ವನ್ಯಜೀವಿ ಪತ್ತೆ ಪ್ರಕರಣ:ಮಲ್ಲಿಕಾರ್ಜುನ್ ಬಂಧನಕ್ಕೆ ಆಗ್ರಹಿಸಿ ಡಿಎಫ್ಒ ಕಚೇರಿಗೆ ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು
ದಾವಣಗೆರೆ, ಡಿಸೆಂಬರ್ 29: ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಒಡೆತನದ ಕಲ್ಲೇಶ್ವರ ರೈಸ್ ಮಿಲ್‌ನಲ್ಲಿ ವನ್ಯಜೀವಿಗಳ ಪತ್ತೆ ಪ್ರಕರಣ ಸಂಬಂಧ ಡಿಎಫ್ಒ ಸರಿಯಾದ ತನಿಖೆ ನಡೆಸುತ್ತಿಲ್ಲ. ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್‌ರ ಹೆಸರನ್ನು ಉಲ್ಲೇಖಿಸದಿರುವುದನ್ನು ವಿರೋಧಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಡಿಎಫ್ಒ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ನಗರದ ದುರ್ಗಾಂಬಿಕಾ ದೇವಸ್ಥಾನದಲ್ಲಿ ದೇವಿಗೆ ಪೂಜೆ ಸಲ್ಲಿಸಿದ ಬಳಿಕ ಬಿಜೆಪಿ ಕಾರ್ಯಕರ್ತರು ದೊಡ್ಡಪೇಟೆ ಗಣಪತಿ ದೇವಸ್ಥಾನ., ಹೊಂಡದ ಸರ್ಕಲ್, ಅರುಣಾ ಸರ್ಕಲ್, ರಾಂ & ಕೋ ಸರ್ಕಲ್, ಎ. ವಿ.ಕೆ. ಕಾಲೇಜ್ ರೋಡ್, ಗುಂಡಿ ಸರ್ಕಲ್, ವಿದ್ಯಾನಗರ ಸರ್ಕಲ್, ಐಟೆಕ್ ಸರ್ಕಲ್, ಗ್ರಾಮಾಂತರ ಪೋಲಿಸ್ ಕಚೇರಿ ಮುಂಭಾಗ, ನಿಟ್ಟುವಳ್ಳಿ ದುರ್ಗಾಂಬಿಕ ದೇವಸ್ಥಾನ- 60 ಅಡಿ ರಸ್ತೆ, ಹದಡಿ ರಸ್ತೆ ಮೂಲಕ ಬೈಕ್ ರ್ಯಾಲಿ ನಡೆಸಿ, ಬಳಿಕ ಡಿ.ಎಫ್.ಓ ಕಚೇರಿ ಮುಂದೆ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.
ರೈಸ್ ಮಿಲ್‌ನ ಆವರಣದಲ್ಲಿ ವನ್ಯಜೀವಿಗಳನ್ನು ಅಕ್ರಮವಾಗಿ ಸಾಕಾಣಿಕೆ ಮಾಡಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಈ ಕೂಡಲೇ ಬಂಧಿಸಬೇಕು. ಜೊತೆಗೆ ಪ್ರಕರಣದಲ್ಲಿ ವಶಕ್ಕೆ ಪಡೆದಿರುವ ಅಮಾಯಕರನ್ನು ಕೈ ಬಿಡುವಂತೆ ಆಗ್ರಹಿಸಿದರು.

ಎಸ್.ಎಸ್. ಮಲ್ಲಿಕಾರ್ಜುನ್ ಬಂಧಿಸುವಂತೆ ಆಗ್ರಹ
ಕಲ್ಲೇಶ್ವರ ರೈಸ್ ಮಿಲ್‌ನಲ್ಲಿ ವನ್ಯಜೀವಿಗಳಾದ ಏಳು ಜಿಂಕೆ, 11 ಕೃಷ್ಣಮೃಗ, ಏಳು ಕಾಡುಹಂದಿಗಳು, 2 ನರಿಗಳು ಹಾಗೂ 3 ಮುಂಗುಸಿ ಪತ್ತೆಯಾಗಿವೆ. ಅಕ್ರಮವಾಗಿ ಈ ಪ್ರಾಣಿಗಳನ್ನು ಇಟ್ಟುಕೊಂಡಿದ್ದು ಮಾತ್ರವಲ್ಲದೇ, ಜಿಂಕೆ ಮಾಂಸ ಸೇವನೆ ಮಾಡಲಾಗಿದೆ. ಅದರ ಚರ್ಮ ಮಾರಾಟ ಮಾಡುವಾಗ ಸೆಂದಿಲ್ ಎಂಬ ವ್ಯಕ್ತಿ ಬೆಂಗಳೂರು ಸಿಸಿಬಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಕಲ್ಲೇಶ್ವರ ರೈಸ್ ಮಿಲ್‌ಗೆ ಆರೋಪಿ ಕರೆದುಕೊಂಡು ಬಂದಾಗ ವನ್ಯಜೀವಿಗಳು, ಜಿಂಕೆ ಕೋಡು, ಮುಳ್ಳು ಹಂದಿಯ ಮುಳ್ಳುಗಳು ಪತ್ತೆಯಾಗಿವೆ. ಆದರೂ ಮಲ್ಲಿಕಾರ್ಜುನ್ ವಿರುದ್ಧ ಎಫ್‌ಐಆರ್ ದಾಖಲಿಸಿಲ್ಲ, ಇದರಲ್ಲಿ ಹೆಸರು ಉಲ್ಲೇಖಿಸಿಲ್ಲ. ಕೂಡಲೇ ಮಲ್ಲಿಕಾರ್ಜುನ್ ರನ್ನು ಬಂಧಿಸಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದರು.

ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಬಿಜೆಪಿ ಕಿಡಿ
ನಿಜವಾದ ಆರೋಪಿ ಕೈ ಬಿಟ್ಟು, ಅಮಾಯಕರ ಹೆಸರು ಎಫ್‌ಐಆರ್ ನಲ್ಲಿದೆ. ಈಗಾಗಲೇ ಬಿಜೆಪಿ ಪಾಲಿಕೆ ಸದಸ್ಯರು, ಮುಖಂಡರು, ಕಾರ್ಯಕರ್ತರು ಹೋರಾಟ ಮಾಡಿದ್ದಾರೆ. ಕೂಡಲೇ ಮಲ್ಲಿಕಾರ್ಜುನ್ ಅವರ ವಿರುದ್ಧ ಕಾನೂನು ಕ್ರಮ ಜರುಗಿಸದಿದ್ದರೆ ಹೋರಾಟ ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಜೆಪಿ ಕಾರ್ಯಕರ್ತರು ಎಚ್ಚರಿಕೆ ನೀಡಿದರು.
ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಯಶವಂತ ರಾವ್ ಜಾಧವ್, "ವನ್ಯಜೀವಿಯನ್ನು ಕೊಂದು ತಿಂದ ಪ್ರಕರಣ ಮಾತ್ರವಲ್ಲದೇ, ತಮ್ಮ ಫಾರಂ ಹೌಸ್‌ನಲ್ಲಿ ವನ್ಯಜೀವಿಗಳನ್ನು ಅಕ್ರಮವಾಗಿ ಇರಿಸಿಕೊಂಡಿದ್ದ ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರನ್ನು ವನ್ಯಜೀವಿ ಕಾನೂನು ಪ್ರಕಾರ ಬಂಧಿಸುವಂತೆ ಆಗ್ರಹಿಸಿದ್ದರೂ ಈವರೆಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ಕಿಡಿ ಕಾರಿದರು.
ಈ ಕುರಿತು ವಿಧಾನ ಮಂಡಲದ ಉಭಯ ಸದನಗಳಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ಮಾಡಲು ನಮ್ಮ ನಾಯಕರು ಸಿದ್ಧರಿದ್ದಾರೆ. ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹಾಗೂ ದಾವಣಗೆರೆಯ ವಲಯ ಅರಣ್ಯ ಅಧಿಕಾರಿ ಮತ್ತು ಬೆಂಗಳೂರಿನ ಸಿಸಿಬಿ ಪೊಲೀಸ್ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕೆಂದು ಒತ್ತಾಯಿಸಲಾಗಿದೆ. ಮೇಲಾಧಿಕಾರಿಗಳು ಶೀಘ್ರದಲ್ಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರ ಗಮನಕ್ಕೆ ತರಲು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಮಾಜಿ ಸಚಿವ ಮಲ್ಲಿಕಾರ್ಜುನ್ ಒಡೆತನದ ರೈಸ್ ಮಿಲ್‌ನಲ್ಲಿ ವನ್ಯಜೀವಿಗಳು ಪತ್ತೆಯಾದ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದು, ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳು ಈಗ ಪೊಲೀಸ್ ಠಾಣೆ ಮೆಟ್ಟಿಲೇರಿವೆ. ಬಿಜೆಪಿ ಕಾರ್ಯಕರ್ತರು
ಎಸ್. ಎಸ್. ಮಲ್ಲಿಕಾರ್ಜುನ್ ಅವರನ್ನು ಈ ಪ್ರಕರಣದಲ್ಲಿ ಮೊದಲ ಆರೋಪಿಯನ್ನಾಗಿಸಿ ಬಂಧಿಸಬೇಕು ಎಂದು ಈಗಾಗಲೇ ಪ್ರತಿಭಟನೆ, ಅರಣ್ಯಾಧಿಕಾರಿಗಳ ಕಚೇರಿಗೆ ಮುತ್ತಿಗೆ, ಬೆಳಗಾವಿಯಲ್ಲಿ ಸಿಎಂ ಭೇಟಿ ಕೇಂದ್ರದ ವರಿಷ್ಠರ ಗಮನಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ. ಜಿಲ್ಲಾ ನಾಯಕರು ಈ ಪ್ರಕರಣಕ್ಕೆ ಇತಿಶ್ರೀ ಹಾಡಲೇಬೇಕು. ತಪ್ಪು ಎಸಗಿದವರಿಗೆ ಶಿಕ್ಷೆಯಾಗಬೇಕು. ಅಮಾಯಕರಿಗೆ ಶಿಕ್ಷೆಯಾಗಬಾರದು ಎಂಬ ವಾದ ಮುಂದಿಟ್ಟುಕೊಂಡು ಹೋರಾಟ ನಡೆಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅರ್ಧಕ್ಕೆ ಬಿಡುವ ಪ್ರಶ್ನೆಯೇ ಇಲ್ಲ. ಮಲ್ಲಿಕಾರ್ಜುನ್ ವಿರುದ್ಧ ಕಾನೂನು ಕ್ರಮ ಆಗಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಬಿಜೆಪಿಗೆ ಕಾಂಗ್ರೆಸ್ ಕಾರ್ಯಕರ್ತರ ತಿರುಗೇಟು
ವೀರಪ್ಪನ್ ಮುಖಕ್ಕೆ ಮಲ್ಲಿಕಾರ್ಜುನ್ ಭಾವಚಿತ್ರ ಅಂಟಿಸಿ, ವೀರಪ್ಪನ್ ಹೋಲುವಂತೆ ಮೀಸೆ ಅಂಟಿಸಿ ಪೋಸ್ಟರ್ ಹಾಕಿದ್ದರು. ಅದೇ ರೀತಿಯಲ್ಲಿ ಜಿಂಕೆಯ ಫೋಟವಿಟ್ಟು ನನ್ನನ್ನು ಉಳಿಸಿ ಎಂಬ ಬಿತ್ತಿ ಚಿತ್ರ ಪ್ರದರ್ಶನ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಮರ್ಯಾದೆ ತೆಗೆಯುವ ಕೆಲಸ ಮಾಡಿದ್ದಾರೆ ಎಂಬ ವಾದ ಕಾಂಗ್ರೆಸ್ ಕಾರ್ಯಕರ್ತರದ್ದಾಗಿದೆ.
ಇನ್ನು ಬಿಜೆಪಿಯವರು ಸಂಸದ ಜಿ. ಎಂ. ಸಿದ್ದೇಶ್ವರ್ ಅವರ ಬಗ್ಗೆ ಅವಹೇಳನ ಮಾಡಲಾಗಿದೆ. ಸಿದ್ದೇಶ್ವರ್, ಯುವಕರಿಗೆ ಗುಟ್ಕಾ ತಿನ್ನಿಸಿ ಆರೋಗ್ಯ ಹಾಳು ಮಾಡುತ್ತಿರುವ ನಾಯಕ, ಬೇಲಿಕೆರೆ ಅದಿರು ಪ್ರಕರಣದಲ್ಲಿ ಆರೋಪಿಯಾಗಿದ್ದರೂ ಸಹೋದರನನ್ನು ಜೈಲಿಗೆ ಕಳುಹಿಸಿದವರು, ಮೆಡಿಸನ್ ಮಾಫಿಯಾ ಅಂತೆಲ್ಲಾ ಪೋಸ್ಟರ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹರಿಬಿಟ್ಟಿದ್ದರು. ಇದನ್ನೇ ಆಧಾರವಾಗಿಟ್ಟುಕೊಂಡು ಬಿಜೆಪಿ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications