ದಾವಣಗೆರೆ-ಚಿತ್ರದುರ್ಗ-ತುಮಕೂರು ರೈಲ್ವೆ ಮಾರ್ಗ ಕಾಮಗಾರಿ ಪೂರ್ಣಗೊಂಡರೆ ಏನೆಲ್ಲಾ ಉಪಯೋಗ?

Indian Railways: ರಾಜ್ಯದಲ್ಲಿ ರೈಲ್ವೆ ವಿಭಾಗದಲ್ಲಿ ದೊಡ್ಡ ದೊಡ್ಡ ಅಭಿವೃದ್ಧಿ ಕಾರ್ಯಗಳು ಆಗುತ್ತಿವೆ. ಹಾಗೆಯೇ ಈಗಾಗಲೇ ದಾವಣಗೆರೆ-ಚಿತ್ರದುರ್ಗ-ತುಮಕೂರು ಹೊಸ ರೈಲ್ವೆ ಮಾರ್ಗ ಯೋಜನ ಯಾವಾಗ ಪೂರ್ಣಗೊಳಲ್ಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದ್ರೆ ಇದಕ್ಕೆ ಎಷ್ಟು ಕೋಟಿ ಮೀಸಲಿಡಲಾಗಿದೆ ಹಾಗೂ ಕಾಮಗಾರಿ ಪೂರ್ಣಗೊಂಡರೆ ಏನೆಲ್ಲಾ ಸಹಾಯ ಆಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಈ ಹೊಸ ರೈಲ್ವೆ ಮಾರ್ಗ ಯೋಜನೆಗೆ ಈ ಬಾರಿ ಬಜೆಟ್‌ನಲ್ಲಿ 549.45 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ. ಈ ಮಾರ್ಗದ ಉದ್ದ ಒಟ್ಟು 191 ಕಿಲೋ ಮೀಟರ್ ಆಗಿದೆ. ಇನ್ನು ಇದು ಯಾವೆಲ್ಲಾ ಭಾಗಗಳಲ್ಲಿ ಹಾದುಹೋಗಲಿದೆ ಎಂದು ಇಲ್ಲಿತಿಳಿಯಿರಿ.

Davanagere-Chitradurga-Tumakuru Railway Line Benefits

ಹಳೇ ಮಾರ್ಗದಲ್ಲಿ ತುಮಕೂರು-ದಾವಣಗೆರೆ ಹಾಗೂ ದಾವಣಗೆರೆ-ತುಮಕೂರಿಗೆ ಅರಸಿಕೆರೆ ಜಂಕ್ಷನ್ ಮೇಲೆ ಸುತ್ತುವರಿದುಕೊಂಡು ಹೋಗಬೇಕಿತ್ತು. ಇದರಿಂದ ತುಂಬಾ ಸಮಯ ವ್ಯರ್ಥ ಆಗುತ್ತದೆ ಹಾಗೂ ದೂರವೂ ಆಗಲಿದೆ. ಆದರೆ, ಹೊಸ ಮಾರ್ಗ ಸಮಯ ಹಾಗೂ ಅಂತರ ಎರಡನ್ನು ಕಡಿಮೆ ಮಾಡಲಿದೆ.

ಈ ಹೊಸ ಮಾರ್ಗ ಊರುಕೆರೆ, ತಿರುಮೇನಹಳ್ಳಿ, ಜೋಗಿಹಳ್ಳಿ, ಚಿಕ್ಕನಹಳ್ಳಿ, ಸಿರಾ, ತಾವರಕೆರೆ, ಅನಿಸಿದ್ರಿ, ಹಿರಿಯೂರು, ಮೇಟಿಕುರಿಕೆ, ಐಮಂಗಳ, ಪಳವನಹಳ್ಳಿ, ಚಿತ್ರದುರ್ಗ, ಸಿರಿಗೆರೆ, ಹೆಬ್ಬಾಳು, ತೋಳಹುಣುಸೆಲ್ಲಿ ರೈಲ್ವೆ ನಿಲ್ದಾಣಗಳನ್ನು ಒಳಗೊಂಡಿರಲಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಹೊಸ ರೈಲ್ವೆ ಮಾರ್ಗದಲ್ಲಿ ಐದು ಪ್ರಮುಖ ಬ್ರಿಡ್ಜ್‌ಗಳು, 18 ಚಿಕ್ಕ ಬ್ರಿಡ್ಜ್‌ಗಳು, 23 ರಸ್ತೆ ಅಂಡರ್ ಪಾಸ್‌ ಬ್ರಿಡ್ಜ್‌ಗಳು, 7 ರೋಡ್‌ ಓವರ್ ಬ್ರಿಡ್ಜ್‌, ಒಂದು ಫೂಟ್‌ ಓವರ್ ಬ್ರಿಡ್ಜ್‌, ಒಂದು ಪೆಡಿಸ್ಟಲ್‌ ಬ್ರಿಡ್ಜ್‌ ಕೂಡ ನಿರ್ಮಾಣ ಆಗಲಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ರೈಲು ಮಾರ್ಗ ಪೂರ್ಣ ಯಾವಾಗ?: ದಾವಣಗೆರೆ-ಚಿತ್ರದುರ್ಗ-ಬೆಂಗಳೂರು ನೇರ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಯಾವಾಗ ಪೂರ್ಣಗೊಳ್ಳಲಿದೆ ಎಂದು ಸಂಸದ ಗೋವಿಂದ ಕಾರಜೋಳ ಅಪ್ಡೇಟ್‌ ಮಾಹಿತಿಯೊಂದನ್ನು ನೀಡಿದ್ದಾರೆ.

ದಾವಣಗೆರೆ-ಚಿತ್ರದುರ್ಗ-ಬೆಂಗಳೂರು ನೇರ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಯಾವಾಗ 2027ರ ಒಳಗೆ ಪೂರ್ಣಗೊಳ್ಳಲಿದೆ ಎಂದುಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.

ಅರೇಹಳ್ಳಿ ರೈಲು ನಿಲ್ದಾಣದಲ್ಲಿ ಬೆಂಗಳೂರು-ಹೊಸಪೇಟೆ ರೈಲು ನಿಲುಗಡೆ ಚಾಲನೆ ನೀಡಿ ಅವರು ಮಾತನಾಡಿದರು. ದಾವಣಗೆರೆ-ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ನೇರ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಚುರುಕಿನಿಂದ ನಡೆಯುತ್ತಿದೆ. ಆದರೆ, ಚಿತ್ರದುರ್ಗ ಭಾಗದಲ್ಲಿ ಕಾಮಗಾರಿ ಮಂದಗತಿಯಲ್ಲಿ ಸಾಗಿದೆ ಎಂದರು.

ರೈಲು ಮಾರ್ಗ ನಿರ್ಮಿಸಲು ಭೂಮಿ ಸ್ವಾಧೀನ ಮಾಡಿಕೊಡುವ ಜವಾಬ್ದಾರಿ ರಾಜ್ಯ ಸರ್ಕಾರದ್ದಾರೆ. ಭೂ ಸ್ವಾಧೀನ ಪ್ರಕ್ರಿಯೆ ವಿಳಂಬ ಆಗುತ್ತಿದೆ. ಶೀಘ್ರವಾಗಿ ಭೂ ಸ್ವಾಧೀನ ಪ್ರಕ್ರಿಯೆ ಮುಗಿಸಲು ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+