ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಡಿಯೋ; ಲಾಕ್‌ಡೌನ್ ಬಗ್ಗೆ ಮುಖ್ಯಮಂತ್ರಿಗಳ ಸ್ಪಷ್ಟನೆ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ನವೆಂಬರ್ 29; "ಲಾಕ್‌ಡೌನ್ ಮಾಡುವಂತಹ ಯಾವುದೇ ಪ್ರಸ್ತಾಪ ನಮ್ಮ ಮುಂದಿಲ್ಲ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಪಪಡಿಸಿದರು.

ದಾವಣಗೆರೆಯಲ್ಲಿ ಸೋಮವಾರ ಮಾತನಾಡಿದ ಅವರು, "ಜನರು ಆತಂಕಪಡುವ ಅಗತ್ಯವಿಲ್ಲ. ಶಾಲೆಗಳನ್ನು ನಾವು ಮುಚ್ಚುವಂತೆ ಹೇಳಿಲ್ಲ. ಕೇವಲ ನಿಗಾ ವಹಿಸುವಂತೆ ಸೂಚನೆ ಕೊಡಲಾಗಿದೆ" ಎಂದು ತಿಳಿಸಿದರು.

"ಕೊರೊನಾ ಸೋಂಕಿನ ರೂಪಾಂತರಿ ತಳಿಯ ಬಗ್ಗೆ ಭಯಪಡುವ ಅವಶ್ಯಕತೆ ಇಲ್ಲ. ನಾವೆಲ್ಲರೂ ಎಚ್ಚರಿಕೆಯಿಂದ ಇರಬೇಕು ಅಷ್ಟೇ. ಕೊರೊನಾ ಮಾರ್ಗಸೂಚಿಯನ್ನು ಎಲ್ಲರೂ ಪಾಲಿಸಬೇಕು" ಎಂದು ಹೇಳಿದರು.

ಓಮಿಕ್ರಾನ್ ತಡೆಗೆ ಪ್ರಯಾಣ ನಿಷೇಧ ಪರಿಹಾರವಲ್ಲವೇ? ತಜ್ಞರು ಸಲಹೆಓಮಿಕ್ರಾನ್ ತಡೆಗೆ ಪ್ರಯಾಣ ನಿಷೇಧ ಪರಿಹಾರವಲ್ಲವೇ? ತಜ್ಞರು ಸಲಹೆ

COVID 19 No Lockdown Proposal Yet Says CM Basavaraj Bommai

"ಇದು ನಮ್ಮ ಮುಂದಿರುವ ದಾರಿ. ದಕ್ಷಿಣ ಆಫ್ರಿಕಾದಿಂದ ಬಂದಿರುವ ವ್ಯಕ್ತಿಯೊಬ್ಬರಲ್ಲಿ ಓಮ್ರಿಕಾನ್ ಸೋಂಕಿನ ಗುಣಲಕ್ಷಣ ಕಂಡು ಬಂದಿದ್ದು, ಸತ್ಯತೆ ತಿಳಿಯಲು ರಿಪೋರ್ಟ್ ಕಳುಹಿಸಲಾಗಿದೆ. ಇದು ಬಂದ ಬಳಿಕವಷ್ಟೇ ಗೊತ್ತಾಗಲಿದೆ" ಎಂದು ಸ್ಪಷ್ಟಪಡಿಸಿದರು.

ಕೋವಿಡ್ 3ನೇ ಅಲೆ ಭೀತಿ; ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆಗಳುಕೋವಿಡ್ 3ನೇ ಅಲೆ ಭೀತಿ; ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆಗಳು

'ಆರೋಗ್ಯ ಇಲಾಖೆ ಸಿಬ್ಬಂದಿ ಈಗಾಗಲೇ ಎರಡು ಡೋಸ್‌ಗಳನ್ನು ಪಡೆದಿದ್ದಾರೆ‌. ಪಿಸ್ಟೋ ಡೋಸ್ ಬಗ್ಗೆ ಕೇಂದ್ರ ಸರ್ಕಾರದ ಸೂಚನೆ ಕಾಯುತ್ತಿದ್ದೇವೆ. ಅಲ್ಲಿಂದ ಬಂದ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಆರೋಗ್ಯ ಕಾರ್ಯಕರ್ತರ ಬಗ್ಗೆ ವಿಶೇಷ ಕಾಳಜಿ ವಹಿಸಲಾಗುತ್ತಿದೆ" ಎಂದು ತಿಳಿಸಿದರು.

"ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್ ಕುರಿತು ಜನತೆ ಭಯಪಡದೆ, ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ವಿಮಾನ ನಿಲ್ದಾಣದಲ್ಲಿಯೂ ಕಟ್ಟುನಿಟ್ಟಿನ ಪರೀಕ್ಷೆ ಮಾಡುತ್ತಿದ್ದು, ನೆಗಟಿವ್ ಇದ್ದರೆ ಮಾತ್ರ ನಗರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ. ಎಲ್ಲಾ ಜಿಲ್ಲೆಗಳಲ್ಲಿ ಕೇರಳದಿಂದ ಆಗಮಿಸಿರುವ ವಿದ್ಯಾರ್ಥಿಗಳಿಗೆ ನೆಗೆಟಿವ್ ವರದಿ ಕಡ್ಡಾಯ ಹಾಗೂ 7 ನೇ ದಿನಕ್ಕೆ ಮತ್ತೊಮ್ಮೆ ಪರೀಕ್ಷೆ ಮಾಡಲು ಸೂಚಿಸಲಾಗಿದೆ" ಎಂದರು.

Recommended Video

ಮೊದಲನೇ ಪಂದ್ಯದ Pitch ಸಿದ್ದಪಡಿಸಿದವರಿಗೆ Dravid ಕೊಟ್ಟ ಬಹುಮಾನ | Oneindia Kannada

"ಜನರು ಹೆಚ್ಚಾಗಿ ಗುಂಪು ಸೇರುವುದನ್ನು ತಡೆಯಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಸರ್ಕಾರ ನಿರಂತರವಾಗಿ ತಜ್ಞರು ಮತ್ತು ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿದೆ. ಕಾಲಕಾಲಕ್ಕೆ ಅವರು ನೀಡುವ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುತ್ತದೆ. ದಕ್ಷಿಣ ಆಫ್ರಿಕಾದಿಂದ ಆಗಮಿಸಿರುವ ವ್ಯಕ್ತಿಗೆ ವಿಭಿನ್ನ ಲಕ್ಷಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗಾಗಿ ಐ.ಸಿ.ಎಂ.ಆರ್‌ಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಯಾವ ತಳಿ ಎಂದು ತಿಳಿಯಲಿದೆ' ಎಂದು ತಿಳಿಸಿದರು.

English summary
Karnataka chief minister Basavaraj Bommai clarified that there is no proposal to impose a lockdown now.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X