ಸೀಲ್ ಡೌನ್ ಪ್ರದೇಶ ನಿಯಂತ್ರಣಕ್ಕೆ ದಾವಣಗೆರೆಯಲ್ಲಿ ಕಮಾಂಡರ್ ನಿಯೋಜನೆ
ದಾವಣಗೆರೆ, ಏಪ್ರಿಲ್ 20: ನಿಜಲಿಂಗಪ್ಪ ಲೇಔಟ್ ನಲ್ಲಿನ ಕೊರೊನಾ ಸೋಂಕಿತ ವ್ಯಕ್ತಿಯ ಮನೆಯ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು ಈಗಾಗಲೇ ಸೀಲ್ ಡೌನ್ ಮಾಡಲಾಗಿದ್ದು, ಅದನ್ನು ನಿಯಂತ್ರಿತ ಪ್ರದೇಶ ಎಂದು ಗುರುತಿಸಿ ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಅವರನ್ನು ಘಟಕ ನಿಯಂತ್ರಕರಾಗಿ (ಕಮಾಂಡರ್) ನಿಯೋಜನೆ ಮಾಡಲಾಗಿದೆ.
Recommended Video
ಇಂದು ದಾವಣಗೆರೆಯ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಘಟನಾ ಕಮಾಂಡರ್ ಕೇಂದ್ರ ಸ್ಥಾಪಿಸಲಾಗಿದ್ದು, ನಿಯಂತ್ರಣ ವಲಯಕ್ಕೆ ಸಂಬಂಧಿಸಿದಂತೆ ಯಾವ ರೀತಿ ಸಂಪೂರ್ಣ ಸೀಲ್ ಡೌನ್ ನಿಯಮಾವಳಿಗಳನ್ನು ಅನುಸರಿಸಬೇಕು ಎಂಬುದರ ಕುರಿತು ಅಧಿಕಾರಿಗಳ ಸಭೆ ಕರೆದು ಸೂಚನೆ ನೀಡಿದರು.
ಪಾಸಿಟಿವ್ ಪ್ರಕರಣ ಹೊಂದಿರುವ ಜಿಲ್ಲೆಗಳಲ್ಲಿ 28 ದಿನಗಳಲ್ಲಿ ಯಾವುದೇ ಹೊಸ ಪ್ರಕರಣಗಳು ಪತ್ತೆಯಾಗದಿರುವ ಪ್ರದೇಶವನ್ನು ನಿಯಂತ್ರಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಈ ನಿಯಂತ್ರಿತ ಪ್ರದೇಶದಲ್ಲಿ ವಿವಿಧ ಇಲಾಖೆಗಳ ಪಾತ್ರದ ಕುರಿತು ಯಾವ ರೀತಿ ಕಟ್ಟುನಿಟಿನ ಕ್ರಮಗಳನ್ನು ಕೈಗೊಳ್ಳಬೇಕು, ಹೇಗೆ ನಿಯಂತ್ರಿಸಬೇಕು ಎಂದು ಚರ್ಚಿಸಿ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಸೂಚನೆಗಳನ್ನು ನೀಡಿದರು.

ನಿಯಂತ್ರಿತ ವಲಯದ ಎಲ್ಲಾ ಪ್ರವೇಶ ದ್ವಾರಗಳನ್ನು ಶಾಶ್ವತವಾಗಿ ತಡೆಗೋಡೆ ಹಾಕುವ ಮೂಲಕ ಪೊಲೀಸ್ ನಾಕಾಬಂಧಿ ಮಾಡಬೇಕು. ನಿಯಂತ್ರಿತ ಪ್ರದೇಶದಲ್ಲಿ ಯಾವುದೇ ವ್ಯಕ್ತಿ ಯಾವುದೇ ವಿವಿಧ ಉದ್ದೇಶಗಳಿಂದ ಮನೆಯಿಂದ ಹೊರಗೆ ಬರಲು ಅವಕಾಶ ನೀಡಬಾರದು, ಪ್ರತಿಯೊಂದು ವಲಯದಲ್ಲಿ ಒಂದೇ ಒಂದು ಪ್ರವೇಶ ಮತ್ತು ನಿರ್ಗಮನ ದ್ವಾರವಿರಬೇಕು ಎಂದು ತಿಳಿಸಿದರು. ನಿಯಂತ್ರಿತ ವಲಯದಲ್ಲಿ ಸಂಪೂರ್ಣ ಲಾಕ್‌ಡೌನ್ ಖಾತರಿಪಡಿಸಲು ಡ್ರೋನ್‌ಗಳನ್ನು ಬಳಸಬೇಕು ಎಂದರು.
ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿಗಳು ಜಂಟಿಯಾಗಿ ಮತ್ತು ಮುನ್ನೆಚ್ಚರಿಕೆ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ನಿಯಂತ್ರಿತ ವಲಯದಲ್ಲಿ ಆರೋಗ್ಯ ಔಟ್ ಪೋಸ್ಟ್ ಆರಂಭಿಸಿ ಓರ್ವ ವ್ಯೆದ್ಯ ಹಾಗೂ ಸತತ ಐಇಸಿ ಪ್ರಚಾರದ ಜೊತೆಗೆ ದಿನಕ್ಕೆ ಎರಡು ಭಾರಿ ಜನಸಂಪರ್ಕಗಳ ಪತ್ತೆ ಕಾರ್ಯಕ್ಕೆ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ನಗರ ಆರೋಗ್ಯ ಕುಟುಂಬ ಕಲ್ಯಾಣ ಕೇಂದ್ರದ ವೈದ್ಯರಾದ ಡಾ.ವೆಂಕಟೇಶ್, ಡಾ.ನಾಗರಾಜ್, ಡಾ. ಸುಧೀಂದ್ರ ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕರಾದ ರಾಜಪ್ಪ, ಮಧುಶ್ರೀ, ಬಡಾವಣೆ ಪೊಲೀಸ್ ಠಾಣೆ ಎ.ಎಸ್.ಐ ಮಂಜುನಾಥ ಸ್ವಾಮಿ, ಕಂದಾಯ ಇಲಾಖೆ ಸಿಬ್ಬಂದಿ ಮಂಜುನಾಥ ಡಿ, ಅಂಜನಪ್ಪ ಮತ್ತು ಉಪೇಂದ್ರ ಹಾಜರಿದ್ದರು.












Click it and Unblock the Notifications