ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆಯಲ್ಲಿ ಕೊರೊನಾಗೆ ಮುಂದುವರೆದ ಮರಣ ಮೃದಂಗ; ಕೊರೊನಾ ಪಾಸಿಟಿವಿಟಿ ರೇಟ್ ಎಷ್ಟು?

By ಯೋಗರಾಜ್ ಜಿ. ಹೆಚ್.
|
Google Oneindia Kannada News

ದಾವಣಗೆರೆ, ಜುಲೈ 16: ದಾವಣಗೆರೆ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಪಾಸಿಟಿವಿಟಿ ಸಹ ತುಂಬಾ ಕಡಿಮೆಯಾಗಿದೆ. ಕಳೆದೊಂದು ತಿಂಗಳಲ್ಲಿ‌ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿದೆ. ಶೇ.1.19 ಪಾಸಿಟಿವಿಟಿ ರೇಟ್ ಇದ್ದು, ಇನ್ನು ಕೆಲ ದಿನಗಳಲ್ಲಿ ಈ ಪ್ರಮಾಣ ಮತ್ತಷ್ಟು ಕಡಿಮೆ ಆಗಲಿದೆ. ಆದರೆ ಸಾವಿನ ಪ್ರಮಾಣ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

"ಮೊದಲನೇ ಹಾಗೂ ಎರಡನೇ ಅಲೆಯಲ್ಲಿ ಒಟ್ಟು ಇದುವರೆಗೆ ಕೊರೊನಾ‌ ಹೆಮ್ಮಾರಿಗೆ 584 ಜನರು ಸಾವನ್ನಪ್ಪಿದ್ದಾರೆ. ಮೊದಲನೇ ಅಲೆಯಲ್ಲಿ 264 ಮಂದಿ ಸೋಂಕಿಗೆ ತುತ್ತಾಗಿ ಮೃತಪಟ್ಟಿದ್ದರು. ಹೊರ ಜಿಲ್ಲೆಗಳ 22 ಮಂದಿ ಸಾವನ್ನಪ್ಪಿದ್ದರು. ಎರಡನೇ ಅಲೆಯಲ್ಲಿ 320 ಜನರು ಅಸುನೀಗಿದ್ದರೆ, ಬೇರೆ ಬೇರೆ ಜಿಲ್ಲೆಗಳಿಂದ ಇಲ್ಲಿಗೆ ಚಿಕಿತ್ಸೆಗೆ ಬಂದು ದಾಖಲಾಗಿದ್ದ 30ರಿಂದ 35 ಜನರು ಬಲಿಯಾಗಿದ್ದಾರೆ,'' ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ‌ ನೀಡಿದ್ದಾರೆ.

ಕೊರೊನಾ 3ನೇ ಅಲೆ, ಮಕ್ಕಳಿಗೆ ಗಂಭೀರ ಪರಿಣಾಮ ಅನ್ನೋದೇ ಅವೈಜ್ಞಾನಿಕ ಕೊರೊನಾ 3ನೇ ಅಲೆ, ಮಕ್ಕಳಿಗೆ ಗಂಭೀರ ಪರಿಣಾಮ ಅನ್ನೋದೇ ಅವೈಜ್ಞಾನಿಕ

ಚಿತ್ರದುರ್ಗ, ಹಾವೇರಿ, ಬಳ್ಳಾರಿ ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ರೋಗಿಗಳನ್ನು ದಾವಣಗೆರೆಗೆ ಕರೆದುಕೊಂಡು ಬರಲಾಗುತ್ತದೆ. ಯಾಕೆಂದರೆ ಆ ಜಿಲ್ಲೆಗಳಲ್ಲಿ ಇಲ್ಲದ ಆರೋಗ್ಯ ಸೌಲಭ್ಯ ದಾವಣಗೆರೆಯಲ್ಲಿ ಸಿಗುವ ಕಾರಣದಿಂದ ತುರ್ತು ಹಾಗೂ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಬರುತ್ತಾರೆ‌. ಜಿಲ್ಲೆ ಮಾತ್ರವಲ್ಲ, ಈ ಮೂರು ಜಿಲ್ಲೆಗಳಿಂದ ರೋಗಿಗಳು ಬರುವುದರಿಂದ ಒತ್ತಡವೂ ಹೆಚ್ಚಾಗಿದೆ. ಆದರೂ ಜಿಲ್ಲಾಡಳಿತ ಚಿಕಿತ್ಸೆ ಮುಂದುವರಿಸಿಕೊಂಡು ಬರುತ್ತಿದೆ.

 ಸಕಾಲಕ್ಕೆ ಟೆಸ್ಟ್ ಮಾಡಿಸಿಕೊಳ್ಳುತ್ತಿಲ್ಲ

ಸಕಾಲಕ್ಕೆ ಟೆಸ್ಟ್ ಮಾಡಿಸಿಕೊಳ್ಳುತ್ತಿಲ್ಲ

ಸ್ಯಾಚುರೇಷನ್ ಹೆಚ್ಚಾದಾಗ, ಶ್ವಾಸಕೋಶಕ್ಕೆ ತುಂಬಾನೇ ಹಾನಿ ಆದಾಗ, ಇನ್ನೇನೂ ಜೀವ ಉಳಿಯುವುದೇ ಕಷ್ಟ ಎಂಬ ಪರಿಸ್ಥಿತಿಯಲ್ಲಿ ರೋಗಿಗಳು ಬರುತ್ತಿರುವುದರಿಂದ ಸಾವಿನ ಸಂಖ್ಯೆಯಲ್ಲಿ ಹೆಚ್ಚಳ ಆಗುತ್ತಿದೆ. ಕೊರೊನಾ ಸೋಂಕು ಕಾಣಿಸಿಕೊಂಡರೂ ಬೇಗ ಆಸ್ಪತ್ರೆಗೆ ಬರುತ್ತಿಲ್ಲ. ಸಕಾಲಕ್ಕೆ ಟೆಸ್ಟ್ ಮಾಡಿಸಿಕೊಳ್ಳುತ್ತಿಲ್ಲ. ಲಸಿಕೆ ಇನ್ನು ಪೂರ್ಣ ಪ್ರಮಾಣದಲ್ಲಿ ನೀಡದಿರುವುದು ಸೇರಿದಂತೆ ಹಲವು ಕಾರಣಗಳಿಂದ ಸಾವು ಕಾಣುವವರು ಜಾಸ್ತಿ ಆಗಿದ್ದಾರೆ. ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಸಾವಿನ ಪಾಸಿಟಿವಿಟಿ ಹೆಚ್ಚಿದ್ದು, ಈ ಪೈಕಿ ದಾವಣಗೆರೆಯಲ್ಲಿ ಬರೋಬ್ಬರಿ ಶೇ.7.94ಕ್ಕೆ ಏರಿದೆ. ಇದು ಕಳವಳಕಾರಿ ಬೆಳವಣಿಗೆಯಾಗಿದೆ.

 ಇದಕ್ಕೆ ಪರಿಹಾರವೇನು?

ಇದಕ್ಕೆ ಪರಿಹಾರವೇನು?

ವೈದ್ಯಕೀಯ ತಜ್ಞರ ಸಲಹಾ ಸಮಿತಿಯ ಸದಸ್ಯರಾದ ತಜ್ಞರು ನೀಡಿರುವ ಸಲಹೆ ಪ್ರಕಾರ, "ಕೋವಿಡ್ 2ನೇ ಅಲೆಯ ಅವಧಿಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಗರಿಷ್ಟ 1349 ಪಾಸಿಟಿವ್ ಪ್ರಕರಣ ಬಂದಿದ್ದವು. ಈ ಪ್ರಮಾಣಕ್ಕೆ ಹೋಲಿಸಿದಾಗ 3ನೇ ಅಲೆ ಸಂದರ್ಭದಲ್ಲಿ ದಿನವೊಂದಕ್ಕೆ ಗರಿಷ್ಟ 2200 ಪ್ರಕರಣ ವರದಿಯಾಗುವ ಸಾಧ್ಯತೆ ಇದ್ದು, ಈ ಪೈಕಿ ಶೇ.10ರಷ್ಟು ಸೋಂಕಿತರಿಗೆ ಆಸ್ಪತ್ರೆಗೆ ದಾಖಲಿಸಬೇಕಾಗಬಹುದು. ತೀವ್ರವಲ್ಲದ ಸೋಂಕಿತರಿಗೆ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಬೇಕಾಗುತ್ತದೆ. ಜಿಲ್ಲೆಯಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಬೇಕಾ ಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಮಾರುಕಟ್ಟೆ, ಕಲ್ಯಾಣ ಮಂಟಪ, ಮಾಲ್, ಪ್ರವಾಸಿ ತಾಣಗಳು, ಹೋಟೆಲ್ ಮುಂತಾದೆಡೆ ಜನಸಂದಣಿ ಹೆಚ್ಚಾಗಿರುವುದು ಕಂಡುಬರುತ್ತಿದೆ. ಹೀಗಾಗಿ 3ನೇ ಅಲೆ ಅವಧಿಯಲ್ಲಿ ಜಿಲ್ಲೆಯಲ್ಲಿ ಕೋವಿಡ್‍ನ ಪರಿಸ್ಥಿತಿ ತೀರಾ ಗಂಭೀರಕ್ಕೆ ತಲುಪುವ ಎಲ್ಲ ಸಾಧ್ಯತೆಗಳೂ ಇವೆ. ಕೋವಿಡ್ ಸೋಂಕು ತಡೆಗಟ್ಟಲು ಇರುವ ಒಂದೇ ದಾರಿ ಎಂದರೆ, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಸ್ಯಾನಿಟೈಸರ್ ಬಳಕೆ ಮಾಡುವುದು,'' ಎಂದಿದ್ದಾರೆ.

 ವಿನೂತನ ಶಿಕ್ಷೆ ವಿಧಿಸುವುದೇ ಸರಿಯಾದ ಕ್ರಮ

ವಿನೂತನ ಶಿಕ್ಷೆ ವಿಧಿಸುವುದೇ ಸರಿಯಾದ ಕ್ರಮ

"ಕೋವಿಡ್ ಸೋಂಕಿತರಿಗೆ ಪಿಪಿಇ ಕಿಟ್ ಧರಿಸಿ, ಜೀವದ ಹಂಗು ತೊರೆದು ಚಿಕಿತ್ಸೆ ನೀಡುವುದು ಅಷ್ಟು ಸುಲಭ ಕೆಲಸವಲ್ಲ. ಇದನ್ನು ಅರ್ಥ ಮಾಡಿಕೊಳ್ಳದ ಸಾರ್ವಜನಿಕರು ತಾವಾಗಿಯೇ ಅಪಾಯಕ್ಕೆ ಆಹ್ವಾನ ನೀಡುವುದಲ್ಲದೆ, ಇತರರ ಆರೋಗ್ಯಕ್ಕೂ ಕಂಟಕ ತರುತ್ತಿದ್ದಾರೆ. ಇದನ್ನು ತಡೆಗಟ್ಟಲು ವಿನೂತನ ಶಿಕ್ಷೆ ವಿಧಿಸುವುದೇ ಸರಿಯಾದ ಕ್ರಮ. ಮಾಸ್ಕ್ ಧರಿಸದವರು, ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದು ಹಾಗೂ ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ನು ಉಲ್ಲಂಘಿಸುವವರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಪಿಪಿಇ ಕಿಟ್ ಧರಿಸಿ, ಸಹಾಯಕರಾಗಿ ಕನಿಷ್ಟ 4 ಗಂಟೆ ಸೇವೆ ಸಲ್ಲಿಸುವ ಶಿಕ್ಷೆ ವಿಧಿಸುವುದು ಸೂಕ್ತ. ವೈದ್ಯರು, ಆಸ್ಪತ್ರೆ ಸಿಬ್ಬಂದಿಗಳು ಜೀವದ ಹಂಗು ತೊರೆದು ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಾರೆ ಎಂಬ ಅರಿವು ಅವರಿಗೂ ಬರಲಿ,'' ಎಂದು ಸಲಹಾ ಸಮಿತಿಯ ಸದಸ್ಯರು ಸಲಹೆ ನೀಡಿದ್ದಾರೆ.

 ಗರಿಷ್ಠ 2 ಸಾವಿರ ಪ್ರಕರಣಗಳು ಬರುವ ಸಾಧ್ಯತೆ

ಗರಿಷ್ಠ 2 ಸಾವಿರ ಪ್ರಕರಣಗಳು ಬರುವ ಸಾಧ್ಯತೆ

ಇನ್ನು ಡಿಸಿ ಮಹಾಂತೇಶ್ ಬೀಳಗಿ ಅವರು ಹೆಚ್ಚು ಕಡಿಮೆ ಈ ಸಲಹೆಗೆ ಓಕೆ ಎಂದಿದ್ದು, "ಸರ್ಕಾರ ಸಾರ್ವಜನಿಕರ ಅನುಕೂಲಕ್ಕಾಗಿ ಹಾಗೂ ಬಡವರು, ವ್ಯಾಪಾರಿಗಳು, ಕೂಲಿಕಾರರು ಆರ್ಥಿಕ ನಷ್ಟ ಅನುಭವಿಸದಿರಲಿ ಎಂದು ಲಾಕ್‌ಡೌನ್ ತೆರವುಗೊಳಿಸಿದೆ. ಇದನ್ನು ಅರ್ಥ ಮಾಡಿಕೊಳ್ಳದ ಜನರು ಮೈಮರೆತು, ನಿಯಮಗಳನ್ನು ಗಾಳಿಗೆ ತೂರಿ ಬೇಕಾಬಿಟ್ಟಿ ವರ್ತಿಸುತ್ತಿದ್ದಾರೆ. ಇದೇ ರೀತಿ ಆದಲ್ಲಿ, ಭೀಕರ ಪರಿಸ್ಥಿತಿ ಕೇವಲ ಎರಡು ತಿಂಗಳ ಒಳಗಾಗಿ ಜಿಲ್ಲೆಗೆ ಬರುವ ಸಾಧ್ಯತೆಗಳಿವೆ. ದಿನಕ್ಕೆ ಗರಿಷ್ಠ 2 ಸಾವಿರ ಪ್ರಕರಣಗಳು ಬರುವ ಸಾಧ್ಯತೆಗಳನ್ನು ಗಮನದಲ್ಲಿಟ್ಟುಕೊಂಡು, ಅದಕ್ಕೆ ಅನುಗುಣವಾಗಿ ಜಿಲ್ಲೆಯಲ್ಲಿ ವೈದ್ಯಕೀಯ ವ್ಯವಸ್ಥೆ ಹಾಗೂ ಕೋವಿಡ್ ಕೇರ್ ಸೆಂಟರ್‌ಗಳನ್ನು ಸಿದ್ಧಪಡಿಸಿಕೊಳ್ಳುವಂತೆ,'' ಅಧಿಕಾರಿಗಳಿಗೆ ಸೂಚನೆ ನೀಡಿದರು.

 ಕೋವಿಡ್ ಆಸ್ಪತ್ರೆಯಲ್ಲಿ ಪಿಪಿಇ ಕಿಟ್ ಧರಿಸಿ,

ಕೋವಿಡ್ ಆಸ್ಪತ್ರೆಯಲ್ಲಿ ಪಿಪಿಇ ಕಿಟ್ ಧರಿಸಿ,

"ಅಲ್ಲದೆ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸುವ ಸಾರ್ವಜನಿಕರಿಗೆ, ಸಮಾರಂಭಗಳ ಆಯೋಜಕರಿಗೆ, ಅಂಗಡಿಗಳ ಮಾಲೀಕರಿಗೆ ದಂಡ ಹಾಕುವುದರ ಜೊತೆಗೆ ವೈದ್ಯರ ಸಲಹೆಯಂತೆ ಕೋವಿಡ್ ಆಸ್ಪತ್ರೆಯಲ್ಲಿ ಪಿಪಿಇ ಕಿಟ್ ಧರಿಸಿ, ಸಹಾಯಕರಾಗಿ ಕನಿಷ್ಟ 4 ಗಂಟೆ ಸೇವೆ ಸಲ್ಲಿಸುವ ಶಿಕ್ಷೆ ವಿಧಿಸುವುದನ್ನು ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಶೀಘ್ರ ಜಾರಿಗೊಳಿಸಲಾಗುವುದು. ಮಾಲ್, ಕಲ್ಯಾಣಮಂಟಪ, ಸಮಾರಂಭ ಸ್ಥಳಗಳಿಗೆ ಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡುವ ವ್ಯವಸ್ಥೆ ಜಾರಿಗೊಳಿಸಲಾಗುವುದು. ಇಂತಹ ಸ್ಥಳಗಳಲ್ಲಿ ಇಲಾಖೆಯಿಂದ ಕೋವಿಡ್ ಟೆಸ್ಟ್ ಮಾಡಿಸಲಾಗುವುದು. ಇದರ ವೆಚ್ಚವನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗುವುದು,'' ಎಂದಿದ್ದಾರೆ.

ಒಟ್ಟಿನಲ್ಲಿ ಕೊರೊನಾ ಸೋಂಕಿತ ಪ್ರಕಣರಗಳು ಕಡಿಮೆ ಆಗುತ್ತಿರುವುದು ಒಳ್ಳೆಯ ಬೆಳವಣಿಗೆಯಾದರೆ, ಮತ್ತೊಂದೆಡೆ ಸಾವಿನ ಪ್ರಮಾಣ ಹೆಚ್ಚಗಾಗುತ್ತಿರುವುದು ಕಳವಳಕ್ಕೆ ಕಾರಣವಾಗಿದೆ.

English summary
The number of coronavirus cases in the Davanagere district is declining and the positivity is also very low.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X