ದಾವಣಗೆರೆಯಲ್ಲಿ ಭೀಕರ ಅಪಘಾತ ಬೆಂಗಳೂರಿನ ನಾಲ್ವರ ಸಾವು
ದಾವಣಗೆರೆ, ಸೆಪ್ಟೆಂಬರ್ 08: ಪ್ರವಾಸಕ್ಕೆ ತೆರಳುತ್ತಿದ್ದ ಬೆಂಗಳೂರಿನ ಯುವಕರು ದಾವಣಗೆರೆ ಸಮೀಪ ಅಪಘಾತಕ್ಕೆ ಈಡಾಗಿ ಪ್ರಾಣ ಕಳೆದುಕೊಂಡಿದ್ದಾರೆ.
ಒಟ್ಟು ಆರು ಜನ ಬೆಂಗಳೂರಿನ ಯುವಕರು ಗೋಕರ್ಣಕ್ಕೆ ಪ್ರವಾಸಕ್ಕೆಂದು ಕಾರಿನಲ್ಲಿ ತೆರಳುತ್ತಿದ್ದರು. ಬೆಳಗ್ಗೆ ಸಮಯ ಹರಿಹರ ತಾಲ್ಲೂಕಿನ ಹನಗವಾಡಿ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಗಕ್ಕೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃಪಟ್ಟಿದ್ದರೆ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಮೃತರೆಲ್ಲರೂ ಬೆಂಗಳೂರಿನ ಚಾಮರಾಜಪೇಟೆಯ ಡಿಟಿಡಿಸಿ ಕೊರಿಯರ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಮೃತರನ್ನು ವಿನಯ್ (27) , ಅಜಯ್ (32) , ವಿನಯ್‍ಕುಮಾರ್ (30) ಹಾಗೂ ಸಿದ್ದಪ್ಪ (28) ಎಂದು ಗುರುತಿಸಲಾಗಿದೆ.

ಗಾಯಗೊಂಡ ಇಬ್ಬರನ್ನು ಹರಿಹರದ ಆಸ್ಪತ್ರೆಗೆ ಸೇರಿಸಲಾಗಿದೆ. ಹರಿಹರ ಗ್ರಾಮೀಣ ವಿಭಾಗದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.












Click it and Unblock the Notifications