• search
  • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆಯಲ್ಲಿಅಪಘಾತ: ಬೆಳಗಾವಿ ಬಸವನಕುಡುಚಿ ASI ಪುತ್ರ ದಾರುಣ ಸಾವು

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ನವೆಂಬರ್‌ 27: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಸಹೋದರ ರಮೇಶ್ ಪುತ್ರ ಚಂದ್ರಶೇಖರ್ ಸಾವಿ‌ನ ನಿಗೂಢತೆ ಇನ್ನೂ ಹೊರಬಂದಿಲ್ಲ. ಇದೇ ರೀತಿಯ ಮತ್ತೊಂದು ಘಟನೆ ಮರುಕಳಿಸಿದೆ.

ಹೊನ್ನಾಳಿಯಲ್ಲಿ ಕಾರೊಂದು ಹಳ್ಳಕ್ಕೆ ಬಿದ್ದಿದ್ದು, ಚಂದ್ರಶೇಖರ್ ಪತ್ತೆಯಾದ ರೀತಿಯಲ್ಲಿ ವ್ಯಕ್ತಿ ಮೃತದೇಹ ಕಾರಿನ ಹಿಂಬದಿ ಸೀಟ್‌ನಲ್ಲಿ ಪತ್ತೆಯಾಗಿದೆ. ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ‌ ಬಳಿ‌ ಈ ಘಟನೆ ನಡೆದಿದೆ.

ವಿಧಾನಸಭೆ ಚುನಾವಣೆ: ಹೈಕಮಾಂಡ್‌ ಟಿಕೆಟ್ ಕೊಟ್ಟರೆ ಕಣಕ್ಕಿಳಿಯುತ್ತೇನೆ ಎಂದ ಬಿಜೆಪಿ ಶಾಸಕವಿಧಾನಸಭೆ ಚುನಾವಣೆ: ಹೈಕಮಾಂಡ್‌ ಟಿಕೆಟ್ ಕೊಟ್ಟರೆ ಕಣಕ್ಕಿಳಿಯುತ್ತೇನೆ ಎಂದ ಬಿಜೆಪಿ ಶಾಸಕ

ಅಪಘಾತದಲ್ಲಿ ಬೆಳಗಾವಿ ತಾಲೂಕಿನ ಬಸವನಕುಡುಚಿಯ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯನಿರ್ವಹಿಸುತ್ತಿರುವ ಚಂಬಪ್ಪ ಬಣವಣ್ಯಪ್ಪ ಅವರ ಪುತ್ರ ಪ್ರಕಾಶ್ ಚಂಬಪ್ಪ(28) ಸಾವನ್ನಪ್ಪಿದ್ದಾರೆ‌.

ಚಂದ್ರು ಸಾವು ಪ್ರಕರಣ ಸಾಮ್ಯತೆ ಹೊಂದಿರುವ ಪ್ರಕರಣ ಇದಾಗಿದ್ದು, ಪೊಲೀಸರಿಗೆ ಮತ್ತೆ ಸವಾಲಾಗಿ ಪರಿಣಮಿಸಿದೆ.

ಆರು ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಪ್ರಕಾಶ್ ಶಿವಮೊಗ್ಗಕ್ಕೆ ಸ್ನೇಹಿತರನ್ನು ಬಿಡಲು ಕಾರಿನಲ್ಲಿ ಬಂದಿದ್ದರು. ಹೊನ್ನಾಳಿ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ ಮೂಲಕ ಬೆಳಗಾವಿಗೆ ವಾಪಸ್ ಹೋಗುವಾಗ ಮಾಸಡಿ ಗ್ರಾಮ ಸಮೀಪದಲ್ಲಿ ಕಾರು ನಿಯಂತ್ರಣ ತಪ್ಪಿ ಮಹೇಶ್ವರಿ ಹಳ್ಳಕ್ಕೆ ಉರುಳಿ ಬಿದ್ದಿದೆ.

ಕೆಎ 22, ಎಂಎ 5954 ನಂಬರ್‌ನ ಮಾರುತಿ ಎರಿಟಿಗಾ ಕಾರು ಸೇತುವೆಗೆ ಡಿಕ್ಕಿಯಾಗಿ ಪಲ್ಟಿಯಾಗಿ ಹಳ್ಳಕ್ಕೆ ಉರುಳಿ ಬಿದ್ದಿದೆ. ಅತೀ ವೇಗದಿಂದ ಅಪಘಾತ ಆಗಿರುವ ಶಂಕೆ ವ್ಯಕ್ತವಾಗಿದೆ. ಮಗನ ಮೃತದೇಹದಲ್ಲಿ ಹಣೆಯ ಮೇಲೆ ಮತ್ತು ಇತರ ಕಡೆಗಳಲ್ಲಿ ಪೆಟ್ಟು ಬಿದ್ದ ಗುರುತುಗಳಿವೆ ಎಂದು ಚಂಬಪ್ಪ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ‌. ಘಟನೆ ಸಂಬಂಧ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Car Accident At Davanagere Honnali Taluk Masadi Village

ಹಂಪಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಸಾವು; ಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ವಾಸುದೇವನ್ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕಲ್ಲೆದೇವಪುರ ಹಾಗೂ ಬಸಪ್ಪನಟ್ಟಿ ಗ್ರಾಮಗಳ ನಡುವೆ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

ಮೃತ ವಾಸುದೇವನ್ ಇಬ್ಬರು ವಿದ್ಯಾರ್ಥಿನಿಯರ ಜೊತೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅಪರಿಚಿತ ವಾಹನ‌ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕಾರಿನಲ್ಲಿದ್ದ ಉಳಿದ ಮೂವರಿಗೆ ಗಾಯಗಳಾಗಿದೆ.

ಗಾಯಾಳುಗಳನ್ನು ಮೊದಲು ದಾವಣಗೆರೆಯ ಜಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಎಸ್ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

English summary
Belagavi Basavanakudichi station ASI son died in car accident at Davanagere, Honnali taluk Masadi village.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X