• search
 • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೇ 31ರ ತನಕ ದಾವಣಗೆರೆ ಸಂಪೂರ್ಣ ಲಾಕ್‌ಡೌನ್

By ದಾವಣಗೆರೆ ಪ್ರತಿನಿಧಿ
|

ದಾವಣಗೆರೆ, ಮೇ 24; ದಾವಣಗೆರೆ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತ ಸಂಪೂರ್ಣ ಲಾಕ್‌ಡೌನ್ ಘೋಷಣೆ ಮಾಡಿದೆ. ಸೋಮವಾರ ಬೆಳಗ್ಗೆ 10 ರಿಂದ ಮೇ 31ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ.

ಎಲ್ಲಾ‌ ಅಂಗಡಿ ಮುಂಗಟ್ಟುಗಳು, ಮದ್ಯದಂಗಡಿ, ಬಾರ್ ಅಂಡ್ ರೆಸ್ಟೋರೆಂಟ್, ದಿನಸಿ ಅಂಗಡಿಗಳು ಸೇರಿದಂತೆ ಎಲ್ಲವನ್ನು ಮುಚ್ಚಲು ಆದೇಶ ನೀಡಲಾಗಿದೆ. ಯಾವುದೇ ವಾಹನಗಳ ಸಂಚಾರಕ್ಕೂ ಅನುಮತಿ ಇಲ್ಲ.

ದಾವಣಗೆರೆ; ಮನೆ ಆರೈಕೆಯಲ್ಲಿರುವವರಿಗೆ ಉಚಿತ ಊಟ, ತಿಂಡಿ ದಾವಣಗೆರೆ; ಮನೆ ಆರೈಕೆಯಲ್ಲಿರುವವರಿಗೆ ಉಚಿತ ಊಟ, ತಿಂಡಿ

ಹಾಲು, ಔಷಧ ಸೇರಿದಂತೆ ಅಗತ್ಯ ವಸ್ತುಗಳನ್ನು ತರಲು ನಡೆದುಕೊಂಡೇ ಹೋಗಬೇಕು. ಮದುವೆ ಸಮಾರಂಭಕ್ಕೆ ಅನುಮತಿ ನೀಡಲಾಗಿದ್ದರೂ ಕೇವಲ 10 ಜನರು ಮಾತ್ರ ಪಾಲ್ಗೊಳ್ಳಬಹುದಾಗಿದೆ.

ದಾವಣಗೆರೆ: ಕೋವಿಡ್ ತಡೆಗೆ ಪಿಯುಸಿ ವಿದ್ಯಾರ್ಥಿ ಸಮಾಜಮುಖಿ ಕಾರ್ಯ ದಾವಣಗೆರೆ: ಕೋವಿಡ್ ತಡೆಗೆ ಪಿಯುಸಿ ವಿದ್ಯಾರ್ಥಿ ಸಮಾಜಮುಖಿ ಕಾರ್ಯ

ಅಂತ್ಯಸಂಸ್ಕಾರಕ್ಕೆ ಕೇವಲ 5 ಜನರಿಗೆ ಮಾತ್ರ ಅವಕಾಶ ಕೊಡಲಾಗಿದೆ. ಹೊಟೇಲ್, ರೆಸ್ಟೋರೆಂಟ್ ಹಾಗೂ ಉಪಾಹಾರ ಗೃಹಗಳು ಪಾರ್ಸಲ್‌ ಸೇವೆಯನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸಬೇಕು. ಯಾವುದೇ ರೀತಿಯ ಪಾರ್ಸೆಲ್ ಪಡೆಯಲು ಜನರು ಆಗಮಿಸುವಂತಿಲ್ಲ.

ದಾವಣಗೆರೆ; ಕೂಲಂಬಿ ಗ್ರಾಮದಲ್ಲಿ 38 ಮಂದಿಗೆ ಕೋವಿಡ್ ಸೋಂಕು ದಾವಣಗೆರೆ; ಕೂಲಂಬಿ ಗ್ರಾಮದಲ್ಲಿ 38 ಮಂದಿಗೆ ಕೋವಿಡ್ ಸೋಂಕು

ಚೆಕ್ ಪೋಸ್ಟ್‌ಗಳಲ್ಲಿ ತಪಾಸಣೆ ತೀವ್ರಗೊಳಿಸಬೇಕು. ಹೊರ ಜಿಲ್ಲೆಗಳಿಂದ ಬರುವವರು ಕಡ್ಡಾಯವಾಗಿ 14 ಹೋಂ ಕ್ವಾರಂಟೈನ್‌ನಲ್ಲಿರಬೇಕು. ಕೃಷಿ ಸಂಬಂಧಿತ ಚಟುವಟಿಕೆ, ಕ್ಲಿನಿಕ್, ಮೆಡಿಕಲ್ ಶಾಪ್ ಸೇರಿದಂತೆ ಅಗತ್ಯ ವಸ್ತುಗಳ ವಾಹನಗಳ ಓಡಾಟಕ್ಕೆ ಮಾತ್ರ ಅನುಮತಿ‌ ನೀಡಲಾಗಿದೆ.

"ಹಾಲಿನ ಡೈರಿ, ಬೂತ್, ಮೊಟ್ಟೆ ಅಂಗಡಿಗಳು ಮಾತ್ರ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ಕೋವಿಡ್ ನಿಯಮಾವಳಿ ಪಾಲಿಸದಿದ್ದರೆ ಕಟ್ಟುನಿಟ್ಟಾಗಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು" ಎಂದು ಜಿಲ್ಲಾಧಿಕಾರಿ‌ ಮಹಾಂತೇಶ್ ಆರ್. ಬೀಳಗಿ ಎಚ್ಚರಿಕೆ‌ ನೀಡಿದ್ದಾರೆ.

ಮೇ 23ರ ವರದಿಯಂತೆ ದಾವಣಗೆರೆ ಜಿಲ್ಲೆಯಲ್ಲಿ 363 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 37102. ಜಿಲ್ಲೆಯಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 4452.

   Yediyurappa ಅವರು ಖುದ್ದಾಗಿ ವಾರ್ ರೂಮ್‌ಗೆ ಭೇಟಿ ನೀಡಿದರು | Oneindia Kannada
   English summary
   Davangere deputy commissioner Mahanthesh Bilagi ordered for complete lockdown in district from May 24 morning to 31, 2021.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X