• search
 • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದಾವಣಗೆರೆ; ತರಗತಿ ನಡೆಸುವ ದೂರು, ಕಾಲೇಜುಗಳಿಗೆ ಆಯುಕ್ತರ ಎಚ್ಚರಿಕೆ

By ದಾವಣಗೆರೆ ಪ್ರತಿನಿಧಿ
|

ದಾವಣಗೆರೆ, ಏಪ್ರಿಲ್ 22; ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಕಾರಣದಿಂದಾಗಿ ಶಾಲಾ‌ ಕಾಲೇಜುಗಳನ್ನು ಬಂದ್ ಮಾಡುವಂತೆ ಆದೇಶಿಸಲಾಗಿದೆ. ಆದರೆ, ದಾವಣಗೆರೆ ನಗರದ ವಿವಿಧ ಕಾಲೇಜುಗಳಲ್ಲಿ ತರಗತಿ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಈ ಬಗ್ಗೆ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಗುರುವಾರ ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಮುದ್ದಜ್ಜಿ ಆಂಜನೇಯ ಬಡಾವಣೆಯಲ್ಲಿರುವ ಶ್ರೀ ಸಿದ್ದೇಶ್ವರ ಪಿಯು ಕಾಲೇಜಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು‌.

ಕೋವಿಡ್ ಕೇಂದ್ರಗಳ ಸೋಂಕಿತರ ಸಮಸ್ಯೆ ಆಲಿಸಿದ ಮಂಡ್ಯ ಡಿಸಿಕೋವಿಡ್ ಕೇಂದ್ರಗಳ ಸೋಂಕಿತರ ಸಮಸ್ಯೆ ಆಲಿಸಿದ ಮಂಡ್ಯ ಡಿಸಿ

ತರಗತಿಗಳನ್ನು ಯಾವುದೇ ಕಾರಣಕ್ಕೂ‌ ನಡೆಸಬಾರದು. ಒಂದು ವೇಳೆ ತರಗತಿಗಳನ್ನು ನಡೆಸುತ್ತಿರುವುದು ಕಂಡು ಬಂದರೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದರು.

ದಾವಣಗೆರೆ; ಸೌದಿಗೆ ತೆರಳಿದ ತಾಯಿ, ಪರಿತಪಿಸುತ್ತಿರುವ ಮಕ್ಕಳು ದಾವಣಗೆರೆ; ಸೌದಿಗೆ ತೆರಳಿದ ತಾಯಿ, ಪರಿತಪಿಸುತ್ತಿರುವ ಮಕ್ಕಳು

ದಾವಣಗೆರೆ ನಗರದ ವಿವಿಧೆ ಕಡೆ ಅಂಗಡಿಗಳನ್ನು ಮುಚ್ಚಿಸುವ ಕಾರ್ಯಾಚರಣೆ ಆರಂಭವಾಗಿದೆ. ಮಂಡಿಪೇಟೆ, ಅಶೋಕ ರಸ್ತೆ ಸೇರಿದಂತೆ ಹಲವು ಕಡೆ ಅಂಗಡಿ ತೆರೆದು ವ್ಯಾಪಾರ ಮಾಡಲಾಗುತಿತ್ತು. ಈ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿಗಳು ಬಾಗಿಲು ಮುಚ್ಚಿಸುವ ಕೆಲಸ ಮಾಡುತ್ತಿದ್ದಾರೆ.

ಕೊರೊನಾ ಕರ್ಫ್ಯೂ: ಹೊಸ ಕಠಿಣ ಮಾರ್ಗಸೂಚಿ ಪ್ರಕಟ, ಏನಿರುತ್ತೆ? ಏನಿರಲ್ಲ?ಕೊರೊನಾ ಕರ್ಫ್ಯೂ: ಹೊಸ ಕಠಿಣ ಮಾರ್ಗಸೂಚಿ ಪ್ರಕಟ, ಏನಿರುತ್ತೆ? ಏನಿರಲ್ಲ?

ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಬುಧವಾರ 200 ಹೊಸ ಪ್ರಕರಣ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 24002ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 990.

   ಬೆಂಗಳೂರಿನ ಆಸ್ಪತ್ರೆಗಳಲ್ಲಿ Corona ಸೋಂಕಿತರಿಗೆ ವ್ಯವಸ್ಥೆ ಹೇಗಿದೆ? | Oneindia Kannada

   ರಾತ್ರಿ ಕರ್ಫ್ಯೂ ಜಾರಿ; ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹರಡದಂತೆ ತಡೆಯುವ ಸಲುವಾಗಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಿಆರ್‌ಪಿಸಿ ಕಲಂ 144 ಅನ್ವಯ ಜಿಲ್ಲಾಧಿಕಾರಿಗಳು ಏ. 21 ರಿಂದ ಮೇ 04 ರವರೆಗೆ ಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂ ವನ್ನು ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ಘೋಷಿಸಿದ್ದಾರೆ.

   English summary
   Davanagere city corporation commissioner Vishwanath P. Mudajji visited college after complaint found that class conducted in private colleges.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X