ಶಾಮನೂರು ಶಿವಶಂಕರಪ್ಪಗೆ ಕೋವಿಡ್ ಸೋಂಕು
ದಾವಣಗೆರೆ, ಆಗಸ್ಟ್ 09 : ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪಗೆ ಕೋವಿಡ್ ಸೋಂಕು ತಗುಲಿದೆ. ಪ್ರಸ್ತುತ ಅವರು ಬೆಂಗಳೂರಿನಲ್ಲಿದ್ದಾರೆ.
89 ವರ್ಷದ ಶಾಮನೂರು ಶಿವಶಂಕರಪ್ಪ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರು. ಶಾಮನೂರು ಶಿವಶಂಕರಪ್ಪ ಪುತ್ರ ಎಸ್. ಎಸ್. ಮಲ್ಲಿಕಾರ್ಜುನ ಅವರಿಗೆ ಕೋವಿಡ್ ಸೋಂಕು ತಗುಲಿರುವುದು 5 ದಿನಗಳ ಹಿಂದೆ ಖಚಿತವಾಗಿತ್ತು. ಆದ್ದರಿಂದ, ಕುಟುಂಬ ಸದಸ್ಯರ ಪರೀಕ್ಷೆ ಮಾಡಿಸಲಾಗಿತ್ತು.
ಶನಿವಾರ ಶಾಮನೂರು ಶಿವಶಂಕರಪ್ಪ ಅವರ ಕೋವಿಡ್ ಪರೀಕ್ಷೆ ವರದಿ ಪಾಸಿಟಿವ್ ಬಂದಿದೆ. ಶಾಮನೂರು ಶಿವಶಂಕರಪ್ಪ ಬೆಂಗಳೂರಿನಲ್ಲಿದ್ದು, 'ಸ್ಪರ್ಶ' ಆಸ್ಪತ್ರೆಗೆ ದಾಖಲಾಗಿದ್ದಾರೆ.

"ನಾನು ಬೆಂಗಳೂರಿನಲ್ಲಿದ್ದು ಕೋವಿಡ್ ವರದಿ ಪಾಸಿಟಿವ್ ಬಂದ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಾನು ಆರೋಗ್ಯವಾಗಿದ್ದೇನೆ" ಎಂದು ಶಾಮನೂರು ಶಿವಶಂಕರಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ ಶನಿವಾರ 132 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 3283.












Click it and Unblock the Notifications