ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

|
Google Oneindia Kannada News

ದಾವಣಗೆರೆ, ಜೂನ್ 17: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ನಗರದ ಶಾಮನೂರು ರಸ್ತೆಯಲ್ಲಿರುವ ಮಹಾನಂದಿ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್.ಕೆ. ಶೆಟ್ಟಿ ಮಾತನಾಡಿ, ""ಯುಪಿಎ ಸರ್ಕಾರದಲ್ಲಿ ಕಚ್ಚಾತೈಲ ಬೆಲೆ ಹೆಚ್ಚಾಗಿದ್ದರೂ ಸಹ ಪೆಟ್ರೋಲ್ ಬೆಲೆ 80 ರೂ. ದಾಟಿರಲಿಲ್ಲ, ಆದರೆ ಈಗ ಕಚ್ಚಾತೈಲ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿದಿನ ಏರುತ್ತಾ ಹೋಗುತ್ತಿದೆ ಎಂದು ಹೇಳಿದರು.

"ಕೆಪಿಸಿಸಿ ಅಧ್ಯಕ್ಷರಾಗಿ ಜುಲೈ 2 ರಂದು ಡಿ.ಕೆ ಶಿವಕುಮಾರ್ ಪದಗ್ರಹಣ'

ಪಾಲಿಕೆ ಸದಸ್ಯ ಕೆ.ಚಮನ್ ಸಾಬ್ ಮಾತನಾಡಿ, ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತಿದ್ದು, ಇದೇ ರೀತಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರುತ್ತಾ ಹೋದರೆ ಮುಂದೆ ಜನಸಾಮಾನ್ಯರು ಜೀವನ ಸಾಗಿಸುವುದೇ ಕಷ್ಟವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು. ಇದೇ ವೇಳೆ ಚೀನಾ ದಾಳಿಯಿಂದ ಹುತಾತ್ಮರಾದ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸಿ ದೇಶದ ಸೈನಿಕರ ಜೊತೆ ನಾವಿದ್ದೇವೆ ಎಂದು ತಿಳಿಸಿದರು.

Davanagere: Congress Protests Against Petrol And Diesel Price Hike

ಪ್ರತಿಭಟನೆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸೋಮಲಾಪುರದ ಹನುಮಂತಪ್ಪ, ಆಶಾ ಮುರುಳಿ, ಕೋಳಿ ಇಬ್ರಾಹಿಂ, ಮುಜಾಹಿದ್ ಮಾತನಾಡಿದರು. ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಎ.ನಾಗರಾಜ್, ಪಾಲಿಕೆ ಸದಸ್ಯರಾದ ದೇವರಮನೆ ಶಿವಕುಮಾರ್, ಗಡಿ ಗುಡಾಳ್ ಮಂಜುನಾಥ್, ಕಲ್ಲಳ್ಳಿ ನಾಗರಾಜ್, ವಿನಾಯಕ ಪೈಲ್ವಾನ್, ಜಿಲ್ಲಾ ಕಾರ್ಯದರ್ಶಿ ಎಸ್. ಮಲ್ಲಿಕಾರ್ಜುನ್, ಎಸ್.ಎಂ. ರುದ್ರೇಶ್, ಹೆಚ್.ಜಯಪ್ಪ, ಸಾಮಾಜಿಕ ಜಾಲತಾಣದ ಕೆ. ಎಲ್. ಹರೀಶ್ ಬಸಾಪುರ ಉಪಸ್ಥಿತರಿದ್ದರು.

English summary
The Davangere District Congress protest against the BJP-led Central Government condemning the hike in petrol and diesel prices.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X