ದಾವಣಗೆರೆ: ಜಾತಿಗಣತಿ ಜೊತೆ ಈ ಸಮೀಕ್ಷೆಯನ್ನೂ ಕೂಡ ನಾವು ಮಾಡ್ತೇವೆ: ಸಿಎಂ ಸಿದ್ದರಾಮಯ್ಯ
Caste Census: ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರ ಮಾಡುತ್ತಿರುವ ಜಾತಿಗಣತಿಯ ಬಗ್ಗೆ ಇಂದು (ಜೂನ್ 16) ದಾವಣಗೆರೆಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಹಾಗಾದರೆ ಅವರು ಏನು ಹೇಳಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಕೇಂದ್ರ ಸರ್ಕಾರ ಜಾತಿ ಗಣತಿ ಮೇ 2027ಕ್ಕೆ ಅನ್ವಯ ಆಗುವಂತೆ ಮಾಡುತ್ತಿದೆ, ಅವರು ಸಾಮಾಜಿಕ ಮತ್ತು ಶೈಕ್ಷಣಿಕ ಸರ್ವೇಯನ್ನೂ ಮಾಡುತ್ತೇವೆ ಅಂತ ಎಲ್ಲಿಯೂ ಹೇಳಿಲ್ಲ. ಅವರು ಮಾಡುತ್ತಿರುವುದು ಜಾತಿಗಣತಿಯಾದ್ರೆ ತಮ್ಮ ಸರ್ಕಾರ ಮಾಡುತ್ತಿರುವುದು ಜಾತಿಗಣತಿಯ ಜೊತೆ ಸಮುದಾಯಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.

ನಮ್ಮ ಸರ್ಕಾರದ ಮುಂಬರುವ ಸಾಮಾಜಿಕ-ಶೈಕ್ಷಣಿಕ ಮತ್ತು ಜಾತಿ ಸಮೀಕ್ಷೆಯು ಕೇಂದ್ರದ ಜಾತಿ ಗಣತಿಗಿಂತ ಸಂಪೂರ್ಣ ಭಿನ್ನವಾಗಿದೆ. ಅಲ್ಲದೆ ರಾಜ್ಯದ ಈ ಉಪಕ್ರಮವು ಸಾಮಾಜಿಕ ನ್ಯಾಯ ಒದಗಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒತ್ತಿ ಹೇಳಿದರು.
ಇನ್ನು ಕೇಂದ್ರ ಸರ್ಕಾರ 16ನೇ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ಮಾರ್ಚ್ 1, 2027ರಿಂದ ಆರಂಭಿಸುವುದಾಗಿ ಅಧಿಸೂಚನೆ ಹೊರಡಿಸಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ ಜನಗಣತಿಯನ್ನು 2027ರಿಂದ ಕೈಗೊಳ್ಳುತ್ತಿದ್ದು, ಅವರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡುವುದಾಗಿ ಎಲ್ಲಿಯೂ ಹೇಳಿಲ್ಲ. ನಾವು ಮಾಡುತ್ತಿರುವುದು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ. ಜೊತೆಗೆ ಜಾತಿ ಗಣತಿಯೂ ಒಳಗೊಂಡಿದೆ ಎಂದು ಹೇಳಿದರು.
ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು. ಆದ್ದೆರಿಂದ ಮರು ಸಮೀಕ್ಷೆ ಅಗತ್ಯ ಇದೆ. ಕೇಂದ್ರ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ. ಕೇಂದ್ರ ಸರ್ಕಾರ ಜನಗಣತಿ ಮಾಡುವುದಕ್ಕೆ ನಮ್ಮ ಯಾವುದೇ ಆಕ್ಷೇಪಣೆ ಇಲ್ಲ. ನಮ್ಮ ಸಮೀಕ್ಷೆಗೂ ಅವರ ಸಾಮೀಕ್ಷೆಗೂ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆಯ ವ್ಯತ್ಯಾಸ ಇದೆ ಎಂದು ತಿಳಿಸಿದರು.
ವರದಿಯ ಕುರಿತು ಪ್ರಬಲರು ಹಾಗೂ ದುರ್ಬಲರು ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಹಿಂದುಳಿದ ವರ್ಗಗಳ ಕಾಯ್ದೆಯ ಸೆಕ್ಷನ್ 11 (1 )ರ ಪ್ರಕಾರ ವರದಿಗೆ 10 ವರ್ಷಗಳಾದ ಮೇಲೆ ಮರು ಸಮೀಕ್ಷೆ ಆಗಬೇಕು ಎಂದು ತಿಳಿಸಲಾಗಿದೆ. ಆದ್ದರಿಮದ ಜಾತಿ ಗಣತಿ ಮರು ಸಮೀಕ್ಷೆ ಕೈಗೊಳ್ಳಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಮೀಕ್ಷಾ ಕಾರ್ಯ ಆರಂಭಿಸುವಂತೆ ಈಗಾಗಲೇ ಸೂಚನೆ ನೀಡಿದ್ದೇವೆ ಎಂದು ಹೇಳಿದರು.












Click it and Unblock the Notifications