ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಆಡಳಿತದಿಂದ ಬೇಸತ್ತ ಜನತೆ, 2023ಕ್ಕೆ ಕಾಂಗ್ರೆಸ್‌ಗೆ ಮತ್ತೆ ಅಧಿಕಾರ: ರಾಹುಲ್ ಗಾಂಧಿ ವಿಶ್ವಾಸ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಅಗಸ್ಟ್‌ 3: ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಜಗಜ್ಜಾಹೀರಾಗಿದೆ. ಬಸವಣ್ಣನವರ ಹೆಸರಿನಲ್ಲಿ ಪ್ರತಿಜ್ಞೆ ಮಾಡಿ ಕರ್ನಾಟಕದಲ್ಲಿ ಕೊಳ್ಳೆ ಹೊಡೆಯುತ್ತಿರುವ ಬಿಜೆಪಿ ಸರಕಾರದ ಆಡಳಿತಕ್ಕೆ ಜನರು ಬೇಸತ್ತು ಹೋಗಿದ್ದಾರೆ. ಎಲ್ಲರೂ ಪ್ರಾಮಾಣಿಕರಾಗಿರಬೇಕು, ಕಾಯಕವೇ ಕೈಲಾಸ ಎಂಬ ಬಸವಣ್ಣನವರು ಹೇಳಿದ್ದರೆ, ಇದಕ್ಕೆ ತದ್ವಿರುದ್ಧವಾಗಿ ಬಿಜೆಪಿ ಸರ್ಕಾರ ನಡೆಯುತ್ತಿದೆ ಎಂದು ಎಐಸಿಸಿ ಅಧಿನಾಯಕ ರಾಹುಲ್ ಗಾಂಧಿ ಹೇಳಿದರು

ದಾವಣಗೆರೆ - ಹರಿಹರ ಮಾರ್ಗ ಮಧ್ಯೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಶಾಮನೂರು ಶಿವಶಂಕರಪ್ಪರ ಒಡೆತನದ ಅರಮನೆ ಮೈದಾನದಲ್ಲಿ ಏರ್ಪಡಿಸಿದ್ದ ಸಿದ್ದರಾಮಯ್ಯ 75 ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ದಾವಣಗೆರೆಯಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಚುನಾವಣೆಗೆ ಮುನ್ನುಡಿ ಬರೆದ ಮಹೋತ್ಸವ...!ದಾವಣಗೆರೆಯಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಚುನಾವಣೆಗೆ ಮುನ್ನುಡಿ ಬರೆದ ಮಹೋತ್ಸವ...!

ಸಾಮಾಜಿಕ ನ್ಯಾಯ ಪರಿಕಲ್ಪನೆ ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಗೆ ಇಲ್ಲ. ಈ ಹಿಂದೆ ಕರ್ನಾಟಕದಲ್ಲಿ ಆಡಳಿತ ನಡೆಸಿದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಾಮಾಜಿಕ ನ್ಯಾಯದಡಿ ಆಡಳಿತ ನಡೆಸಿತ್ತು. ಸಾಮರಸ್ಯ ಹಾಗೂ ಸಮಾಜದ ಸ್ವಾಸ್ಥ್ಯ ಕದಡುವ ರೀತಿಯಲ್ಲಿ ಕೆಲಸ ಮಾಡುತ್ತಿರುವ ಬಿಜೆಪಿಯಿಂದ ಜನರು ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ ಎಂದ ಅವರು, ಸಮಾಜದಲ್ಲಿ ಕೋಮುಸಾಮರಸ್ಯ, ಜಾತಿ ಜಾತಿಗಳ ನಡುವೆ ಸಂಘರ್ಷ ಹುಟ್ಟು ಹಾಕಿ ಸಮಾಜದ ಸ್ವಾಸ್ಥ್ಯ ಹಾಳುಗೆಡವಿರುವ ಆರ್‌ಎಸ್‌ಎಸ್‌ ಹಾಗೂ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು. ಇದಾಗಬೇಕು ಎಂದರೆ ಮತ್ತೆ 2023ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ಎಐಸಿಸಿ ಅಧಿನಾಯಕ ರಾಹುಲ್ ಗಾಂಧಿ ಹೇಳಿದರು.

 ಸಿದ್ದರಾಮಯ್ಯ ಹಾಗೂ ಡಿಕೆಶಿ ಆಲಿಂಗನ

ಸಿದ್ದರಾಮಯ್ಯ ಹಾಗೂ ಡಿಕೆಶಿ ಆಲಿಂಗನ

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯರ ನಾಯಕತ್ವದಲ್ಲಿ ಜನರನ್ನು ತಲುಪುವ ಪ್ರಯತ್ನ ಮಾಡುತ್ತೇವೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಪರಸ್ಪರ ಆಲಿಂಗನ ಮಾಡಿದ್ದು ನೋಡಿ ಸಂತೋಷ ಆಯಿತು. ಅವರಿಬ್ಬರ ನೇತೃತ್ವದಲ್ಲಿ ಕಾಂಗ್ರೆಸ್‌ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಸೋಲಿಸಲಿದೆ. ಕರ್ನಾಟಕದಲ್ಲಿ ಅದು ಸಾಧ್ಯವಾಗುತ್ತದೆ. ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿ ಸಂಘಟಿಸುತ್ತಾರೆ ಎಂಬ ವಿಶ್ವಾಸ ಇದೆ ಎಂದು ಹೇಳಿದರು.

 ಭೂಪಟದಲ್ಲಿ ಕರ್ನಾಟಕ ಗುರುತಿಸುವಂತೆ ಮಾಡಿದ್ದು ಕಾಂಗ್ರೆಸ್

ಭೂಪಟದಲ್ಲಿ ಕರ್ನಾಟಕ ಗುರುತಿಸುವಂತೆ ಮಾಡಿದ್ದು ಕಾಂಗ್ರೆಸ್

ವಿಶ್ವದ ಭೂಪಟದಲ್ಲಿ ಕರ್ನಾಟಕ ಗುರುತಿಸುವಂತೆ ಮಾಡಿದ್ದು ಕಾಂಗ್ರೆಸ್. ಆದ್ರೆ, ಅಮೆರಿಕಾದ ಜನರು ಸಹ ಕರ್ನಾಟಕದಲ್ಲಿನ ಬೆಳವಣಿಗೆಗಳ ಬಗ್ಗೆ ಮಾತನಾಡುತ್ತಾರೆ. ಕರ್ನಾಟಕ ಯಾವಾಗಲೂ ಇಂಥ ಸಮಸ್ಯೆ ಎದುರಿಸಲಿಲ್ಲ. ಸಾಮರಸ್ಯ ಕದಡಿರುವುದರಿಂದ ಅಲ್ಲಿನ ಜನರು ಸಹ ಈ ಹಿಂದೆ ಯಾವಾಗಲೂ ಈ ರೀತಿಯ ವಾತಾವರಣ ನೋಡಿರಲಿಲ್ಲ ಎನ್ನುತ್ತಾರೆ. ನಾವು ಸಂಸ್ಕೃತಿ, ಭಾಷೆಯ ಬಗ್ಗೆ ಅಪಾರವಾದ ಗೌರವ ಹೊಂದಿದ್ದೇವೆ. ಉಳಿಸಿ ಬೆಳೆಸುವ ಕೆಲಸ ಆಗಬೇಕಾದರೆ ಜನರ ಆಶೀರ್ವಾದ ಬೇಕು. ರಾಜಕಾರಣಕ್ಕೋಸ್ಕರ ಬಿಜೆಪಿ ಏನೆನೆಲ್ಲಾ ಮಾಡುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಅನ್ನಭಾಗ್ಯ, ಕ್ಷೀರಭಾಗ್ಯ, ರೈತ ಭಾಗ್ಯ, ಇಂದಿರಾ ಕ್ಯಾಂಟೀನ್ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ಕಾಂಗ್ರೆಸ್ ಸರಕಾರ ನೀಡಿದೆ. ಮತ್ತೆ ಇಂಥ ಯೋಜನೆ ಜಾರಿಯಾಗಬೇಕಾದರೆ ಕಾಂಗ್ರೆಸ್ ಅಧಿಕಾರಕ್ಕೆ ತನ್ನಿ ಎಂದು ಕರೆ ನೀಡಿದರು.

 ನಾಲ್ಕೈದು ಉದ್ಯಮಿಗಳ ಕೈಸೇರಿದ ಭಾರತೀಯರ ಹಣ

ನಾಲ್ಕೈದು ಉದ್ಯಮಿಗಳ ಕೈಸೇರಿದ ಭಾರತೀಯರ ಹಣ

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಜನರಲ್ಲಿ ಸಮಸ್ಯೆ ಇರಲಿಲ್ಲ. ಭಯವೂ ಇರಲಿಲ್ಲ. ಸಾಮರಸ್ಯಕ್ಕೂ ಯಾವುದೇ ಆತಂಕ ಇರಲಿಲ್ಲ. ಉದ್ಯೋಗ ಖಾತ್ರಿ, ಮಾಹಿತಿ ಹಕ್ಕು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನೀಡಿದೆ. ಆದರೆ, ಬಿಜೆಪಿ ಸರ್ಕಾರ ಯಾವ ಕಾರ್ಯಕ್ರಮ ನೀಡಿದೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದರು.

ನೋಟು ಅಮಾನ್ಯೀಕರಣ, ಜಿಎಸ್ ಟಿ ಹೇರಿಕೆ ಮಾಡಿದ್ದು ಕೇಂದ್ರ ಸರ್ಕಾರದ ದೊಡ್ಡ ರಾಷ್ಟ್ರೀಯ ದುರಂತ ಕಾರ್ಯಕ್ರಮಗಳು. ಇದರಿಂದಾಗಿ ಸಣ್ಣ ಸಣ್ಣ ವ್ಯಾಪಾರಿಗಳು ಬೀದಿಪಾಲಾದರು. ಭಾರತೀಯರ ಕೈಯಲ್ಲಿದ್ದ ಹಣವವನ್ನು ದೇಶದ ನಾಲ್ಕೈದು ಉದ್ಯಮಿಗಳಿಗೆ ನೀಡುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಿದೆ. ಜಿಎಟ್‌ಟಿ ಹೆಸರಿನಲ್ಲಿ ಮೋಸ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 ಸಿದ್ದರಾಮಯ್ಯ ವಿಚಾರಗಳಿಗೆ ನನ್ನ ಸಹಮತ

ಸಿದ್ದರಾಮಯ್ಯ ವಿಚಾರಗಳಿಗೆ ನನ್ನ ಸಹಮತ

ನಾನು ಯಾರ ಹುಟ್ಟುಹಬ್ಬ ಆಚರಣೆಗೆ ಹೋಗುವುದಿಲ್ಲ. ಆದ್ರೆ, ಸಿದ್ದರಾಮಯ್ಯ ಹಾಗೂ ನನ್ನ ನಡುವೆ ವಿಶೇಷ ಬಾಂಧವ್ಯ ಹಾಗೂ ಸಂಬಂಧ ಇದೆ. ಸಂತೋಷದಿಂದ ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ. ಒಬ್ಬ ವ್ಯಕ್ತಿಯಾಗಿ ಸಿದ್ದರಾಮಯ್ಯ ಅವರನ್ನು ಇಷ್ಟಪಡುತ್ತೇನೆ. ಅಷ್ಟೇ ಅಲ್ಲ ಅವರ ವಿಚಾರಗಳಿಗೆ ನನ್ನ ಸಹಮತ ಇದೆ. ಅವರ ಧೋರಣೆ, ಬದ್ಧತೆ, ಬಡವರು, ಶೋಷಿತರು ಹಾಗೂ ಹಿಂದುಳಿದವರ ಬಗ್ಗೆ ಹೊಂದಿರುವ ಕಾಳಜಿ ಮೆಚ್ಚುವಂಥದ್ದು. ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಬಗ್ಗೆ ಹೆಮ್ಮೆ ಜೊತೆಗೆ ಸಂತೋಷವೂ ಇದೆ. ಕರ್ನಾಟಕದ ಎಲ್ಲಾ ಸಮಸ್ಯೆಗಳ ಬಗ್ಗೆ ಹೊಂದಿರುವ ದೂರದೃಷ್ಟಿ, ಕಾಳಜಿಗೆ ಅವರು ಪ್ರಶಂಸನಾರ್ಹ ಎಂದರು.

ಸಿದ್ದರಾಮಯ್ಯ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ರಾಹುಲ್ ಗಾಂಧಿ ಅವರು, ಗೌರವ ಕಾಣಿಕೆ ನೀಡಿ ಸನ್ಮಾನಿಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್, ದಿನೇಶ್ ಗುಂಡೂರಾವ್, ಸತೀಶ್ ಜಾರಕಿಹೊಳಿ, ಹೆಚ್. ಎಂ. ರೇವಣ್ಣ, ಭೈರತಿ ಸುರೇಶ್, ಬಸವರಾಜ್ ರಾಯರೆಡ್ಡಿ, ಕೃಷ್ಣಭೈರೇಗೌಡ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ನ ಘಟಾನುಘಟಿ ನಾಯಕರು ಪಾಲ್ಗೊಂಡಿದ್ದರು.

English summary
The Congress party is completely united to defeat BJP and RSS in Karnataka. Congress comes to power, it will give a clean and honest government which will work for the future of the state, said Rahul Gandhi in Davanagere,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X