ರಾಜ್ಯದಲ್ಲಿ ಕಾಂಗ್ರೆಸ್ ಅಲ್ಲ, ಬಿಜೆಪಿ ಅಂತ್ಯವಾಗ್ತಿದೆ: ಸ್ವಪಕ್ಷದ ವಿರುದ್ಧವೇ ಎಂ.ಪಿ.ರೇಣುಕಾಚಾರ್ಯ ಗರಂ ಆಗಿದ್ದೇಕೆ?

ದಾವಣಗೆರೆ, ಆಗಸ್ಟ್‌, 29: ಕರ್ನಾಟಕದಲ್ಲಿ ನಾವು ಕಾಂಗ್ರೆಸ್ ಪಕ್ಷವನ್ನು ಕರ್ನಾಟಕ ಮುಕ್ತ ಮಾಡುತ್ತೇವೆ ಎಂದು ಹೇಳಿದ್ದೆವು. ಆದರೆ ಇಂದು ನಮ್ಮ ಪಕ್ಷಕ್ಕೆ ಅದೇ ಪರಿಸ್ಥಿತಿ ಬಂದಿದೆ ಎಂದು ಸ್ವಪಕ್ಷೀಯರ ವಿರುದ್ಧವೇ ಮಾಜಿ ಸಚಿವ ಹಾಗೂ ಹೊನ್ನಾಳಿ ಮಾಜಿ ಶಾಸಕ ಎಂ. ಪಿ. ರೇಣುಕಾಚಾರ್ಯ ಗುಡುಗಿದ್ದಾರೆ.

ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬಲವಂತವಾಗಿ ಕೆಳಗಿಳಿಸಲಾಯಿತು. ಇದರ ಪರಿಣಾಮ ಪಕ್ಷಕ್ಕೆ ಭಾರೀ ಹಾನಿಯಾಗಿದೆ. ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಕಡೆಗಣಿಸಿದ್ದೇ ಬಿಜೆಪಿಗೆ ಶಾಪವಾಗಿ ಪರಿಣಮಿಸಿದೆ ಎಂದು ಪುನರುಚ್ಚರಿಸಿದರು.

BJP is Ending in state says M.P.Renukacharya

ಸರ್ಕಾರ ರಚನೆಯಾಗಿ 100 ದಿನ ಪೂರೈಸಿದರೂ ಅಧಿಕೃತ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಲಿಲ್ಲ. ಈ ಬೆಳವಣಿಗೆ ಕಾರ್ಯಕರ್ತರಿಗೆ ನೋವುಂಟು ಮಾಡಿದೆ. ಕಾಂಗ್ರೆಸ್ ಮಾಡುವ ಆರೋಪಗಳಿಗೆ ನಾವು ಉತ್ತರ ಕೊಡಲಾಗದ ಸ್ಥಿತಿಗೆ ಬಂದಿದ್ದೇವೆ ಎಂದು ವಿಷಾದ ವ್ಯಕ್ತಪಡಿಸಿದರು.

DCM DK Shivakumar: ಗ್ಯಾರಂಟಿ ಜಾರಿ: ಚಾಮುಂಡೇಶ್ವರಿಗೆ ಹರಕೆ ಸಲ್ಲಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?
ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರವನ್ನು ನಾನು ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಪ್ರತಿಯೊಂದು ಹಳ್ಳಿಗೂ ತಲುಪಿಸುವ ಕೆಲಸವನ್ನು ಮಾಡಿದ್ದೇನೆ. ನಾನು ಬಿಜೆಪಿ ಬಿಡುತ್ತೇನೆಂದು ಎಲ್ಲೂ ಹೇಳಿಲ್ಲ. ಬಿಜೆಪಿ ಕಚೇರಿಯಿಂದ ರೇಣುಕಾಚಾರ್ಯ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ ನಡೆಸಿದರು.

ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತೇನೆಂದು ಎಲ್ಲೂ ಹೇಳಿಲ್ಲಾ. ಕ್ಷೇತ್ರದ ಸಮಸ್ಯೆಗಾಗಿ ಕಾಂಗ್ರೇಸ್ ನಾಯಕರನ್ನು ಭೇಟಿ ಮಾಡಿದರೆ ತಪ್ಪೇನು? ಎಂದು ರೇಣುಕಾಚಾರ್ಯ ಪ್ರಶ್ನಿಸಿದರು. ಇನ್ನು ರಾಜ್ಯದ ಅಧ್ಯಕ್ಷರ ಅವಧಿ ಮುಗಿದರೂ ಇನ್ನೂ ರಾಜ್ಯಾಧ್ಯಕ್ಷರ ನೇಮಕ ಮಾಡಿಲ್ಲ. ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಇದರಿಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಮನಸ್ಸಿಗೆ ಬಹಳ ಬೇಸರವಾಗಿದೆ ಎಂದು ತಿಳಿಸಿದರು.

ಕೆಲವರು ಪತ್ರಿಕಾ ಹೇಳಿಕೆ ನೀಡುವ ಟೈಗರ್ಸ್‍ಗಳಾಗಿದ್ದಾರೆ. ಪಕ್ಷ ನನಗೆ ತಾಯಿ ಸಮಾನ. ಪಕ್ಷ ಬಿಡುವ ಪ್ರಶ್ನೇಯೇ ಇಲ್ಲ. ಕೆಲ ನಾಯಕರ ನಡೆಯಿಂದ ನನ್ನ ಮನಸ್ಸಿಗೆ ನೋವುಂಟಾಗಿದೆ. ಅದನ್ನು ಖಂಡಿಸುತ್ತೇನೆ ಎಂದರು.

ರೇಣುಕಾಚಾರ್ಯ ಬೆಳೆಯುತ್ತಾನೆಂದು ತುಳಿಯುವ ಕೆಲಸ ಮಾಡಿದರು. ನಾನು ಮಾತನಾಡಿದ ತಕ್ಷಣ ರೇಣುಕಾಚಾರ್ಯ ಪಕ್ಷ ಬಿಡುತ್ತಾರೆಂದು ಸುಳ್ಳು ಹಬ್ಬಿಸುತ್ತಿದ್ದಾರೆ. ಯಾರು ರಾಜಕೀಯವಾಗಿ ಬೆಳೆಯುತ್ತಾರೋ ಅವರನ್ನು ಕತ್ತರಿಸುತ್ತಾರೆ, ಯಾರು ಬಕೆಟ್ ಹಿಡಿಯುತ್ತಾರೋ ಅವರನ್ನು ಬೆಳೆಸುತ್ತಾರೆ ಎಂದು ಕಿಡಿಕಾರಿದರು. ಅಲ್ಲದೆ ಬಿ.ಎಸ್.ಯಡಿಯೂರಪ್ಪನವರ ಪುತ್ರ ಹಾಗೂ ಶಾಸಕ ವಿಜಯೇಂದ್ರ ಅವರಿಗೆ ಪಕ್ಷವನ್ನು ಮುನ್ನಡೆಸುವ ಸಾಮರ್ಥ್ಯವಿದೆ. ಆದರೆ ಅವರಿಗೆ ಅವಕಾಶ ಕೊಡುತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+