ಬಿಜೆಪಿ 30 ಸ್ಥಾನ ಗೆಲ್ಲೋದಿಲ್ಲ ಎಂಬ ವರದಿ ಇದೆ; ಮಾಜಿ ಸಚಿವರ ಬಾಂಬ್!
ದಾವಣಗೆರೆ, ಸೆಪ್ಟೆಂಬರ್ 29: "ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 20 ರಿಂದ 30 ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂಬುದು ಆ ಪಕ್ಷವೇ ಸಂಸ್ಥೆಯೊಂದರಿಂದ ನಡೆಸಿರುವ ಸಮೀಕ್ಷೆಯಲ್ಲಿ ತಿಳಿದು ಬಂದಿದೆ. ಈ ಕಾರಣಕ್ಕೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮುಂದಿಟ್ಟುಕೊಂಡು ನೀವೇ ಪಕ್ಷವನ್ನು ಬೆಳೆಸಿ, ಮುನ್ನೆಡೆಸಿ ಎಂಬುದಾಗಿ ಹೇಳಿದ್ದಾರೆ. ನೀವೇ ಮುಖ್ಯಮಂತ್ರಿ ಇದ್ದ ಹಾಗೆ ಎಂದು ಬಿಜೆಪಿ ವರಿಷ್ಠರೇ ಹೇಳಿದ್ದಾರೆ ಎನ್ನುವ ಮಾಹಿತಿ ಇದೆ" ಎಂದು ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೊಸ ಬಾಂಬ್ ಸಿಡಿಸಿದರು.
ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ಬೆಲೆ ಏರಿಕೆ ವಿರುದ್ಧದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, "ಬಿಜೆಪಿಯವರ ಮಾತು ನಂಬುವಷ್ಟು ಜನರೇನೂ ದಡ್ಡರಿಲ್ಲ. ಅವರೂ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ. ಇದರಲ್ಲಿ ಎರಡು ಮಾತಿಲ್ಲ" ಎಂದು ಭವಿಷ್ಯ ನುಡಿದರು.
"ಬಿಜೆಪಿಯವರು ಈಗಾಗಲೇ ಕೆಲವು ಕಡೆ ವಿಚಾರ ಮಾಡಿದ್ದಾರೆ. ಅವರಿಗೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಎಷ್ಟು ಸೀಟು ಬರಬಹುದು ಎಂಬುದಾಗಿ ಆ ಪಕ್ಷ ಸಂಸ್ಥೆಯೊಂದರಿಂದ ಸರ್ವೇ ನಡೆಸಿತ್ತು. ಈಗ ಬಂದಿರುವ ವರದಿಯಿಂದ ಎಚ್ಚೆತ್ತಿದ್ದಾರೆ" ಎಂದರು.

"ಬೆಲೆ ಏರಿಕೆ ಎಷ್ಟಾಗಿದೆ ಎಂಬುದು ಅವರಿಗೆ ಗೊತ್ತಿದೆ. ಹಾಗಾಗಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಅಧಿಕಾರಕ್ಕೆ ತರಲು ಶ್ರಮಿಸಿ ಎಂದು ಕರೆ ನೀಡಿದ ಅವರು, ಬಿಜೆಪಿಯವರು ದಾವಣಗೆರೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬ ಹೇಳಿಕೆ ಕೊಟ್ಟಿರುವುದನ್ನು ಗಮನಿಸಿದ್ದೇನೆ. ಎಲ್ಲಾ ಕ್ಷೇತ್ರಗಳಲ್ಲಿ ಸೋಲುತ್ತೇವೆ ಎಂದು ಹೇಳಬೇಕಿತ್ತೇ ವಿನಾ ಗೆಲ್ಲುತ್ತೇವೆ ಎಂದು ತಪ್ಪಾಗಿ ಹೇಳಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವಂತೆ ಮಾಡಲು ಜನರು ಕಾಂಗ್ರೆಸ್ ಮತ ಹಾಕಬೇಕು" ಎಂದು ಶಾಮನೂರು ಶಿವಶಂಕರಪ್ಪ ಮನವಿ ಮಾಡಿದರು.
"ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಮತ ಇಲ್ಲ, ಅಸೂಯೆಯೂ ಇಲ್ಲ. ಎಲ್ಲರೂ ಒಟ್ಟಾಗಿದ್ದೇವೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ನಾಯಕರು ಶ್ರಮಿಸುತ್ತಾರೆ. ನಾವು ಸಹ ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗೋಣ" ಎಂದು ಶಾಮನೂರು ಶಿವಶಂಕರಪ್ಪ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.
ಸಿದ್ದರಾಮಯ್ಯ ಯಾಕೆ ಬರಲಿಲ್ಲ?; ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ದಾವಣಗೆರೆ ಪ್ರವಾಸ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಆದರೆ ಅವರು ಬರಲೇ ಇಲ್ಲ. ಕಾಂಗ್ರೆಸ್ ಏರ್ಪಡಿಸಿದ್ದ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಎದುರು ಹಿಂದುಳಿದ ವರ್ಗಗಳ ಜಾತಿ ಒಕ್ಕೂಟ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪಾಲ್ಗೊಳ್ಳಬೇಕಿತ್ತು.
ಸಿದ್ದರಾಮಯ್ಯ ಬಾರದ ಕಾರಣ ಹೆಚ್ಚಾಗಿ ಜನರು ಸೇರಿರಲಿಲ್ಲ. ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಶಾಮನೂರು ಶಿವಶಂಕರಪ್ಪ, "ಸಿದ್ದರಾಮಯ್ಯನವರು ಬಂದಿದ್ದರೆ ಚೆನ್ನಾಗಿತ್ತು. ಆದರೆ ಹವಾಮಾನ ವೈಪರೀತ್ಯ ಕಾರಣದಿಂದ ಬರಲು ಆಗಿಲ್ಲ. ಹಿರಿಯೂರಿನಲ್ಲಿ ಜಾಸ್ತಿ ಮಳೆ ಇದ್ದ ಕಾರಣ ಹೆಲಿಕ್ಯಾಪ್ಟರ್‌ನಲ್ಲಿ ಬರಲು ಆಗಿಲ್ಲ. ನಾವೆಲ್ಲರೂ ಸೇರಿ ಕೇಂದ್ರ ಸರ್ಕಾರದ ಜನ ವಿರೋಧಿ, ರೈತ ವಿರೋಧಿ ನೀತಿ ಖಂಡಿಸೋಣ" ಎಂದರು.
ಸುಳ್ಳು ಹೇಳೋದರಲ್ಲಿ ನಿಸ್ಸೀಮರು; "ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಅನುಯಾಯಿಗಳಾಗಿರುವ ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ಅಷ್ಟೇ ನಿಸ್ಸೀಮರಾಗಿದ್ದಾರೆ. ಒಂದು ಸುಳ್ಳನ್ನು ಹತ್ತು ಸಾರಿ ಹೇಳಿದರೆ ಅದೇ ನಿಜವಾಗುತ್ತದೆ ಎಂದು ಭಾವಿಸಿದ್ದಾರೆ. ಈ ವ್ಯವಸ್ಥೆಯನ್ನೇ ಮಾಡಿಕೊಂಡು ಬರುತ್ತಿದ್ದಾರೆ. ಕೃಷಿ ವಿರೋಧಿ ನೀತಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಪಂಜಾಬ್, ಹರ್ಯಾಣ ಹಾಗೂ ದೆಹಲಿಯಲ್ಲಿ ರೈತರು ಹೋರಾಟ ಮಾಡುತ್ತಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಸೌಜನ್ಯಕ್ಕಾದರೂ ಅವರ ಜೊತೆ ಮಾತುಕತೆ ನಡೆಸಿಲ್ಲ. ಸಚಿವರು ಹಾಗೂ ಕಾರ್ಯದರ್ಶಿಗಳನ್ನು ಕಳುಹಿಸಿ ಮಾತುಕತೆ ನಡೆಸಿದ್ದಾರೆ. ಬೇಡಿಕೆ ಈಡೇರಿಸುವ ಬಗ್ಗೆಯಾಗಲೀ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಂಡಿಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದರು.
"ಪೆಟ್ರೋಲ್, ಡೀಸೆಲ್ ಬೆಲೆ ಮಾತ್ರ ಜಾಸ್ತಿಯಾಗಿಲ್ಲ. ಎಲ್ಲಾ ಪದಾರ್ಥಗಳ ರೇಟ್ ಕೂಡ ಹೆಚ್ಚಿದೆ. ಕೇಂದ್ರ ಸರ್ಕಾರಕ್ಕೆ ಎಲ್ಲಾ ವಸ್ತುಗಳ ದರ ಹೆಚ್ಚಾದರೆ ಜಿ ಎಸ್ ಟಿ ಯೂ ಜಾಸ್ತಿನೇ ಹೋಗುತ್ತದೆ. ಹಣವೂ ಬರುತ್ತದೆ. ಇದರಿಂದ ಭ್ರಷ್ಟಾಚಾರ ಮಾಡಲು ಅವರಿಗೆ ಸುಲಭವಾಗುತ್ತದೆ" ಎಂದು ಮಾಜಿ ಸಚಿವರು ಆರೋಪಿಸಿದರು.
ಕಾಂಗ್ರೆಸ್ ಪ್ರತಿಭಟನೆ; ಇನ್ನು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಪಕ್ಷದ ವಿವಿಧ ಘಟಕಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಕವ್ಯಕ್ತಪಡಿಸಲಾಯಿತು. ಬೆಲೆ ಏರಿಕೆ ಬಗ್ಗೆ ಸಂಸದ ಜಿ. ಎಂ. ಸಿದ್ದೇಶ್ವರ್ ಉಡಾಫೆ ಹೇಳಿಕೆ ಕೊಡುವ ಮೂಲಕ ಜನಪ್ರತಿನಿಧಿ ಎಂಬುದನ್ನೇ ಮರೆತಿದ್ದಾರೆ. ನಾನು ಚೆಡ್ಡಿ ಹಾಕೋವಾಗ ದರ ಕಡಿಮೆ ಇತ್ತು. ನಾನು ಪ್ಯಾಂಟ್ ಹಾಕಲು ಶುರುಮಾಡಿದ್ದೇನೆ. ಈಗ ದರ ಜಾಸ್ತಿಯಾಗಿದೆ ಎಂಬ ಹೇಳಿಕೆ ನೀಡಿದ್ದಾರೆ. ಚಡ್ಡಿ ಹಾಕದಿದ್ದರೂ ಪರವಾಗಿಲ್ಲ ಮೊದಲು ಬೆಲೆ ಏರಿಕೆ ನಿಯಂತ್ರಿಸಲು ಕ್ರಮ ಕೈಗೊಳ್ಳಲಿ ಎಂದು ಪ್ರತಿಭಟನಾಕಾರರು ವ್ಯಂಗ್ಯವಾಡಿದರು.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election












Click it and Unblock the Notifications