ದಾವಣಗೆರೆ: ಮದುವೆಗೆ ಹೋದವರ ಎದೆಯಲ್ಲಿ ಈಗ ಢವ ಢವ!
ದಾವಣಗೆರೆ, ಜೂನ್ 23: ಬೆಣ್ಣೆನಗರಿ ದಾವಣಗೆರೆ ಜಿಲ್ಲೆಯಲ್ಲಿ ಕೊರೊನಾ ವೈರಸ್ ಆರ್ಭಟ ನಿಲ್ಲುವ ಲಕ್ಷಣಗಳೇ ಕಾಣುತ್ತಿಲ್ಲ. ಇಷ್ಟು ದಿನ ನರ್ಸ್ ಹಾಗೂ ವೃದ್ಧನ ಕಂಟಕವಿತ್ತು, ಆದರೆ ಈಗ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಗೆ ಮದುವೆಯು ತಲೆನೋವಾಗಿ ಪರಿಣಮಿಸಿದೆ.
Recommended Video
ಇನ್ನೇನು ಕೊರೊನಾ ವೈರಸ್ ಪ್ರಕರಣಗಳು ದಾವಣಗೆರೆಯಲ್ಲಿ ಕಡಿಮೆಯಾಗುತ್ತಿವೆ ಎಂದು ನಿಟ್ಟುಸಿರು ಬಿಟ್ಟರೆ, ಈಗ ಗರ್ಭಿಣಿಯರಿಗೆ ಕೊರೊನಾ ಸೋಂಕು ಶುರುವಾಗಿದೆ. ಇದುವರೆಗೂ ಆರು ಜನ ಗರ್ಭಿಣಿಯರಿಗೆ ಸೋಂಕು ಕಾಣಿಸಿಕೊಂಡಿದ್ದು, ಅದರಲ್ಲಿ ಮೂರು ಜನ ಗರ್ಭಿಣಿಯರಿಗೆ ಹೆರಿಗೆ ಕೂಡ ಆಗಿದೆ.
ಆದರೆ ಹರಿಹರದ ರಾಜನಹಳ್ಳಿಯ 18 ವರ್ಷದ ರೋಗಿ ನಂಬರ್-8065 ಸೋಂಕಿತ ಗರ್ಭಿಣಿ ಈಗ ಜಿಲ್ಲಾಡಳಿತಕ್ಕೆ ಹಾಗೂ ಆರೋಗ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಸರ್ಕಾರದಿಂದ ಗರ್ಭಿಣಿಯರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು ಎನ್ನುವ ಅದೇಶದ ಹಿನ್ನೆಲೆ ಜಿಲ್ಲೆಯಲ್ಲಿ ಇರುವ ಗರ್ಭಿಣಿಯರನ್ನು ತಪಾಸಣೆಗೆ ಒಳಪಡಿಸಿದ್ದು, ಆಗ ಆರು ಗರ್ಭಿಣಿಯರಿಗೆ ಸೋಂಕು ಕಾಣಿಸಿಕೊಂಡಿರುವುದು ವರದಿಯಾಗಿದೆ, ಇದರಲ್ಲಿ ರಾಜನಹಳ್ಳಿ ಗ್ರಾಮದ 18 ವರ್ಷದ ಗರ್ಭಿಣಿ ಕೂಡ ಒಬ್ಬಳಾಗಿದ್ದಾಳೆ.

ಹರಿಹರದ ಗಂಡನ ಮನೆಯಿಂದ ತನ್ನ ತವರೂರಾದ ರಾಜನಹಳ್ಳಿಗೆ ಹೋಗಿದ್ದಳು. ಗ್ರಾಮದಲ್ಲಿ ನಡೆದ ಸಂಬಂಧಿಕರ ಮದುವೆಗೆ ಈ ಗರ್ಭಿಣಿ ಪಾಲ್ಗೊಂಡಿದ್ದಳು. 15 ರಂದು ಮದುವೆಗೆ ಹೋಗಿ ಬಂದಿದ್ದು, 18 ರಂದು ಈಕೆಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, ಈಗ ಈಕೆಯ ಸಂಪರ್ಕದಲ್ಲಿ ನಾಲ್ಕು ಜನ ಬಾಲಕಿಯರನ್ನು ಸೇರಿ ಒಟ್ಟು 9 ಜನರಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.
ಅಲ್ಲದೆ ಈಕೆಯ ಸಂಪರ್ಕದಲ್ಲಿ ಇದ್ದ 25 ಜನರನ್ನು ಕ್ವಾರಂಟೈನ್ ಮಾಡಲಾಗಿದ್ದು, ಆದರೆ ಈಕೆ ಮದುವೆಗೆ ಹೋಗಿ ಬಂದ ಹಿನ್ನೆಲೆ ಮದುವೆಗೆ ಯಾರು ಯಾರು ಹೋಗಿದ್ದಾರೋ ಅವರಿಗೆ ನಡುಕ ಶುರುವಾಗಿದೆ. ಯಾಕೆಂದರೆ ನೂರಾರು ಜನರು ಸೇರಿದ್ದ ಮದುವೆಯಲ್ಲಿ ಈಕೆಯ ಸಂಪರ್ಕದಲ್ಲಿ ಎಷ್ಟು ಜನ ಇದ್ದರು ಎನ್ನುವುದೇ ಆರೋಗ್ಯ ಇಲಾಖೆಗೆ ತಲೆ ನೋವಾಗಿದೆ.
ಅಲ್ಲದೇ ತಹಶೀಲ್ದಾರರಿಗೆ ಆರೋಗ್ಯ ಇಲಾಖೆಯು ಮನವಿ ಮಾಡಿಕೊಂಡಿದ್ದು, ಮದುವೆಗೆ ಹೋದವರು ಸ್ವಯಂ ಪ್ರೇರಣೆಯಿಂದ ಬಂದು ತಪಾಸಣೆ ಮಾಡಿಸಿಕೊಳ್ಳಿ ಎಂದು ಅದೇಶವನ್ನು ಹೊರಡಿಸಲಾಗುತ್ತಿದೆ.
ಒಟ್ಟಾರೆಯಾಗಿ 18 ವರ್ಷದ ಗರ್ಭಿಣಿಗೆ ಸೋಂಕು ತಗುಲಿದ್ದು, ಗ್ರಾಮದ ಹಾಗೂ ಮದುವೆಗೆ ಹೋಗಿ ಬಂದವರ ನೆಮ್ಮದಿ ಹಾಳು ಮಾಡಿರುವುದಂತು ಸತ್ಯ. ಈಗಲೇ ಆಕೆಯ ಸಂಪರ್ಕದಲ್ಲಿದ್ದ ಗಂಡನ ಮನೆ ಹಾಗೂ ತವರು ಮನೆಯ 9 ಜನರಿಗೆ ಸೋಂಕು ತಗುಲಿದ್ದು, ಮುಂದೆ ಇನ್ನೇಷ್ಟು ಜನ ಕೊರೊನಾ ವೈರಸ್ ಸೋಂಕಿತರು ಹೆಚ್ಚಾಗುತ್ತಾರೋ ಎನ್ನುವುದನ್ನು ಕಾದು ನೋಡಬೇಕಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications