• search
 • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಸ್ವಾಗತಿಸಿ ಸಂಭ್ರಮಾಚರಣೆ

By ದಾವಣಗೆರೆ ಪ್ರತಿನಿಧಿ
|

ದಾವಣಗೆರೆ, ನವೆಂಬರ್ 18: ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ರಚಿಸಿರುವ ರಾಜ್ಯ ಸರ್ಕಾರದ ಕ್ರಮ ಸ್ವಾಗತಿಸಿ ಅಖಿಲ ಭಾರತ ವೀರಶೈವ ಮಹಾಸಭಾದ ದಾವಣಗೆರೆ ಜಿಲ್ಲಾ ಮಹಿಳಾ ಘಟಕದ ಕಾರ್ಯಕರ್ತೆಯರು ನಗರದಲ್ಲಿ ಬುಧವಾರ ಸಂಭ್ರಮಾಚರಣೆ ನಡೆಸಿದರು.

ನಗರದ ರಾಮ್ ಅಂಡ್ ಕೋ ವೃತ್ತದಲ್ಲಿ ಜಮಾಯಿಸಿದ ಅಖಿಲ ಭಾರತ ವೀರಶೈವ ಮಹಾಸಭಾದ ಮಹಿಳಾ ಘಟಕದ ಕಾರ್ಯಕರ್ತೆಯರು ಮುಖ್ಯಮಂತ್ರಿ ಯಡಿಯೂರಪ್ಪ, ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಅವರ ಪರವಾಗಿ ಘೋಷಣೆ ಕೂಗಿ, ಸಿಹಿ ವಿತರಿಸಿ ಸಂಭ್ರಮಿಸಿದರು.

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ; ಸಿಎಂಗೆ ಸಾಣೇಹಳ್ಳಿ ಶ್ರೀಗಳ ಸಲಹೆ

ಈ ಸಂದರ್ಭದಲ್ಲಿ ಮಾತನಾಡಿದ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ, ಪಾಲಿಕೆ ಸದಸ್ಯ ದೇವರಮನಿ ಶಿವಕುಮಾರ್, ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಮತ್ತು ನಾಡಿನ ವಿವಿಧ ಮಠಾಧೀಶರು ಮನವಿ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿದೆ. ಇದು ಸ್ವಾಗತಾರ್ಹ ಬೆಳವಣಿಗೆ ಎಂದರು.

   Chinaಗೆ ತಕ್ಕ ಪಾಠ ಕಲಿಸಲು ಮುಂದಾದ Ratan Tata | Oneindia Kannada

   ಈ ನಿಗಮಕ್ಕೆ ಬೇರೆ ಅಭಿವೃದ್ಧಿ ನಿಗಮಗಳಂತೆ 50, 100 ಕೋಟಿ ರೂ. ಅನುದಾನ ನೀಡಿದರೆ ಸಾಲುವುದಿಲ್ಲ. ನಮ್ಮದು ರಾಜ್ಯದಲ್ಲಿಯೇ ಅತೀ ದೊಡ್ಡ ಸಮಾಜವಾಗಿದ್ದು,

   ಕನಿಷ್ಠ ಸಾವಿರ ಕೋಟಿ ಅನುದಾನ ಮೀಸಲು ಇಡಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಸೋಗಿ ಶಾಂತಕುಮಾರ್, ಶಿವನಗೌಡ ಪಾಟೀಲ್, ಜಿಲ್ಲಾ ಪಂಚಾಯತ್ ಸದಸ್ಯೆ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಉಮಾ ರಮೇಶ್ ಸೇರಿದಂತೆ ಹಲವರು ಇದ್ದರು.

   English summary
   Members of All India Veerashaiva Mahasabha Davangere district women's unit held a celebration in the city on Wednesday, welcoming formation of Veerashaiva-Lingayat Development board,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X