ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಹೀಗೆಲ್ಲಾ ಮಾತಾಡಬೇಕಾ?; ರೇಣುಕಾಚಾರ್ಯ

Recommended Video

      ಕೈ ನಾಯಕರು ನಿರ್ಜೀವವಾಗಿದ್ದಾರೆ: ರೇಣುಕಾಚಾರ್ಯ | M. P. Renukacharya

      ದಾವಣಗೆರೆ, ಸೆಪ್ಟೆಂಬರ್ 16: "ಬಿಜೆಪಿ ಪಕ್ಷದಲ್ಲಿ ಸಂಘಟನೆ ಇದೆ, ಯಾರಿಗೂ ಅಸಮಾಧಾನವಾಗಿಲ್ಲ" ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ.

      ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಸವಳಂಗ ಗ್ರಾಮದಲ್ಲಿ ನಡೆದ ಶಾಲಾ‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕ ರೇಣುಕಾಚಾರ್ಯ ಮಾಧ್ಯಮಗಳ ಜೊತೆ ಮಾತನಾಡಿ, "ಎಲ್ಲಾ ಶಾಸಕರು, ಸಚಿವರು ಸಂಘಟನೆ ಮಾಡಿ ಯಡಿಯೂರಪ್ಪನವರ ಕೈ ಬಲಗೊಳಿಸುತ್ತಿದ್ದಾರೆ. ರಾಜ್ಯಾಧ್ಯಕ್ಷರು ಕೂಡ ಸಂಘಟನೆ ಮಾಡಲು ಕರೆ ಕೊಟ್ಟಿದ್ದಾರೆ. ರಾಜ್ಯಾಧ್ಯಕ್ಷರ ಹಾಗೂ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸರ್ಕಾರ ಸುಭದ್ರವಾಗಿ ನಡೆಯಲಿದೆ" ಎಂದು ಹೇಳಿದರು.

      Congress Is Sinking Ship Said Renukaacharya In Nyamati

      "ಮಾಜಿ‌ ಸಿಎಂ ಸಿದ್ದರಾಮಯ್ಯನವರು ಯಡಿಯೂರಪ್ಪ ಹಾಗೂ ಅಮಿತ್ ಶಾ ಬಗ್ಗೆ ಹಗುರವಾಗಿ ‌ಮಾತನಾಡಿದ್ದು ಸರಿಯಲ್ಲ. ಕೇಂದ್ರ ಸರ್ಕಾರ ರಾಜ್ಯಕ್ಕೆ ಎಲ್ಲಾ ನೆರವು ನೀಡುತ್ತದೆ. ಕಾಂಗ್ರೆಸ್ ಪಕ್ಷದ ಕೇಂದ್ರ ಹಾಗೂ ರಾಜ್ಯದ ನಾಯಕರು ನಿರ್ಜೀವವಾಗಿದ್ದಾರೆ. ಅಲ್ಲದೆ ಕಾಂಗ್ರೆಸ್ ‌ಪಕ್ಷ ಮುಳುಗುತ್ತಿರುವ ಹಡಗು. ಅವರು ಈ ರೀತಿ ಮಾತನಾಡುವುದು ಸರಿಯಲ್ಲ. ಸಿದ್ದರಾಮಯ್ಯನವರೇ ನೀವು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬೇಡಿ" ಎಂದು ಸಿದ್ದರಾಮಯ್ಯನವರ ಹೇಳಿಕೆಗೆ ತಿರುಗೇಟು ನೀಡಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+