ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಒಂದೇ ಕಾಲೇಜಿನ 17 ಜನ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಡಿಸೆಂಬರ್ 25: ಬ್ರಿಟನ್ ನಿಂದ ದಾವಣಗೆರೆ ಜಿಲ್ಲೆಗೆ ಮತ್ತೆ ಇಬ್ಬರು ಪ್ರಯಾಣಿಕರು ಆಗಮಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಬ್ರಿಟನ್ ನಿಂದ ಬಂದಿರುವ ಇಬ್ಬರು ವ್ಯಕ್ತಿಗಳಿಗೆ ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು ಒಬ್ಬರ ವರದಿ ನೆಗೆಟಿವ್, ಮತ್ತೊಬ್ಬನ ವರದಿ ಇನ್ನೂ ಬಂದಿಲ್ಲ ಎಂದರು.

ದಾವಣಗೆರೆಗೆ ಇದುವರೆಗೂ 9 ಜನ ಪ್ರಯಾಣಿಕರ ಆಗಮನವಾಗಿದ್ದು, ಎಂಟು ಜನರ ವರದಿ ನೆಗೆಟಿವ್ ಬಂದಿದ್ದು, ಮತ್ತೊಬ್ಬರ ವರದಿ ನಾಳೆ ಬರಲಿದೆ. ಬ್ರಿಟನ್ ನಿಂದ ಬಂದ ಯಾರಿಗೂ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ದಾವಣಗೆರೆ; ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿ ಆತ್ಮಹತ್ಯೆದಾವಣಗೆರೆ; ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿ ಆತ್ಮಹತ್ಯೆ

ದಾವಣಗೆರೆ ನಗರಕ್ಕೆ ಕೇರಳದಿಂದ ಬಂದಿರುವ ನಾಲ್ಕು ನರ್ಸಿಂಗ್ ವಿದ್ಯಾರ್ಥಿಗಳ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಅವರಿಗೆ ಸೋಂಕು ಕಾಣಿಸಿಕೊಂಡ ಹಿನ್ನಲೆ, ಅವರ ಸಂಪರ್ಕದಲ್ಲಿ ಇದ್ದವರನ್ನು ಟೆಸ್ಟ್ ಮಾಡಿಸಿದಾಗ ಒಟ್ಟು 21 ಪಾಸಿಟಿವ್ ಕೇಸ್ ಕಂಡು ಬಂದಿವೆ. ಸೋಂಕಿತ ವಿದ್ಯಾರ್ಥಿಗಳನ್ನು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

Davanagere: Covid-19 Positive For 17 Nursing Students Of The Same College

ಒಂದೇ ಕಾಲೇಜಿನ 17 ಜನ ನರ್ಸಿಂಗ್ ವಿದ್ಯಾರ್ಥಿಗಳಿಗೆ ಸೋಂಕು ತಗಲಿರುವ ಬಗ್ಗೆ ವರದಿಯಾಗಿದೆ. ಈ ವಿದ್ಯಾರ್ಥಿಗಳ ಗಂಟಲು ದ್ರವ ಸಂಗ್ರಹ ಮಾಡಲಾಗಿತ್ತು. ಅದರ ವರದಿ ಬಂದಿದ್ದು, ಅವರೆಲ್ಲರಿಗೂ ಕೊರೊನಾ ಸೋಂಕು ತಗುಲಿದೆ. ಈ ವಿದ್ಯಾರ್ಥಿಗಳು ಕೇರಳ ಮೂಲದವರಾಗಿದ್ದು, ಕಳೆದ ಡಿಸೆಂಬರ್ 12 ರಿಂದ ಕೇರಳದಿಂದ ವಿವಿಧ ದಿನಗಳಲ್ಲಿ ದಾವಣಗೆರೆಗೆ ಆಗಮಿಸಿದ್ದರು. ಕಳೆದ ಮೂರು ದಿನಗಳಲ್ಲಿ 17 ಜನ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದರು.

ಸೋಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿದ್ದು, ಬಹುತೇಕರು ಆರೋಗ್ಯವಾಗಿದ್ದಾರೆ. ಹೋಮ್ ಐಸೋಲೆಶನ್ ಬಯಸುವವರಿಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು. ವಿದ್ಯಾರ್ಥಿಗಳಲ್ಲಿ ಗಂಭೀರ ಸ್ವರೂಪ ಕೋವಿಡ್ ಸೋಂಕಿನ ಲಕ್ಷಣಗಳು ಇಲ್ಲ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಮಾಹಿತಿ ನೀಡಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ಇದುವರೆಗೂ 40 ವಿದ್ಯಾರ್ಥಿಗಳು, 14 ಶಿಕ್ಷಕರಿಗೆ ಕೋವಿಡ್ ಸೋಂಕು ತಗುಲಿದೆ. ಕಳೆದ ಒಂದು ತಿಂಗಳಿನಿಂದ ನಡೆದಿರುವ ಕೋವಿಡ್ ಟೆಸ್ಟ್ ನಲ್ಲಿ ಇದುವರೆಗೂ 16,743 ವಿವಿಧ ಹಂತದ ಕಾಲೇಜ್ ವಿದ್ಯಾರ್ಥಿಗಳಿಗೆ ಕೊವಿಡ್ ಪರೀಕ್ಷೆ ಮಾಡಲಾಗಿತ್ತು. 14,631 ವಿದ್ಯಾರ್ಥಿಗಳಲ್ಲಿ ಕೊವಿಡ್ ನೆಗೆಟಿವ್ ವರದಿ ಬಂದಿದೆ. ಜಿಲ್ಲೆಯಲ್ಲೆ ಕಳೆದ ಒಂದು ತಿಂಗಳಲ್ಲಿ 54 ವಿದ್ಯಾರ್ಥಿಗಳು, ಶಿಕ್ಷಕರಲ್ಲಿ ಕೋವಿಡ್ ಕಾಣಿಸಿಕೊಂಡಿದೆ ಎಂಬ ಮಾಹಿತಿಯನ್ನು ಜಿಲ್ಲಾ ಸರ್ವೇಕ್ಷಣಾಧಿಕಾರಿ ತಿಳಿಸಿದರು.

Recommended Video

ಬೆಂಗಳೂರು: ರಿಲಯನ್ಸ್ ಡಿಜಿಟಲ್ ಶಾಪ್ ನಲ್ಲಿ ಕಳ್ಳರ ಕರಾಮತ್ತು | Reliance digital | Oneindia Kannada

English summary
Two passengers have returned from Britain to Davanagere district, said District Collector Mahantesh Beelagi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X