ಹಿರಿಯ ಕಾಂಗ್ರೆಸ್ಸಿಗ ಶಾಮನೂರು ಶಿವಶಂಕರಪ್ಪಗೆ ಟಿಕೆಟ್ ಖಾತ್ರಿ ಇಲ್ಲ
ದಾವಣಗೆರೆ, ಏಪ್ರಿಲ್ 02: ಮಧ್ಯ ಕರ್ನಾಟಕ ಭಾಗದ ಕಾಂಗ್ರೆಸ್‌ನ ಪ್ರಭಾವಿ ರಾಜಕಾರಣಿ, ವೀರಶೈವ ಲಿಂಗಾಯತ ಮುಖಂಡ ಶಾಮನೂರು ಶಿವಶಂಕರಪ್ಪ ಅವರ ಚುನಾವಣೆ ಟಿಕೆಟ್ ಇದುವರೆಗೂ ಧೃಡವಾಗಿಲ್ಲ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ದಾವಣಗೆರೆ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ದಾವಣಗೆರೆ ಉತ್ತರ ಕ್ಷೇತ್ರಕ್ಕೆ ಮಾತ್ರ ಎಸ್.ಎಸ್. ಮಲ್ಲಿಕಾರ್ಜುನ್ ರವರಿಗೆ ಮಾತ್ರ ಟಿಕೆಟ್ ಫೈನಲ್ ಆಗಿದೆ. ಇನ್ನು 7 ಕ್ಷೇತ್ರಗಳಲ್ಲಿ ಸಾಕಷ್ಟು ಆಕಾಂಕ್ಷಿತರಿದ್ದು, ಹೈಕಮಾಂಡ್ ಯಾರಿಗೂ ಟಿಕೆಟ್ ಅಂತಿಮಗೊಳಿಸಿಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ.ಮಂಜಪ್ಪ ಸುಳಿವು ಬಿಟ್ಟುಕೊಟ್ಟಿದ್ದಾರೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿ ಮಾಜಿ ಸಚಿವ, ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೂ ಟಿಕೆಟ್ ಖಾತ್ರಿಯಾಗಿಲ್ಲ. ದಕ್ಷಿಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಡಬೇಕು ಎನ್ನುವ ಕೂಗು 2013 ರ ಚುನಾವಣೆಯಿಂದಲೂ ಕೇಳಿ ಬರುತ್ತಿದೆ. ಹಾಗಾಗಿ ಹೈಕಮಾಂಡ್ ಇದುವರೆಗೂ ಟಿಕೆಟ್ ಖಾತ್ರಿ ಪಡಿಸಿಲ್ಲ.

ಜಿಲ್ಲೆಯ ಯಾವುದಾದರೂ ಒಂದು ಕ್ಷೇತ್ರದಿಂದ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಟ್ಟು ಶಾಮನೂರು ಶಿವಶಂಕರಪ್ಪಗೆ ದಕ್ಷಿಣ ಕ್ಷೇತ್ರದಲ್ಲಿ ಟಿಕೆಟ್ ನೀಡುವ ಬಗ್ಗೆ ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗಿದೆ.












Click it and Unblock the Notifications