• search
 • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಂದಿರ, ಮಸೀದಿಗಳಿಗೆ ಬರುವವರಿಗೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ

By ದಾವಣಗೆರೆ ಪ್ರತಿನಿಧಿ
|

ದಾವಣಗೆರೆ, ಅಕ್ಟೋಬರ್ 19: ಕೋವಿಡ್ ಮಾರ್ಗಸೂಚಿಗಳನ್ವಯ ಹಬ್ಬಗಳನ್ನು ಆಚರಿಸಬೇಕಿರುವುದರಿಂದ ಯಾವುದೇ ಕಾರಣಕ್ಕೂ ಸಾಮೂಹಿಕ ಪ್ರಾರ್ಥನೆ, ಮೆರವಣಿಗೆ, ಗುಂಪು ಸೇರಲು ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಸೋಮವಾರ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ದಸರಾ, ದೀಪಾವಳಿ ಮತ್ತು ಈದ್ ಮಿಲಾದ್ ಆಚರಣೆ ಕುರಿತ ನಾಗರಿಕ ಶಾಂತಿ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ""ದೇವಸ್ಥಾನ, ಮಸೀದಿಗಳಿಗೆ ಬರುವ ಭಕ್ತರಿಗೆ ಕೋವಿಡ್ ನೆಗಟಿವ್ ಸರ್ಟಿಫಿಕೇಟ್ ಕಡ್ಡಾಯ ಮಾಡಿ. ಹಬ್ಬ-ಹರಿದಿನಗಳು ಧಾರ್ಮಿಕ ಆಚರಣೆಯಾಗಿದ್ದು, ವೈಯಕ್ತಿಕವಾಗಿ ತಮ್ಮ ಮನೆಗಳಲ್ಲಿಯೇ ಭಕ್ತಿಯಿಂದ ಆಚರಿಸೋಣ'' ಎಂದು ಕರೆ ನೀಡಿದರು.

ಕೋವಿಡ್ ಮಾರ್ಗಸೂಚಿಯನ್ವಯ ಹಗಲು, ರಾತ್ರಿ ಪ್ರವಚನ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ, ಸಭೆ, ಸಮಾರಂಭ ಮಾಡದಂತೆ ನಿಷೇಧಿಸಲಾಗಿದೆ. ಒಂದು ವೇಳೆ ಜಿಲ್ಲಾ ಮಟ್ಟದಲ್ಲಿ ಇದಕ್ಕೆ ಅವಕಾಶ ನೀಡಿದರೆ ನಮ್ಮ ಮೇಲೆ ಕ್ರಮ ಜರುಗಿಸಲಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು ನಿಮ್ಮೊಂದಿಗೆ ಇವೆ. ನೀವು ಕೂಡ ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕು ಎಂದು ವಿವಿಧ ಸಮಾಜದ ಮುಖಂಡರಿಗೆ ಮನವಿ ಮಾಡಿದರು.

ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ

ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ

ಕೊರೊನಾ ಆರ್‍.ಟಿ.ಪಿ.ಸಿ.ಆರ್ ಟೆಸ್ಟ್ ಮಾಡಿಸಿಕೊಂಡು ನೆಗೆಟಿವ್ ಸರ್ಟಿಫಿಕೇಟ್ ಹೊಂದಿದ್ದವರಿಗೆ ಮಾತ್ರ ಸಂಘ ಸಂಸ್ಥೆಗಳಲ್ಲಿ, ದೇವಸ್ಥಾನಗಳಲ್ಲಿ ಒಳಗೆ ಪ್ರವೇಶ ಎನ್ನುವುದನ್ನು ಕಡ್ಡಾಯ ಎನ್ನುವ ನಿಯಮ ಜಾರಿ ಮಾಡಿದರೆ ಅಥವಾ ಪರೀಕ್ಷೆ ನಂತರ ಈ ತರಹದ ಸೌಲಭ್ಯ ನೀಡುತ್ತೇವೆ ಇಲ್ಲದಿದ್ದರೆ ಇಲ್ಲ ಎನ್ನುವ ನಿಯಮ ಮಾಡಿದರೆ ಸ್ವಾಭಾವಿಕವಾಗಿ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳುತ್ತಾರೆ. ಆದರೆ ಇದನ್ನು ನಾವು ಸರ್ಕಾರಿ ಆದೇಶವಾಗಿ ಹೊರಡಿಸಲು ಸಾಧ್ಯವಾಗದೇ ಇದ್ದರೂ ಕೂಡ ಎಲ್ಲ ಸಂಘ, ಸಂಸ್ಥೆಗಳಲ್ಲಿ ಈ ಪ್ರಯೋಗ ಮಾಡಿದಲ್ಲಿ ಜಿಲ್ಲಾಡಳಿತಕ್ಕೆ ಸಹಕಾರಿಯಾಗುತ್ತದೆ ಎಂದ ಜಿಲ್ಲಾಧಿಕಾರಿ, ಜನರು ಕೊರೊನಾ ಕುರಿತು ನಿರ್ಲಕ್ಷ್ಯ ಭಾವನೆಯಿಂದ ಹೊರಬರಬೇಕು ಎಂದು ತಿಳಿಸಿದರು.

ವಾಸ್ತವ ಸ್ಥಿತಿಯೇ ಬೇರೆ

ವಾಸ್ತವ ಸ್ಥಿತಿಯೇ ಬೇರೆ

ಕಳೆದ ಎರಡು ದಿನಗಳಿಂದ ದಾವಣಗೆರೆ ಜಿಲ್ಲೆಯಲ್ಲಿ ಕಡಿಮೆ ಕೊರೊನಾ ಪ್ರಕರಣಗಳು ಬರುತ್ತಿವೆ. ಇದು ಇನ್ಮುಂದೆ ಕಡಿಮೆ ಆಗಲಿದೆ. ಹಾಗಾಗಿ ನಮ್ಮನ್ನು ಏನೂ ಮಾಡದು ಎಂದು ತಿಳಿದುಕೊಂಡಿದ್ದಾರೆ. ಆದರೆ ವಾಸ್ತವ ಸ್ಥಿತಿಯೇ ಬೇರೆ. ನಿತ್ಯ 3 ಸಾವಿರ ಪರೀಕ್ಷೆ ಮಾಡಲಾಗುತ್ತಿತ್ತು. ಆದರೆ ನಿನ್ನೆ 900 ಮಾತ್ರ ಮಾಡಿದ್ದಾರೆ. ಹಾಗಾಗಿ ಕಡಿಮೆ ಪ್ರಕರಣಗಳು ದೃಢಪಟ್ಟಿವೆಯೇ ಹೊರತು ಕಡಿಮೆಯಾಗಿಲ್ಲ ಎಂದರು.

ಪರೀಕ್ಷಾ ತಂಡಗಳಿಗೆ ಸಹಕಾರ ನೀಡಿ

ಪರೀಕ್ಷಾ ತಂಡಗಳಿಗೆ ಸಹಕಾರ ನೀಡಿ

ಕಡಿಮೆ ಪ್ರಕರಣಗಳು ದೃಢಪಟ್ಟಾಕ್ಷಣ ಕೊರೊನಾ ಕಡಿಮೆಯಾಗುತ್ತಿದೆ ಎಂದು ಮೈ ಮರೆಯದೇ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲಿಸಬೇಕಿದೆ. ಪರೀಕ್ಷೆಗಾಗಿ 31 ಮೊಬೈಲ್ ತಂಡಗಳನ್ನು ಹಾಗೂ 23 ಸ್ಥಿರ ತಂಡಗಳನ್ನು ಗಂಟಲು ದ್ರವ ಸಂಗ್ರಹಕ್ಕೆ ನಿಯೋಜನೆ ಮಾಡಲಾಗಿದೆ. ಆದರೂ ಜನ ಪರೀಕ್ಷೆ ಮಾಡಿಸಲು ಮುಂದೆ ಬರುತ್ತಿಲ್ಲ. ಕೆಲವರು ನಮಗೆ ಏನೂ ಆಗಿಲ್ಲ ಎಂದು ಮುಚ್ಚಿಡುವ ಪ್ರಯತ್ನ ಮಾಡುತ್ತಿದ್ದಾರೆ. ಹೀಗೆ ಮುಚ್ಚಿಟ್ಟರೆ ಅದು ನಮ್ಮನ್ನು ಬಿಡುವುದಿಲ್ಲ. ತನ್ನೊಂದಿಗೆ ಕರೆದೊಯ್ಯುತ್ತದೆ. ಆದ್ದರಿಂದ ಪರೀಕ್ಷಾ ತಂಡಗಳಿಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಕೋವಿಡ್ ನಿಯಂತ್ರಣ ನಮ್ಮ ಕರ್ತವ್ಯ

ಕೋವಿಡ್ ನಿಯಂತ್ರಣ ನಮ್ಮ ಕರ್ತವ್ಯ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ""ಸರ್ಕಾರ ಹಬ್ಬಗಳ ಆಚರಣೆ ಕುರಿತಂತೆ ನಿರ್ದೇಶನಗಳನ್ನು ನೀಡಿದೆ. ಅದನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಲೇಬೇಕು. ಕೋವಿಡ್ ನಿಯಂತ್ರಣ ನಮ್ಮ ಕರ್ತವ್ಯ'' ಎಂದರು.

ಅಕೋಬರ್ 31 ರೊಳಗೆ ಅರ್ಜಿ ಸಲ್ಲಿಸುವವರಿಗೆ ಮಾತ್ರ ನಗರದ ಸರ್ಕಾರಿ ಪ್ರೌಢ ಶಾಲಾ ಮೈದಾನದಲ್ಲಿ ಪಟಾಕಿ ಅಂಗಡಿ ತೆರೆಯಲು ಅನುಮತಿ ನೀಡಲಾಗುವುದು. ಇದಕ್ಕೆ ನವೆಂಬರ್ 10 ರಿಂದ 17 ರ ತನಕ ಪರವಾನಿಗೆ ನೀಡಲಾಗುವುದು. ಅರ್ಜಿಗಳನ್ನು ಆಧರಿಸಿ ಅದರ ಆಧಾರದ ಮೇಲೆ ಜಾಗ ನೀಡಲಾಗುವುದು ಎಂದರು.

ಸಾಂಪ್ರಾದಾಯಿಕ ಕಾರ್ಯಕ್ರಮಗಳನ್ನು ರದ್ದು

ಸಾಂಪ್ರಾದಾಯಿಕ ಕಾರ್ಯಕ್ರಮಗಳನ್ನು ರದ್ದು

ಪಾಲಿಕೆ ಸದಸ್ಯ ಸೋಗಿ ಶಾಂತಕುಮಾರ್ ಮಾತನಾಡಿ, ದೇವಸ್ಥಾನ, ಪ್ರಾರ್ಥನಾ ಮಂದಿರಗಳಿಗೆ ತೆರಳುವ ಭಕ್ತರು ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು, ತಾಜ್ ಮಹಲ್ ಸೇರಿದಂತೆ ಇತರೆ ಐತಿಹಾಸಿಕ ಸ್ಮಾರಕಗಳನ್ನು ನೋಡಲು ಹೋಗವವರ ಕಾಲಿಗೆ ಬಟ್ಟೆಯ ಚೀಲ ನೀಡುವಂತೆ ನಮ್ಮಲ್ಲೂ ವ್ಯವಸ್ಥೆ ಆಗಬೇಕು ಎಂದರು. ದುರ್ಗಾಂಬಿಕಾ ದೇವಿ ದೇವಸ್ಥಾನದ ಧರ್ಮದರ್ಶಿ ಗೌಡ್ರ ಚನ್ನಬಸಪ್ಪ ಮಾತನಾಡಿ, ಕೊರೊನಾ ಹಿನ್ನೆಲೆಯಲ್ಲಿ ದುರ್ಗಾಂಬಿಕಾ ದೇವಿ ದೇವಸ್ಥಾನದಲ್ಲಿ ಸಾಂಪ್ರಾದಾಯಿಕ ಕಾರ್ಯಕ್ರಮಗಳನ್ನು ರದ್ದುಪಡಿಸಿ ಸರಳ ಆಚರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಮನೆಗಳಲ್ಲಿಯೇ ಸರಳ ಹಬ್ಬ

ಮನೆಗಳಲ್ಲಿಯೇ ಸರಳ ಹಬ್ಬ

ಈದ್ ಮಿಲಾದ್ ಕಮಿಟಿ ಕಾರ್ಯದರ್ಶಿ ಯಾಸೀನ್ ಪೀರ್ ತಾಜ್ ಮಾತನಾಡಿ, ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯವೇ ಹಬ್ಬ ಆಚರಿಸಲು ಸಮಾಜದ ಬಾಂಧವರು ಮುಂದಾಗಿದ್ದು, ಈ ಸಂಬಂಧ ಸಮಿತಿಯಲ್ಲಿ ತೀರ್ಮಾನಿಸಲಾಗುವುದು ಎಂದರು. ಪಾಲಿಕೆ ಸದಸ್ಯರಾದ ಶಿವಪ್ರಕಾಶ್, ಚಮನ್ ಸಾಬ್, ಶಿರಾಜ್ ಅಹಮದ್, ಹಿಂದೂಪರ ಸಂಘಟನೆಯ ಸತೀಶ್ ಪೂಜಾರ್ ಮಾತನಾಡಿ, ಸರ್ಕಾರದ ಮಾರ್ಗಸೂಚಿಯನ್ನು ಎಲ್ಲರೂ ಒಪ್ಪಿಕೊಂಡು ಮನೆಗಳಲ್ಲಿಯೇ ಸರಳವಾಗಿ ಹಬ್ಬಗಳನ್ನು ಆಚರಿಸಲಾಗುವುದು ಎಂದರು. ಹೆಚ್ಚುವರಿ ಪೊಲೀಸ್ ರಕ್ಷಣಾಧಿಕಾರಿ ರಾಜೀವ್, ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ ಸೇರಿದಂತೆ ವಿವಿಧ ಸಮಾಜದ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

   Political Popcorn with Lavanya : Dr BL Shankar, ಈಗ ಆಗಿರೋದೆ ಸಾಕು ಇನ್ಮೇಲೆ ಚುನಾವಣೆಗೆ ನಿಲ್ಲಲ್ಲಾ!?! Part2

   English summary
   "There is no provision for mass prayers, processions or gatherings under the Covid Guidelines." Davanagere DC Said That.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X