ಹೊನ್ನಾಳಿ ಶಾಸಕ ರೇಣುಕಾಚಾರ್ಯಗೆ ಗುಮ್ಮಿದ ಗೂಳಿ

ದಾವಣಗೆರೆ, ನವೆಂಬರ್ 1: ಶಾಸಕ ಎಂ.ಪಿ ರೇಣುಕಾಚಾರ್ಯಗೆ ಗೂಳಿಯೊಂದು ಗುದ್ದಿದ್ದು, ಕೂದಲೆಳೆ ಅಂತರದಿಂದ ಪಾರಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ನಡೆದಿದೆ.

ದೀಪಾವಳಿ ಹಬ್ಬದ ಪ್ರಯುಕ್ತ ದೊಡ್ಡೇರಿ ಗ್ರಾಮಸ್ಥರು ಗ್ರಾಮದಲ್ಲಿ ಹೋರಿ ಬೆದರಿಸುವ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶಾಸಕ ರೇಣುಕಾಚಾರ್ಯ ಅವರನ್ನು ಆಹ್ವಾನಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ರೇಣುಕಾಚಾರ್ಯ ಅವರು ಇಂದು ಹೋಗಿದ್ದರು. ಗ್ರಾಮಕ್ಕೆ ರೇಣುಕಾಚಾರ್ಯ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಭುಜದ ಮೇಲೆ ಹೊತ್ತುಕೊಂಡು ಊರೊಳಗೆ ಸಾಗಿದ್ದಾರೆ.

Bull Hit MP Renukacharya In Davanagere

ಹೀಗೆ ಅಭಿಮಾನಿಗಳು ಹೆಗಲ ಮೇಲೆ ಹೊತ್ತುಕೊಂಡು ಊರಿನೊಳಗೆ ಮೆರವಣಿಗೆ ಮಾಡುತ್ತಿದ್ದ ಸಂದರ್ಭ ಇದ್ದಕ್ಕಿದ್ದಂತೆ ಜನರ ಕಿರುಚಾಟಕ್ಕೆ ಬೆದರಿ ಏಕಾಏಕಿ ಗೂಳಿಯೊಂದು ಓಡಿಬಂದಿದೆ. ಮಧ್ಯದಲ್ಲಿದ್ದ ಶಾಸಕ ರೇಣುಕಾಚಾರ್ಯ ಅವರ ಬದಿಗೆ ಗುದ್ದಿದೆ. ಗೂಳಿ ಬಂದ ರಭಸಕ್ಕೆ ರೇಣುಕಾಚಾರ್ಯ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ. ಸಣ್ಣ ಪುಟ್ಟ ಗಾಯಗಳಾಗಿದ್ದು, ಬೆಂಬಲಿಗರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+