ಹರಿಹರದ ಬೆಳ್ಳಿಬೆಡಗು ಜಾತ್ರಾ ಮಹೋತ್ಸವಕ್ಕೆ ಸಿಎಂಗೆ ಆಹ್ವಾನ
ದಾವಣಗೆರೆ, ಜನವರಿ 07: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಜನವರಿ 14 ರಂದು ನಡೆಯುವ ಹರ ಜಾತ್ರೆ ಹಾಗೂ ಬೆಳ್ಳಿ ಬೆಡಗು ಕಾರ್ಯಕ್ರಮವನ್ನು ಉದ್ಘಾಟಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅಹ್ವಾನಿಸಲಾಯಿತು. ಸಿಎಂ ಅವರನ್ನು ವೀರಶೈವ ಲಿಂಗಾಯತ ಪಂಚಮಸಾಲಿ ಪೀಠಾಧ್ಯಕ್ಷರಾದ ಶ್ರೀ ವಚನಾನಂದ ಮಹಾಸ್ವಾಮಿಗಳು ಆಹ್ವಾನಿಸಿದ್ದಾರೆ.
ಜನವರಿ 13 ಮತ್ತು 14ರ ಮಕರ ಸಂಕ್ರಾತಿ ಹಬ್ಬದ ದಿನದಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಮಠದ ಆವರಣದಲ್ಲಿ ಪೀಠಾಧ್ಯಕ್ಷರಾದ ಶ್ರೀ ವಚನಾನಂದ ಮಹಾಸ್ವಾಮಿಗಳು ಹಾಗೂ ಸಮಾಜದ ಮುಖಂಡರ ನೇತೃತ್ವದಲ್ಲಿ ಹರ ಜಾತ್ರೆ ಹಾಗೂ ಬೆಳ್ಳಿ ಬೆಡಗು ಕಾರ್ಯಕ್ರಮವನ್ನು ಅದ್ಧೂರಿಯಾಗಿ ಹಮ್ಮಿಕೊಳ್ಳಲಾಗಿದೆ.
ಬೆಳ್ಳಿ ಬೆಡಗು ಕಾರ್ಯಕ್ರಮವನ್ನು ಉದ್ಘಾಟಿಸಲು ಮುಖ್ಯಮಂತ್ರಿಯವರಿಗೆ ಆಹ್ವಾನ ನೀಡಿದ್ದೇವೆ, ಅವರು ಖಂಡಿತ ಬರುವುದಾಗಿ ಹೇಳಿದ್ದಾರೆ ಎಂದು ವಚನಾನಂದ ಮಹಾಸ್ವಾಮಿಗಳು ತಿಳಿಸಿದರು.

ವೀರಶೈವ ಪಂಚಮಸಾಲಿ ಮಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳು ಖುದ್ದು ಭೇಟಿ ಮಾಡಿ ಆಹ್ವಾನಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಮುಖ್ಯಮಂತ್ರಿಯ ಕಾನೂನು ಸಲಹೆಗಾರರಾದ ಮೋಹನ್ ಲಿಂಬಿಕಾಯಿ, ರಾಣೇಬೆನ್ನೂರು ಶಾಸಕ ಅರುಣ್ ಕುಮಾರ್ ಪೂಜಾರ, ಶ್ರೀ ಮಠದ ಧರ್ಮದರ್ಶಿ ಚಂದ್ರಶೇಖರ್ ಪೂಜಾರ್ ಉಪಸ್ಥಿತರಿದ್ದರು.












Click it and Unblock the Notifications