Davanagere Bennedose: ದಾವಣಗೆರೆ ಬೆಣ್ಣೆದೋಸೆಗೆ ಇನ್ಮುಂದೆ ಪ್ರವಾಸೋದ್ಯಮ ಟ್ಯಾಗ್‌ನೊಂದಿಗೆ ಬ್ರಾಂಡಿಂಗ್, ಉದ್ದೇಶ ಏನು?
ದಾವಣಗೆರೆ, ಡಿಸೆಂಬರ್, 01: ದಾವಣಗೆರೆ ಅಂದರೆ ಮೊದಲು ನೆನಪಾಗುವುದೇ ಬೆಣ್ಣೆದೋಸೆ. ಇಲ್ಲಿನ ಬೆಣ್ಣೆದೋಸೆಗೆ ಮಾರು ಹೋಗದವರಿಲ್ಲ, ಈ ಬೆಣ್ಣೆದೋಸೆಗೆ ಬ್ರಾಂಡಿಂಗ್ ಮಾಡುವ ಮೂಲಕ ಪ್ರವಾಸೋದ್ಯಮದ ಜೊತೆಗೆ ಜೋಡಿಸುವ ಉದ್ದೇಶ ಹೊಂದಲಾಗಿದೆ. ಜಿಲ್ಲಾಡಳಿತ ಈ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ.ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದಾವಣಗೆರೆ ಬೆಣ್ಣೆದೋಸೆಗೆ ಬ್ರಾಂಡಿಂಗ್ ಕಲ್ಪಿಸಲು ಕರೆಯಲಾದ ದಾವಣಗೆರೆ ನಗರದ ಬೆಣ್ಣೆದೋಸೆ ಹೋಟೆಲ್‍ಗಳ ಮಾಲೀಕರು ಮತ್ತು ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದಾವಣಗೆರೆ ಬೆಣ್ಣೆದೋಸೆಗೆ ರಾಜ್ಯದಲ್ಲಿ ತನ್ನದೇ ಆದಂತಹ ಹೆಸರಿದ್ದು, ಇದನ್ನು ಅಂತರರಾಜ್ಯ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವ ಮೂಲಕ ಜಿಲ್ಲೆಯ ಹೆಸರನ್ನು ಹೆಚ್ಚಿಸಬೇಕಿದ್ದು, ಇಲ್ಲಿನ ಜನರಿಗೆ ಹೆಚ್ಚಿನ ಉದ್ಯೋಗ ಒದಗಿಸುವ ಚಿಂತನೆ ಮಾಡಲಾಗಿದೆ ಎಂದರು.

ದಾವಣಗೆರೆ ಬೆಣ್ಣೆದೋಸೆಗೆ ಅದರದ್ದೇ ಆದಂತಹ ಹೆಸರಿದ್ದು, ದೋಸೆಗೆ ಬಳಸುವ ಆಹಾರ ಧಾನ್ಯಗಳು ಮತ್ತು ಮಾಡುವ ವಿಧಾನಗಳ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿಸುವ ಮೂಲಕ ಗುಣ್ಣಮಟ್ಟದ ಖಾತರಿಯನ್ನು ಜನರಿಗೆ ಕಲ್ಪಿಸಬೇಕಾಗಿದೆ. ದಾವಣಗೆರೆ ನಗರ ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಸಂಪರ್ಕ ಹೊಂದಿದ್ದು, ಗೋವಾ, ಮಹಾರಾಷ್ಟ್ರಕ್ಕೆ ಹೋಗುವ ಪ್ರವಾಸಿಗರು, ಅಂತರರಾಜ್ಯ ಪ್ರಯಾಣಿಕರು ಸಹ ದಾವಣಗೆರೆಯಲ್ಲಿ ಬೆಣ್ಣೆದೋಸೆ ಸವಿಯುವಂತೆ ಮಾಡುವುದು ಜಿಲ್ಲಾಡಳಿತದ ಉದ್ದೇಶವಾಗಿದೆ. ರುಚಿಕರ, ಶುಚಿಕರ, ಗುಣಮಟ್ಟದ ದೋಸೆ ಪೂರೈಕೆ ಮಾಡುವುದು ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
ಬೆಣ್ಣೆದೋಸೆ ಹೋಟೆಲ್‍ಗಳಿಗೆ ಪ್ರಮಾಣ ಪತ್ರ
ಬೆಣ್ಣೆದೋಸೆ ಹೋಟೆಲ್‍ಗಳಿಗೆ ಗುಣ್ಣಮಟ್ಟದ ಖಾತರಿಯನ್ನು ಒದಗಿಸಲು ಆಹಾರ ಸುರಕ್ಷತಾ ಕಾಯಿದೆಯನ್ವಯ ಪರಿಶೀಲನೆ ನಡೆಸಿ ದೋಸೆಗೆ ಬಳಸುವ ಧಾನ್ಯಗಳು, ಬೆಣ್ಣೆ, ಎಣ್ಣೆ ಮತ್ತು ಇತರೆ ವಸ್ತುಗಳು, ಅಲ್ಲಿನ ಆರೋಗ್ಯವಂತ ಸಿಬ್ಬಂದಿಯ ತಪಾಸಣೆ ಸೇರಿದಂತೆ ಸಾರ್ವಜನಿಕರ ಆರೋಗ್ಯ ಸುರಕ್ಷತೆಯ ಮಾನದಂಡಗಳನ್ನು ಪರಿಶೀಲಿಸಿ ಜಿಲ್ಲಾಡಳಿತದಿಂದ ಬ್ರಾಂಡಿಂಗ್ ಪ್ರಮಾಣ ಪತ್ರವನ್ನು ನೀಡುವ ಮೂಲಕ ಪ್ರವಾಸೋದ್ಯಮಕ್ಕೆ ಈ ಹೋಟೆಲ್‍ಗಳನ್ನು ಜೋಡಣೆ ಮಾಡಲಾಗುತ್ತದೆ.
ಪ್ರಮಾಣ ಪತ್ರ ನೀಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಪಾಲಿಕೆ ಆಯುಕ್ತರು, ಆಹಾರ ಸುರಕ್ಷತಾ ಕಾಯಿದೆ ಅಂಕಿತ ಅಧಿಕಾರಿಗಳು, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರು ಒಳಗೊಂಡ ಸಮಿತಿ ರಚಿಸಿ ಅಧ್ಯಯನ ವರದಿ ನೀಡಲು ತಿಳಿಸಲಾಗಿದೆ.
ದೋಸೆ ಹಬ್ಬ ಆಚರಣೆ
ದಾವಣಗೆರೆ ಬೆಣ್ಣೆದೋಸೆಯ ರುಚಿಯನ್ನು ಸವಿಯುವಂತೆ ಮಾಡಲು ವಿಶೇಷ ಕಾರ್ಯಕ್ರಮ ಮಾಡಲು ಉದ್ದೇಶಿಸಿದ್ದು, ಇದೇ ಡಿಸೆಂಬರ್‌ನ ಮೂರನೇ ವಾರದ ಅಂತ್ಯದಲ್ಲಿ ದೋಸೆ ಹಬ್ಬವನ್ನು ಆಚರಣೆ ಮಾಡುವ ಮೂಲಕ ದಾವಣಗೆರೆ ದೋಸೆಗೆ ಮೆರಗು ನೀಡಲಾಗುತ್ತಿದೆ.
ಇಲ್ಲಿನ ದೋಸೆಗೆ ಅಂತರರಾಜ್ಯ ಮಟ್ಟದಲ್ಲಿಯೂ ರುಚಿಯನ್ನು ತೋರಿಸಲು ದೆಹಲಿ, ಪಶ್ಚಿಮ ಬಂಗಾಲ, ಉತ್ತರಪ್ರದೇಶ ಸೇರಿದಂತೆ ಉತ್ತರದ ರಾಜ್ಯಗಳಲ್ಲಿ ನಡೆಯುವ ವಿಶೇಷ ಉತ್ಸವ, ಸಮ್ಮೇಳನಗಳಿಗೆ ಇಲ್ಲಿನ ಹೋಟೆಲ್ ಮಾಲಿಕರನ್ನು ಪ್ರತಿನಿಧಿಯನ್ನಾಗಿ ಕಳುಹಿಸುವ ಮೂಲಕ ಇಲ್ಲಿನ ದೋಸೆ ರುಚಿಯನ್ನು ಸವಿಯುವಂತೆ ಮಾಡಲಾಗುತ್ತದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ದಾವಣಗೆರೆಯ ಪ್ರತಿಷ್ಠಿತ ಬೆಣ್ಣೆದೋಸೆ ಹೋಟೆಲ್ ಮಾಲಿಕರುಗಳು, ವಿವಿಧ ಇಲಾಖೆ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ದಾವಣಗೆರೆ ಬೆಣ್ಣೆದೋಸೆ ಬರೀ ಜಿಲ್ಲೆಯಷ್ಟೇ ಅಲ್ಲದೆ ಹೊರ ರಾಜ್ಯಗಳವರೆಗೂ ಪ್ರಸಿದ್ಧಿ ಪಡೆದಿದೆ. ಇದೀಗ ಇದೇ ಬೆಣ್ಣೆದೋಸೆಗೆ ಬ್ರಾಂಡಿಂಗ್ ಕೊಡುವ ನಿರ್ಧಾರ ಮಾಡಿರುವುದು ನಿಜಕ್ಕೂ ಸಂತಸದ ಸಂಗತಿಯಾಗಿದೆ ಎನ್ನುವು ಜಿಲ್ಲೆ ಜನರ ಆಶಯವಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications