ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾಯಕೊಂಡದ ಗ್ರಾಮ ಒನ್ ಕೇಂದ್ರಕ್ಕೆ ಚಾಲನೆ ನೀಡಿದ ಬೊಮ್ಮಾಯಿ

|
Google Oneindia Kannada News

ದಾವಣಗೆರೆ, ಜನವರಿ 26: ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗಲು ದಾವಣಗೆರೆ ತಾಲ್ಲೂಕು ಮಾಯಕೊಂಡ ಗ್ರಾಮದ ಗ್ರಾಮ ಒನ್ ಕೇಂದ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವರ್ಚುಯಲ್ ವೇದಿಕೆ ಮೂಲಕ ಚಾಲನೆ ನೀಡಿದರು. ಸರಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರು ತಾಲೂಕು ಅಥವಾ ಜಿಲ್ಲಾ ಕೇಂದ್ರಗಳಿಗೆ ಹೋಗಿಬರಬೇಕಾದ ಪರಿಸ್ಥಿತಿಯಿದೆ. ಹೀಗಾಗಿ ಗ್ರಾಮೀಣ ಭಾಗದ ಜನರು ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಿಗೆ ಅಲೆಯುವುದನ್ನು ತಪ್ಪಿಸಲು ಮುಂದಾಗಿರುವ ರಾಜ್ಯ ಸರಕಾರ ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾಮ ಒನ್‌ ಕೇಂದ್ರಗಳನ್ನು ಸ್ಥಾಪಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ್ ಬೊಮ್ಮಾಗಿ ದಾವಣಗೆರೆ ಮಾಯಕೊಂಡ ಗ್ರಾಮದ ಗ್ರಾಮ ಒನ್ ಕೇಂದ್ರಕ್ಕೆ ಚಾಲನೆ ನೀಡಿದರು.

ಚಾಲನೆ ಬಳಿಕ ಮಾತನಾಡಿದ ಅವರು, ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ಯೋಜನೆಗಳ ಪ್ರಯೋಜನ ಸಾರ್ವಜನಿಕರಿಗೆ ಸಿಗಲಿದೆ. 100 ಕ್ಕೂ ಹೆಚ್ಚು ಸೇವೆಗಳು ಒಂದೇ ಸೂರಿನಡಿ ದೊರೆಯುತಿದೆ. ಸಕಾಲದಲ್ಲಿ ಸೇವೆಗಳ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಗ್ರಾಮ ಒನ್ ಯೋಜನೆಯನ್ನು ಸಕಾಲ ತಂತ್ರಾಂಶದೊಂದಿಗೆ ಏಕೀಕರಣ ಮಾಡಲ್ಪಟ್ಟಿರುವುದು ಈ ಯೋಜನೆಯ ವೈಶಿಷ್ಟ್ಯಗಳಲ್ಲಿ ಒಂದಾಗಿದೆ. ಈ ಮಹತ್ವಾಕಾಂಕ್ಷಿ ಯೋಜನೆಯ ಸಾಕಾರಕ್ಕೆ ತಹಶೀಲ್ದಾರರು, ಉಪವಿಭಾಗಾಧಿಕಾರಿಗಳು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಹಾಗೂ ಜಿಲ್ಲಾಧಿಕಾರಿಗಳು ಯೋಜನೆಯ ಪರಿಣಾಮಕಾರಿ ಅನುಷ್ಟಾನಕ್ಕೆ ನೇತೃತ್ವ ವಹಿಸಬೇಕೆಂದರು.

ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಅವರು, ಇಲ್ಲಿನ ಅಕ್ಕಪಕ್ಕದ ಗ್ರಾಮಸ್ಥರು ದಾವಣಗೆರೆಗೆ ಹೋಗಿ ಬರಲು 200 ರಿಂದ 300 ರೂ ಖರ್ಚಾಗುತ್ತಿದ್ದು ಅದರೊಂದಿಗೆ ಸಮಯವೂ ಉಳಿತಾಯವಾಗಿದೆ. ಎಲ್ಲಾ ದಾಖಲೆಗಳು ಗ್ರಾಮ ಒನ್ ಕೇಂದ್ರದಲ್ಲಿ ಸಿಗುವುದರಿಂದ ಸಾರ್ವಜನಿಕರಲ್ಲಿ ಸಮಾಧಾನ ತಂದಿದೆ ಎಂದರು. ಈಗಾಗಲೇ ಜಿಲ್ಲೆಯಲ್ಲಿ 201 ಗ್ರಾಮ ಒನ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು 2.70 ಲಕ್ಷ ಅರ್ಜಿಗಳು ವಿಲೇವಾರಿಯಾಗಿ ಸಾರ್ವಜನಿಕರು ಪ್ರಯೋಜನ ಪಡೆದುಕೊಂಡಿದ್ದಾರೆ. ಮತ್ತೆ 60 ಕೇಂದ್ರಗಳನ್ನು ಆರಂಭಿಸಲು ಆದೇಶಿಸಲಾಗಿದೆ ಇಂತಹ ಒಂದು ಕ್ರಾಂತಿಕಾರಿ ಸೌಲಭ್ಯವನ್ನು ನೀಡಿ ಗ್ರಾಮೀಣರ ಜೀವನ ಹಸನು ಮಾಡಿದುದಕ್ಕಾಗಿ ತಮ್ಮನ್ನು ಅಭಿನಂದಿಸುತ್ತೇನೆಂದರು.

CM Bommai launches Grama One Center in Mayakonda

ಈಗಾಗಲೇ ನಾನು ಹಲವಾರು ಕೇಂದ್ರಗಳಿಗೆ ಭೇಟಿ ನೀಡಿದ್ದು ಕೇಂದ್ರಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಇಂದು ಅನೇಕ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳ ಕಾರ್ಡ್ ನೀಡಲಾಗುತ್ತಿದೆ, ವಿಶೇಷವಾಗಿ ಮಹಿಳೆಯೊಬ್ಬರು 5 ಯೋಜನೆಗಳ ಪ್ರಯೋಜನ ಪಡೆದುಕೊಂಡಿದ್ದಾರೆಂದರು.

CM Bommai launches Grama One Center in Mayakonda

ಮಾಯಕೊಂಡ ಕ್ಷೇತ್ರದ ಶಾಸಕರಾದ ಪ್ರೊ.ಲಿಂಗಣ್ಣ ಮಾತನಾಡಿ ನನ್ನ ಕ್ಷೇತ್ರದಲ್ಲಿ ಗ್ರಾಮ ಒನ್ ಕೇಂದ್ರವನ್ನು ಮುಖ್ಯಮಂತ್ರಿಗಳು ಉದ್ಘಾಟಿಸುತ್ತಿರುವುದು ಬಹಳ ಖುಷಿಯ ವಿಚಾರ, ಸಾರ್ವಜನಿಕರಿಗೆ ಉಪಯೋಗವಾಗುವ ಗ್ರಾಮ ಒನ್ ಕೇಂದ್ರ ಆರಂಭವಾಗಿರುವುದು ಸಂತಸ ತಂದಿದೆ, ಇದರಿಂದ ಜನರಿಗೆ ಹೆಚ್ಚು ಅನುಕೂಲವಾಗಲಿ ಎಂದರು.

CM Bommai launches Grama One Center in Mayakonda

ಕಾರ್ಯಕ್ರಮದಲ್ಲಿ ಶ್ಯಾಗಲೆ ಗ್ರಾಮದ ಅನುಷ ಎಂಬ ವಿಧವೆ ಮಹಿಳೆ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ, ನಾನು ಈಗಾಗಲೆ ಈ ಕೇಂದ್ರದ ಮೂಲಕ 5 ಯೋಜನೆಗಳಲ್ಲಿ ಪ್ರಯೋಜನ ಪಡೆದಿದ್ದು, ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದೇನೆ. ನನ್ನ ಅತ್ತೆ ಮಾವ ನನ್ನನ್ನು ಮನೆಯಿಂದ ಹೊರ ಹಾಕಿದ್ದು ಜೀವನ ಕಟ್ಟಿಕೊಳ್ಳಲು ದಯಮಾಡಿ ಅಂಗನವಾಡಿ ಕಾರ್ಯಕರ್ತೆ ಹುದ್ದೆ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಆ ಮಹಿಳೆ ವಿಧವೆ ಇದಾರೆ, ಅಂಥವರಿಗೆ ಪ್ರಾಶಸ್ತ್ಯ ಕೊಡಬೇಕು ಈ ಬಗೆಗೆ ಸೂಕ್ತ ಕ್ರಮ ತೆಗೆದುಕೊಳ್ಳಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿ ಆ ಮಹಿಳೆಗೆ ನೆರವಾಗಲು ಸೂಚಿಸಿದರು.

CM Bommai launches Grama One Center in Mayakonda

Recommended Video

ಮೈಕ್‌ ಆಫ್‌ ಆಗಿದೆ ಎಂದು ಕೆಟ್ಟ ಶಬ್ದದಿಂದ ಪತ್ರಕರ್ತನಿಗೆ ಬೈದ Joe Biden | Oneindia Kannada

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿ.ಪಂ. ಸಿಇಒ ವಿಜಯ ಮಹಾಂತೇಶ ದಾನಮ್ಮನವರ್, ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಉಪವಿಭಾಗಾಧಿಕಾರಿ ಮಮತ ಹೊಸಗೌಡರ್, ತಹಶೀಲ್ದಾರ್ ಗಿರೀಶ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

English summary
Chief Minister Basavaraja Bommai today launched the Virtual Platform for the Village Grama One Center in the Davanagere Taluk Mayakonda village to benefit rural people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X