ದಾವಣಗೆರೆಯಲ್ಲಿ ಮುಖ್ಯಮಂತ್ರಿಗಳ ನವಕರ್ನಾಟಕ ನಿರ್ಮಾಣ ಯಾತ್ರೆ

Posted By:
Subscribe to Oneindia Kannada

ದಾವಣಗೆರೆ, ಡಿಸೆಂಬರ್ 26: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನವಕರ್ನಾಟಕ ನಿರ್ಮಾಣ ಯಾತ್ರೆ ದಾವಣಗೆರೆ ಜಿಲ್ಲೆ ತಲುಪಿದೆ, ಇಂದು ಸಿದ್ದರಾಮಯ್ಯ ಅವರು ದಾವಣಗೆರೆಯಲ್ಲಿ ಕೋಟ್ಯಾಂತರ ರೂಪಾಯಿ ವೆಚ್ಚದ ಅಭಿವೃದ್ಧಿಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ.

ಹಾವೇರಿ: 2833 ಕೃಷಿ ಹೊಂಡ, 36.26 ಕೋಟಿ ವೆಚ್ಚದ ಹನಿ ನೀರಾವರಿ

ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಜೊತೆಗೆ ಮೂರು ಬಹಿರಂಗ ಸಮಾವೇಶದಲ್ಲಿಯೂ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಹಾಗೂ ಹಲವು ಯೋಜನೆಗಳ ಫಲಾನುಭವಿಗಳಿಗೆ ಚೆಕ್ ವಿತರಣೆಯನ್ನು ಮುಖ್ಯಮಂತ್ರಿಗಳು ಮಾಡಲಿದ್ದಾರೆ.

CM Siddaramaiah inaugurating several development programs in Davanagere today

ಬೆಳಿಗ್ಗೆ 11 ಕ್ಕೆ ಹೊನ್ನಾಳಿ, ಮಧ್ಯಾಹ್ನ 1ಕ್ಕೆ ಹರಪನಹಳ್ಳಿ, 3ಕ್ಕೆ ಜಗಳೂರಿನಲ್ಲಿ ಬಹಿರಂಗ ಸಮಾವೇಶ ಉದ್ದೇಶಿಸಿ ಮುಖ್ಯಮಂತ್ರಿಗಳು ಮಾತನಾಡಲಿದ್ದಾರೆ.

ಮುಖ್ಯಮಂತ್ರಿಗಳ ಜೊತೆಗೆ ಸ್ಥಳಿಯ ಕಾಂಗ್ರೆಸ್ ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಕಾಂಗ್ರೆಸ್ ಸರ್ಕಾರದ ಸಾಧನೆಗಳ ಬಗ್ಗೆ ಮುಖ್ಯಮಂತ್ರಿಗಳು ಭಾಷಣದಲ್ಲಿ ಪ್ರಸ್ತಾಪ ಮಾಡಲಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
CM Siddaramaiah going to inaugurate crores worth development programs in Davanagere. Siddaramaiah attending 3 stage programs and addressing people.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ