ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋವಿಡ್ ನಿಯಮಾವಳಿ ಉಲ್ಲಂಘಿಸಿದ ರೇಣುಕಾಚಾರ್ಯ ವಿರುದ್ಧ ದೂರು

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಜೂನ್ 18: "ಹೊನ್ನಾಳಿ ತಾಲ್ಲೂಕಿನಲ್ಲಿ ಕೊರೊನಾ ಸೋಂಕು ಹೆಚ್ಚಳ ಆಗಲು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರೇ ಕಾರಣ‌. ಕೋವಿಡ್ ಕೇರ್ ಸೆಂಟರ್‌ನಲ್ಲಿ ವಾಸ್ತವ್ಯ, ಹೋಮ, ಡ್ಯಾನ್ಸ್, ರಸಮಂಜರಿ ಕಾರ್ಯಕ್ರಮ ನಡೆಸುವ ಮೂಲಕ ಸರ್ಕಾರದ ಕೋವಿಡ್ ನಿಯಮಾವಳಿ ಉಲ್ಲಂಘಿಸಿರುವ ಶಾಸಕರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು,'' ಎಂದು ಭ್ರಷ್ಟಾಚಾರ ವಿರೋಧಿ ವೇದಿಕೆ ರಾಜ್ಯಾಧ್ಯಕ್ಷ ಎ. ಉಮೇಶ್ ಆಗ್ರಹಿಸಿದ್ದಾರೆ.

"ಹೊನ್ನಾಳಿ ತಾಲ್ಲೂಕಿನ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್‌ನಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿರುವ ರೇಣುಕಾಚಾರ್ಯ ವಿರುದ್ಧ ಎಪಿಡೆಮಿಕ್ ಡಿಸೀಸ್ ಆ್ಯಕ್ಟ್‌ನಡಿ ಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ದಾವಣಗೆರೆ ಡಿಸಿ ಮಹಾಂತೇಶ್ ಆರ್. ಬೀಳಗಿ, ಎಸ್ಪಿ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿರುವುದಾಗಿ,'' ತಿಳಿಸಿದರು.

ಪುತ್ತೂರು ಪೊಲೀಸ್ ಠಾಣೆಯಲ್ಲಿ ಎಚ್.ಡಿ. ರೇವಣ್ಣ ವಿರುದ್ಧ ದೂರುಪುತ್ತೂರು ಪೊಲೀಸ್ ಠಾಣೆಯಲ್ಲಿ ಎಚ್.ಡಿ. ರೇವಣ್ಣ ವಿರುದ್ಧ ದೂರು

"ಕೊರೊನಾ ಸೋಂಕು ಹೆಚ್ಚಳವಾಗಲು ರೇಣುಕಾಚಾರ್ಯ ಅವರೇ ಕಾರಣ. ಕೊರೊನಾ ಸೋಂಕಿತರ ಜೊತೆ ಕೇರ್ ಸೆಂಟರ್‌ನಲ್ಲಿ ವಾಸ್ತವ್ಯ ಹೂಡುತ್ತಾರೆ. ಬಳಿಕ ಹಳ್ಳಿಗಳಿಗೆ ತೆರಳಿ ಜನರ ಜೊತೆ ಮಾತನಾಡುತ್ತಾರೆ‌. ಹೀಗಾಗಿ ಹೊನ್ನಾಳಿ ತಾಲ್ಲೂಕಿನಲ್ಲಿ ಸೋಂಕು ಹೆಚ್ಚಳವಾಗುತ್ತಿದೆ. ರೇಣುಕಾಚಾರ್ಯ ಕೋವಿಡ್ ಕೇರ್ ಸೆಂಟರ್‌ನಲ್ಲಿ ಹೋಮ ಮಾಡಿಸುವ ಮೂಲಕ ಸಾಮಾಜಿಕ ಅಂತರ ಕಾಪಾಡದೇ ಉಲ್ಲಂಘಿಸಿದ್ದಾರೆ,'' ಎಂದು ಹೇಳಿದರು.

Recommended Video

Karnatakaದ ಹೆಮ್ಮೆ,ಟೀಮ್ ಇಂಡಿಯಾದ ಲೆಜೆಂಡ್ Anil Kumble ಕ್ರಿಕೆಟ್ ಜರ್ನಿ | Oneindia Kannada
Davanagere: Complaint Lodged Against M.P Renukacharya For Violating Covid-19 Rule

"ವಾಸ್ತವ್ಯ ಮಾಡಿ ಜನರ ಜೊತೆ ಕುಣಿದು ಕುಪ್ಪಳಿಸುತ್ತಾ ನಿರ್ಲಕ್ಷ್ಯ ವಹಿಸಿದ್ದು, ವಿಪತ್ತು ನಿರ್ವಹಣೆ ಕಾಯ್ದೆ ಅಡಿಯಲ್ಲಿ ದೂರು ದಾಖಲು ಮಾಡಲಾಗಿದೆ. ತಾಕತ್ತಿದ್ದರೆ ಕೇಸ್ ಹಾಕಿ ಎಂದು ಅಧಿಕಾರಿಗಳಿಗೆ ಧಮ್ಕಿ ಹಾಕಿದ್ದಾರೆ. ಪ್ರಚಾರಕ್ಕಾಗಿ ಆ್ಯಂಬುಲೆನ್ಸ್, ಬಸ್ ಓಡಿಸಿದ್ದಾರೆ. ಈ ರೀತಿಯಲ್ಲಿ ಸಾಂಕ್ರಾಮಿಕ ರೋಗ ತಡೆಗೆ ಕ್ರಮ ಕೈಗೊಳ್ಳುವ ಬದಲು ಹೆಚ್ಚಳಕ್ಕೆ ಶಾಸಕರೇ ನೇರ ಹೊಣೆ ಎಂದು ದೂರಿದರಲ್ಲದೇ, ಕ್ರಮ ಜರುಗಿಸದಿದ್ದರೆ ಕಾನೂನು ಹೋರಾಟ ಮಾಡುವುದಾಗಿಯೂ,'' ಭ್ರಷ್ಟಾಚಾರ ವಿರೋಧಿ ವೇದಿಕೆ ರಾಜ್ಯಾಧ್ಯಕ್ಷ ಎ. ಉಮೇಶ್ ತಿಳಿಸಿದರು.

English summary
Anti-Corruption Forum state president A. Umesh expressed outrage against Honnali MLA M.P Renukacharya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X