ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ತೆಕ್ಕೆಗೆ ದಾವಣಗೆರೆ ಪಾಲಿಕೆ, ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ಸಿಗರು

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಫೆಬ್ರವರಿ 19: ತೀವ್ರ ಕುತೂಹಲ ಕೆರಳಿಸಿದ್ದ ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಪಾಲಿಕೆ ಸದಸ್ಯ ಬಿ.ಜಿ.ಅಜಯ್ ಕುಮಾರ್ ಮೇಯರ್ ಆಗಿಯೂ, ಸೌಮ್ಯ ನರೇಂದ್ರ ಕುಮಾರ್ ಉಪಮೇಯರ್ ಆಗಿಯೂ ಆಯ್ಕೆಯಾಗಿದ್ದಾರೆ. ಇದರಿಂದ ಪಾಲಿಕೆ ಅಧಿಕಾರ ಬಿಜೆಪಿ ತೆಕ್ಕೆಗೆ ಬಂದಿದೆ.

ಇದರಿಂದ ಕೋಪಗೊಂಡಿರುವ ಕಾಂಗ್ರೆಸ್ ನಾಯಕರು, ಜಿಲ್ಲಾ ಚುನಾವಣಾಧಿಕಾರಿ ವಿ.ಪಿ. ಇಕ್ಕೇರಿ ಹಾಗೂ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೇಯರ್-ಉಪಮೇಯರ್ ಚುನಾವಣೆ: MLC ಮತದಾನಕ್ಕೆ ಅವಕಾಶ, ಡಿಸಿಗೆ ಧಿಕ್ಕಾರಮೇಯರ್-ಉಪಮೇಯರ್ ಚುನಾವಣೆ: MLC ಮತದಾನಕ್ಕೆ ಅವಕಾಶ, ಡಿಸಿಗೆ ಧಿಕ್ಕಾರ

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಕಾಂಗ್ರೆಸ್​ನ ಆರು ಮಂದಿ ಎಂಎಲ್​​ಸಿಗಳು, 19 ಕಾರ್ಪೊರೇಟರ್​​ಗಳು ಆಗಮಿಸಿದ್ದರು. ಆದರೆ ಕೈ ಪಾಲಿಕೆ ಸದಸ್ಯರಾದ ಶ್ರೀನಿವಾಸ್, ಶ್ವೇತಾ ಶ್ರೀನಿವಾಸ್, ಯಶೋದಾ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಅಧಿಕಾರಕ್ಕೇರುವುದು ಬಹುತೇಕ ಖಚಿತವಾಯಿತು. ಇಕ್ಕೇರಿ ಅಧ್ಯಕ್ಷತೆಯಲ್ಲಿ ಚುನಾವಣಾ ಪ್ರಕ್ರಿಯೆ ಆರಂಭವಾಯಿತು. ಈ ವೇಳೆ ಕಾಂಗ್ರೆಸ್ ಮುಖಂಡರು ಚುನಾವಣಾ ಪಟ್ಟಿಯಲ್ಲಿ ಸ್ಥಳೀಯರಲ್ಲದ ಎಂಎಲ್​​ಸಿಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ಆರೋಪಿಸಿದರು.

BJP Wins In Davanagere Municipality Mayor And Deputy Mayor Election

ದಾವಣಗೆರೆ; ಕೆಎಸ್ಆರ್‌ಟಿಸಿಯಿಂದ ಶಿರಡಿ, ಶ್ರೀಶೈಲಕ್ಕೆ ಹೊಸ ಬಸ್

ಜಿಲ್ಲಾಧಿಕಾರಿ ಈ ಬಗ್ಗೆ ತನಿಖೆ ನಡೆಸಿದ್ದು, ಮೇಲ್ನೋಟಕ್ಕೆ ಚುನಾವಣೆಗೆ ಮಾತ್ರ ಸೇರಿಸಲಾಗಿದೆ ಎಂಬುದು ಸ್ಪಷ್ಟವಾದರೂ ಮತದಾನಕ್ಕೆ ಅವಕಾಶ ಕೊಟ್ಟಿರುವುದು ಕಾನೂನು ಬಾಹಿರ ಎಂದು ಆರೋಪಿಸಿ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದರು. ಶಾಮನೂರು ಶಿವಶಂಕರಪ್ಪ ಮಾತನಾಡಿ, "ಕಾಂಗ್ರೆಸ್​​ನ ಮೂವರು ಸದಸ್ಯರನ್ನು ಬಿಜೆಪಿ ಹಣ ಕೊಟ್ಟು ಖರೀದಿಸಿದೆ. ಈ ಮೂಲಕ ವಾಮಮಾರ್ಗದಿಂದ ಅಧಿಕಾರಕ್ಕೇರಿದೆ. ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದಾರೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.

English summary
Bjp members B.G.Ajaykumar and Sowmya Narendra kumar elected as mayor and deputy mayor in davanagere municipality Election today
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X