ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ತರಗತಿ ಆರಂಭ

|
Google Oneindia Kannada News

ದಾವಣಗೆರೆ, ನವೆಂಬರ್ 18 : " ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರಗಳಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗಿದ್ದು, ಉಳಿದವರಿಗೆ ಆನ್‍ಲೈನ್‍ನಲ್ಲಿ ತರಗತಿ ನಡೆಸಲು ಸೂಚಿಸಲಾಗಿದೆ" ಎಂದು ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಹೇಳಿದ್ದಾರೆ.

ಎಂಟು ತಿಂಗಳ ಬಳಿಕ ಕರ್ನಾಟಕದಲ್ಲಿ ಕಾಲೇಜುಗಳು ಮಂಗಳವಾರದಿಂದ ಆರಂಭವಾಗಿವೆ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ತರಗತಿಗಳನ್ನು ನಡೆಸಲಾಗುತ್ತಿದೆ. ಯಾವ ಮಾಧ್ಯಮದಲ್ಲಿ ಪಾಠ ಕೇಳಬೇಕೆಂಬುದನ್ನು ವಿದ್ಯಾರ್ಥಿಗಳೇ ನಿರ್ಧರಿಸಬೇಕು.

ಕಾಲೇಜು ಓಪನ್; ಕೋವಿಡ್ ಪರೀಕ್ಷೆ, ಸ್ಯಾನಿಟೈಸ್ಕಾಲೇಜು ಓಪನ್; ಕೋವಿಡ್ ಪರೀಕ್ಷೆ, ಸ್ಯಾನಿಟೈಸ್

ಸರ್ಕಾರ ಮತ್ತು ಯುಜಿಸಿ ಸೂಚನೆಯಂತೆ ಅಂತಿಮ ವರ್ಷದ ಅಂದರೆ ಸ್ನಾತಕ ಪದವಿಯ 5ನೇ ಹಾಗೂ ಸ್ನಾತಕೋತ್ತರ ಪದವಿಯ 3ನೇ ಸೆಮಿಸ್ಟರ್‌ಗೆ ಮಾತ್ರ ಭೌತಿಕ ಹಾಗೂ ಆನ್‍ಲೈನ್ ತರಗತಿ ನಡೆಸಲಾಗುತ್ತದೆ. ಯಾವ ಮಾಧ್ಯಮದ ತರಗತಿ ಬೇಕು ಎಂದು ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳಬಹುದು.

ತರಗತಿ ಆರಂಭ; ವಿದ್ಯಾರ್ಥಿಗಳಿಗೆ 2 ಆಯ್ಕೆ ನೀಡಿದ ಮಂಗಳೂರು ವಿವಿ ತರಗತಿ ಆರಂಭ; ವಿದ್ಯಾರ್ಥಿಗಳಿಗೆ 2 ಆಯ್ಕೆ ನೀಡಿದ ಮಂಗಳೂರು ವಿವಿ

Colleges Reopened For Only Final Year Students

ತರಗತಿಗಳಿಗೆ ಭೌತಿಕವಾಗಿ ಹಾಜರಾಗಲು ಬಯಸುವ ವಿದ್ಯಾರ್ಥಿಗಳು ಕೋವಿಡ್-19 ಪರೀಕ್ಷೆ, ವೈದ್ಯಕೀಯ ಪ್ರಮಾಣ ಪತ್ರ, ಪಾಲಕರ ಅನುಮತಿ ಮತ್ತು ವೈಯಕ್ತಿಕ ನಡವಳಿ ಪತ್ರ ಕಡ್ಡಾಯವಾಗಿದೆ. ಪ್ರಮಾಣ ಪತ್ರ ನೀಡದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುವುದಿಲ್ಲ ಎಂದು ವಿಶ್ವವಿದ್ಯಾಲಯ ಹೇಳಿದೆ.

ತಮಿಳುನಾಡಿನಲ್ಲಿ ಶಾಲಾ-ಕಾಲೇಜು ತೆರೆಯುವುದಕ್ಕೆ ಸರ್ಕಾರದ ಬ್ರೇಕ್! ತಮಿಳುನಾಡಿನಲ್ಲಿ ಶಾಲಾ-ಕಾಲೇಜು ತೆರೆಯುವುದಕ್ಕೆ ಸರ್ಕಾರದ ಬ್ರೇಕ್!

ಸ್ನಾತಕೋತ್ತರ ಪದವಿಯ ಪ್ರಥಮ ಸೆಮಿಸ್ಟರ್ ಹಾಗೂ ಸ್ನಾತಕ ಪದವಿಯ ಪ್ರಥಮ ಮತ್ತು ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಆನ್‍ಲೈನ್‍ನಲ್ಲಿ ಮಾತ್ರ ಪಾಠ ಮುಂದುವರಿಸಲು ಸೂಚಿಸಲಾಗಿದೆ. ವಿದ್ಯಾರ್ಥಿಗಳು ತಮಗೆ ಬೇಕಾದ ಮಾಹಿತಿ ಅಥವಾ ಶೈಕ್ಷಣಿಕ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಮುಂಚಿತವಾಗಿ ಅನುಮತಿ ಪಡೆದು ವಾರದಲ್ಲಿ ಒಮ್ಮೆ ಕಾಲೇಜಿಗೆ ಭೇಟಿ ನೀಡಲು ಅವಕಾಶ ಕೊಡಲಾಗಿದೆ. ಇದಕ್ಕೂ ಸಹ ಪಾಲಕರ ಒಪ್ಪಿಗೆ ಪತ್ರ ಸಲ್ಲಿಸಲೇಬೇಕು.

Recommended Video

Chinaಗೆ ತಕ್ಕ ಪಾಠ ಕಲಿಸಲು ಮುಂದಾದ Ratan Tata | Oneindia Kannada

ಶೈಕ್ಷಣಿಕ ಅಧ್ಯಯನಕ್ಕೆ ಅಗತ್ಯವಿರುವ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ಒದಗಿಸಲು ಬೋಧಕ ಸಿಬ್ಬಂದಿಗೆ ಸೂಚಿಸಲಾಗಿದೆ. ಆನ್‍ಲೈನ್ ತರಗತಿಗಳ ಜೊತೆಗೆ ವಿಡಿಯೋ, ಆಡಿಯೋ, ಆಡಿಯೋ ವಿಷುವಲ್, ಮಲ್ಟಿಮೀಡಿಯ, ಯೂಟೂಬ್, ಪಾಡ್‍ಕಾಸ್ಟ್ ಸೇರಿದಂತೆ ವಿವಿಧ ಮಾಧ್ಯಮಗಳನ್ನು ಬಳಸಿಕೊಂಡು ಪೂರಕ ಮಾಹಿತಿ ನೀಡಲಾಗುತ್ತಿದೆ.

English summary
Davangere university colleges reopened for only final year students with COVID-19 protocols.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X