ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆ ದುಗ್ಗಮ್ಮ ಜಾತ್ರೆಯಲ್ಲಿ ಕೊನೆಗೂ ಕೋಣ ಬಲಿ!

|
Google Oneindia Kannada News

ದಾವಣಗೆರೆ, ಮಾರ್ಚ್ 04: ದಾವಣಗೆರೆಯ ನಗರ ದೇವತೆ ದುಗ್ಗಮ್ಮನ ಜಾತ್ರೆ ಎರಡು ವರ್ಷಗಳಿಗೊಮ್ಮೆ ನಡೆಯಲಿದ್ದು, ಪ್ರಾಣಿ ಬಲಿ ಸಂಪೂರ್ಣ ‌ನಿಷೇಧ ಮಾಡಲಾಗಿತ್ತು. ಅಲ್ಲದೇ ದೇವಸ್ಥಾನ‌ ಸುತ್ತ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಪ್ರಾಣಿ ಬಲಿ‌ ನಿಷೇಧದ ನಡುವೆಯೂ ದಾವಣಗೆರೆ ನಗರ ದುಗ್ಗಮ್ಮನಿಗೆ ಕೋಣ ಬಲಿ ನೀಡಲಾಗಿದೆ.

ನಗರದ ದುಗ್ಗಮ್ಮ ದೇವಸ್ಥಾನ ಸಮೀಪದಲ್ಲೇ ಇರುವ ಸೀಮೆಎಣ್ಣೆ ಬಂಕ್ ಬಳಿಯಲ್ಲಿ ಕೋಣವನ್ನು ಬಲಿ ನೀಡಲಾಗಿದೆ ಎನ್ನಲಾಗಿದೆ. ಕೋಣ ಬಲಿ ನೀಡದಂತೆ ಜಿಲ್ಲಾಡಳಿತ ಕಟ್ಟು‌ ನಿಟ್ಟಿನ ಕ್ರಮ ಕೈಗೊಂಡಿತ್ತು. ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರು ರಾತ್ರಿಯೂ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.

ದುಗ್ಗಮ್ಮನ ಜಾತ್ರೆಯಲ್ಲಿ ಅರೆ ಬೆತ್ತಲೆ ಹರಕೆ; ತರಾಟೆ ತೆಗೆದುಕೊಂಡ ಡಿಸಿದುಗ್ಗಮ್ಮನ ಜಾತ್ರೆಯಲ್ಲಿ ಅರೆ ಬೆತ್ತಲೆ ಹರಕೆ; ತರಾಟೆ ತೆಗೆದುಕೊಂಡ ಡಿಸಿ

ಅದ್ಯಾಗೂ ಬಿಗಿ ಭದ್ರತೆ ನಡುವೆಯೂ ಕೋಣ ಬಲಿ ನೀಡಲಾಗಿದೆ. ದೇವಸ್ಥಾನ ಆವರಣದಿಂದ ದೂರ ಭಕ್ತರು ಬಲಿ‌ ನೀಡಿದ್ದಾರೆ. ಭಕ್ತರು ಜಾತ್ರೆಯಲ್ಲಿ ಕೋಣ ಬಲಿ ನೀಡಿದರೆ ಮಾತ್ರ ತಾಯಿ ಸಂತುಷ್ಟಿಯಾಗುತ್ತಾಳೆ ಎನ್ನುವ ನಂಬಿಕೆಯೊಂದಿಗೆ ದೇವಸ್ಥಾನ ಪ್ರದೇಶ ಬಿಟ್ಟು ಇನ್ನೊಂದು ಪ್ರದೇಶದಲ್ಲಿ ಊಧೋ ಊಧೋ ಎಂದು ಭಕ್ತರು ಕೋಣವನ್ನು ಬಲಿ ಕೊಟ್ಟಿದ್ದಾರೆ ಎನ್ನಲಾಗಿದೆ.

Buffalo Slaughter Happened Inbetween Tight Security In Duggamma Jatre

ಬಳಿಕ ಕೋಣದ ರಕ್ತದಲ್ಲಿ ಚರಗ ಹಾಕಿದ್ದಾರೆ. ದುಗ್ಗಮ್ಮ ದೇವಿಗೆ ಬಿಟ್ಟಂತಹ ಕೋಣದಿಂದ ಸಿರಂಜ್ ಮೂಲಕ ವೈದ್ಯರು ರಕ್ತವನ್ನು ತೆಗೆದು ದುಗ್ಗಮ್ಮ ದೇವಿಗೆ ಅರ್ಪಿಸಿದರು. ದೇವಸ್ಥಾನದ ಆವರಣದಲ್ಲಿ ಕೋಣವನ್ನು ಬಲಿ ನೀಡುತ್ತಾರೆ ಎನ್ನುವ ಮಾಹಿತಿಯಿಂದ ಇಡೀ ರಾತ್ರಿ ದೇವಸ್ಥಾನ ಆವರಣದಲ್ಲಿ ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಹಲವು ಅಧಿಕಾರಿಗಳು ಜಾಗರಣೆ ಮಾಡಿದರು.

 ದುಗ್ಗಮ್ಮನ ಜಾತ್ರೆಯಲ್ಲಿ ಬಾಡೂಟಕ್ಕೆ ಬೆಣ್ಣೆ ನಗರಿ ರೆಡಿ, ಕೋಣ ಬಲಿ ನಡೆಯದಂತೆ ಕಟ್ಟೆಚ್ಚರ ದುಗ್ಗಮ್ಮನ ಜಾತ್ರೆಯಲ್ಲಿ ಬಾಡೂಟಕ್ಕೆ ಬೆಣ್ಣೆ ನಗರಿ ರೆಡಿ, ಕೋಣ ಬಲಿ ನಡೆಯದಂತೆ ಕಟ್ಟೆಚ್ಚರ

ಆದರೂ ಕೂಡ ದೇವಸ್ಥಾನದಿಂದ ದೂರದಲ್ಲಿ ದೇವರ ಕೋಣವನ್ನು ಬಲಿ‌ಕೊಟ್ಟು ದೇವತೆಗೆ ಭಕ್ತಿಯಿಂದ ಕೋಣದ ತಲೆ ಮೇಲೆ ದೀಪವಿಟ್ಟು ನೈವೇದ್ಯ ಅರ್ಪಿಸಿದರು.

English summary
Davanagere Duggamma Devotees have Buffalo Slaughter away from the temple.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X