District.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X