ದಾವಣಗೆರೆ; ಜೂನ್ 7ರ ತನಕ ಸಂಪೂರ್ಣ ಲಾಕ್‌ಡೌನ್
ದಾವಣಗೆರೆ, ಮೇ 30; ದಾವಣಗೆರೆ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಜಾಸ್ತಿ ಆಗುತ್ತಿರುವ ಹಿನ್ನಲೆಯಲ್ಲಿ ಜೂನ್ 7ರ ಬೆಳಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ. ಮೇ 24 ರಿಂದ ಮೇ 31ರವರೆಗೆ ಮೊದಲು ಸಂಪೂರ್ಣ ಲಾಕ್ ಜಾರಿಯಲ್ಲಿತ್ತು.
ಕೋವಿಡ್ ನಿಯಂತ್ರಣಕ್ಕೆ ಬಾರದ ಕಾರಣ ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಈ ಆದೇಶ ಮಾಡಿದ್ದಾರೆ. ಮೇ 31 ಹಾಗೂ ಜೂನ್ 3ರಂದು ಮಾತ್ರ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಖರೀದಿಗೆ ಅವಕಾಶ ನೀಡಲಾಗಿದೆ.
ದಾವಣಗೆರೆ; ಸ್ಟಾಫ್‌ನರ್ಸ್ ಆತ್ಮಹತ್ಯೆಗೆ ತಿರುವು ಕೊಟ್ಟ ಡೆತ್‌ನೋಟ್
ಈ ಅವಧಿಯಲ್ಲಿ ಕಿರಾಣಿ ಅಂಗಡಿ, ಹಣ್ಣು, ತರಕಾರಿ, ಮಾಂಸ, ಮೀನು ಹಾಗೂ ಮದ್ಯದಂಗಡಿ ಕೋವಿಡ್ ಮಾರ್ಗಸೂಚಿ ಪಾಲಿಸಿ ತೆರೆಯಲು ಅನುಮತಿ ನೀಡಲಾಗಿದೆ. ವಾಹನಗಳ ಓಡಾಟಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ನಡೆದುಕೊಂಡೇ ಹೋಗಬೇಕು.
ದಾವಣಗೆರೆ: ಆಸ್ಪತ್ರೆಯಲ್ಲಿ ಜನಜಂಗುಳಿ; ಟೇಬಲ್ ಮೇಲೆಯೇ ರೋಗಿಗಳಿಗೆ ಚಿಕಿತ್ಸೆ
ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಬೀಜ, ಗೊಬ್ಬರ, ಕೀಟ ನಾಶಕಗಳು, ಕೃಷಿ ಕೊಯ್ಲು ಯಂತ್ರೋಪಕರಣಗಳು ಸೇರಿದಂತೆ ಪರಿಕರಗಳ ಖರೀದಿಗೆ ಬೆಳಗ್ಗೆ 6 ಗಂಟೆಯಿಂದ 12 ಗಂಟೆಯವರೆಗೆ ಮಾತ್ರ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.
ದಾವಣಗೆರೆ; ತಹಶೀಲ್ದಾರ್ ಕಾರ್ಯಕ್ಕೆ ಎಲ್ಲರ ಮೆಚ್ಚುಗೆ
ಹೊರ ಜಿಲ್ಲೆಯಿಂದ ಬರುವವರು 14 ದಿನ ಕಡ್ಡಾಯವಾಗಿ ಹೋಂ ಕ್ವಾರಂಟೈನ್‌ನಲ್ಲಿ ಇರಬೇಕು. ಸಂಪೂರ್ಣ ಲಾಕ್‌ಡೌನ್ ಅವಧಿಯಲ್ಲಿ ವೈದ್ಯಕೀಯ ಸೇರಿದಂತೆ ತುರ್ತು ಸೇವೆಗಳಿಗೆ ಅನುಮತಿ ನೀಡಲಾಗಿದೆ.
ಶನಿವಾರದ ವರದಿಯಂತೆ ದಾವಣಗೆರೆಯಲ್ಲಿ 449 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 41336. ಸಕ್ರಿಯ ಪ್ರಕರಣಗಳ ಸಂಖ್ಯೆ 4936.