• search
  • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಜ್ಯಕ್ಕೆ ಅಚ್ಛೇದಿನ್ ಯಾವಾಗ ಬರುತ್ತೆ?, ಬಿಎಸ್‌ವೈ ಉತ್ತರ ಹೇಳಿದ್ರು!

|

ದಾವಣಗೆರೆ, ಡಿಸೆಂಬರ್ 27 : 'ಸಿದ್ದರಾಮಯ್ಯ ಅವರೇ ಕರ್ನಾಟಕದ ಚುನಾವಣೆಯಲ್ಲಿ ನಿಮ್ಮನ್ನು ಸೋಲಿಸಿ, ಮನೆಗೆ ಕಳಿಸಿದ ಮೇಲೆ ನಮ್ಮ ರಾಜ್ಯಕ್ಕೆ ಅಚ್ಛೇದಿನ್ ಬರುತ್ತದೆ' ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.

ಕರ್ನಾಟಕ ಬಿಜೆಪಿಯ ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಸಮಾವೇಶ ಬುಧವಾರ ದಾವಣಗೆರೆಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಿತು. ಬಿ.ಎಸ್.ಯಡಿಯೂರಪ್ಪ, ಕ್ಷೇತ್ರದ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮುಂತಾದವರು ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ದಾವಣಗೆರೆಯಲ್ಲಿ ಸಿದ್ದರಾಮಯ್ಯ ಹೇಳಿದ್ದೇನು?

ಸಮಾವೇಶ ಉದ್ದೇಶಿಸಿ ಮಾತನಾಡಿ ಯಡಿಯೂರಪ್ಪ, 'ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಏಕೆ ಅವಕಾಶ ನೀಡಲಿಲ್ಲ?. ರೈತರನ್ನು ಕರೆದುಕೊಂಡು ಬಂದು ಬಿಜೆಪಿ ಕಚೇರಿ ಮುಂದೆ ನೀವು ಪ್ರತಿಭಟನೆ ಮಾಡಿಸಲಿಲ್ಲವೇ?' ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.

ಮಹದಾಯಿ : ಸಿದ್ದರಾಮಯ್ಯಗೆ ಶೋಭಾ ಕರಂದ್ಲಾಜೆ ಪ್ರಶ್ನೆಗಳು

'ಹುಬ್ಬಳ್ಳಿ ಅಥವ ನವಲಗುಂದದಲ್ಲಿ 1 ಲಕ್ಷ ರೈತರನ್ನು ಸೇರಿಸುವೆ. ಆ ವೇದಿಕೆಗೆ ನೀವು ಬನ್ನಿ ಸಿದ್ದರಾಮಯ್ಯ ಅವರೇ ರಾಜ್ಯದ ರೈತರಿಗೆ ಯಾರು ಹೆಚ್ಚು ಕೊಡುಗೆ ನೀಡಿದ್ದಾರೆ? ಎಂಬುದನ್ನು ಅಲ್ಲಿಯೇ ಚರ್ಚೆ ಮಾಡೋಣ' ಎಂದು ಸವಾಲು ಹಾಕಿದರು.

ಹೊನ್ನಾಳಿ ಕ್ಷೇತ್ರದಲ್ಲಿ 2008ರ ಚುನಾವಣೆಯಲ್ಲಿ ಗೆದ್ದು ಸಚಿವರಾಗಿದ್ದ ಎಂ.ಪಿ.ರೇಣುಕಾಚಾರ್ಯ ಅವರು 2013ರ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಕಾಂಗ್ರೆಸ್‌ನ ಡಿ.ಜಿ.ಶಾಂತನಗೌಡ ವಿರುದ್ಧ ಸೋಲು ಅನುಭವಿಸಿದ್ದರು.

150ರಲ್ಲಿ ಹೊನ್ನಾಳಿ ಕ್ಷೇತ್ರವೂ ಸೇರಿದೆ

150ರಲ್ಲಿ ಹೊನ್ನಾಳಿ ಕ್ಷೇತ್ರವೂ ಸೇರಿದೆ

ಸಮಾವೇಶದಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ‘ಕಳೆದ ಚುನಾವಣೆಯಲ್ಲಿ ಆಕಸ್ಮಿಕವಾಗಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವಾಗಿದೆ. 2018ರ ಚುನಾವಣೆಯಲ್ಲಿ ಹೊನ್ನಾಳಿಯಲ್ಲಿ ಬಿಜೆಪಿ ಗೆಲ್ಲುತ್ತದೆ. ರಾಜ್ಯದಲ್ಲಿ ಪಡೆಯುವ 150 ಸ್ಥಾನದಲ್ಲಿ ಹೊನ್ನಾಳಿಯೂ ಒಂದಾಗಲಿದೆ' ಎಂದರು.

ನಾಲ್ಕು ತಿಂಗಳ ಸಮಯ ಕೊಡಿ

ನಾಲ್ಕು ತಿಂಗಳ ಸಮಯ ಕೊಡಿ

ಸಮಾವೇಶ ಉದ್ದೇಶಿಸಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ‘ಕ್ಷೇತ್ರದ ಯುವಕರು ನಾಲ್ಕು ತಿಂಗಳ ಸಮಯ ಕೊಡಿ. ಪ್ರತಿ ಬೂತ್‌ನಲ್ಲಿ ಕನಿಷ್ಠ 70 ಶೇ ಓಟು ಬರುವಂತೆ ಕೆಲಸ ಮಾಡಿ' ಎಂದು ಕರೆ ನೀಡಿದರು.

ಅಚ್ಛೇದಿನ್ ಯಾವಾಗ ಬರುತ್ತದೆ?

ಅಚ್ಛೇದಿನ್ ಯಾವಾಗ ಬರುತ್ತದೆ?

'ಸಿದ್ದರಾಮಯ್ಯ ಅವರು ಕರ್ನಾಟಕಕ್ಕೆ ಅಚ್ಚೇದಿನ್ ಯಾವಾಗ ಬರುತ್ತದೆ? ಎಂದು ನನ್ನನ್ನು ಕೇಳುತ್ತಾರೆ. ಕರ್ನಾಟಕದ ಚುನಾವಣೆಯಲ್ಲಿ ನಿಮ್ಮನ್ನು ಸೋಲಿಸಿ ಮನೆಗೆ ಕಳಿಸಿದಾಗ ರಾಜ್ಯಕ್ಕೆ ಅಚ್ಚೇದಿನ್ ಬರುತ್ತದೆ' ಎಂದು ಯಡಿಯೂರಪ್ಪ ಹೇಳಿದರು.

ರೇಣುಕಾಚಾರ್ಯರಿಗೆ ಓಟು ಕೊಡಿ

ರೇಣುಕಾಚಾರ್ಯರಿಗೆ ಓಟು ಕೊಡಿ

ಸಮಾವೇಶದಲ್ಲಿ ಮಾತನಾಡಿ ಬಿ.ಎಸ್.ಯಡಿಯೂರಪ್ಪ ಅವರು ಎಂ.ಪಿ.ರೇಣುಕಾಚಾರ್ಯ ಅವರಿಗೆ ಓಟು ಕೊಡಿ ಎಂದು ಹೇಳುವ ಮೂಲಕ ಪರೋಕ್ಷವಾಗಿ ಅಭ್ಯರ್ಥಿಯನ್ನು ಘೋಷಣೆ ಮಾಡಿದರು.

ರೇಣುಕಾಚಾರ್ಯ ಅವರು ಸೋತಿದ್ದರು

ರೇಣುಕಾಚಾರ್ಯ ಅವರು ಸೋತಿದ್ದರು

2013ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಎಂ.ಪಿ.ರೇಣುಕಾಚಾರ್ಯ ಸೋತಿದ್ದರು. 78,789 ಮತಗಳನ್ನು ಪಡೆದು ಕಾಂಗ್ರೆಸ್‌ನ ಡಿ.ಜೆ.ಶಾಂತನಗೌಡ ಅವರು ಗೆಲುವು ಸಾಧಿಸಿದ್ದರು. ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಂ.ಪಿ.ರೇಣುಕಾಚಾರ್ಯ ಅವರು 60,051 ಮತಗಳನ್ನು ಪಡೆದು 2ನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದರು.

English summary
Karnataka BJP president B.S.Yeddyurappa addressed Nava Karnataka Parivartan Yatra in Honnali assembly constituency Davanagere on December 27, 2017.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more