ಗೆಳತಿಯ ಸ್ನೇಹಿತನಿಗೆ ಚಾಕುವಿನಿಂದ ಇರಿದ ಕಾಂಗ್ರೆಸ್ ಕಾರ್ಪೊರೇಟರ್ ಮಗ
ದಾವಣಗೆರೆ, ಜೂನ್ 6 : ಇಲ್ಲಿನ ಕಾಂಗ್ರೆಸ್ ಕಾರ್ಪೊರೇಟರ್ ವೊಬ್ಬರ ಮಗ ತನ್ನ ಗೆಳತಿಯ ಸ್ನೇಹಿತನಿಗೆ ಚಾಕುವಿನಿಂದ ಇರಿದಿದ್ದಾನೆ. ಆತ ಹಲ್ಲೆ ನಡೆಸಿದ್ದಕ್ಕೆ ಕಾರಣ ತಿಳಿದುಬಂದಿಲ್ಲ. ಕೆ.ಟಿ.ಜೆ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಾಗಿದೆ.
ಆರೋಪಿ ರಾಕೇಶ್ ಕಾಂಗ್ರೆಸ್ ಕಾರ್ಪೊರೇಟರ್ ಲಿಂಗರಾಜು ಅವರ ಮಗ. ಅಂದಹಾಗೆ ಕಳೆದ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಶಾಸಕ ಎನ್.ಎ.ಹ್ಯಾರಿಸ್ ಮಗನ ಪುಂಡಾಟಿಕೆಯಿಂದ ಕಾಂಗ್ರೆಸ್ ಗೆ ಭಾರೀ ಮುಜುಗರವಾಗಿತ್ತು. ಬೆಂಗಳೂರಿನ ಬಾರ್ ವೊಂದರಲ್ಲಿ ವಿದ್ವತ್ ಎಂಬಾತನ ಮೇಲೆ ಹ್ಯಾರಿಸ್ ಮಗ ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ಮಾರಣಾಂತಿಕ ಹಲ್ಲೆ ನಡೆಸಿದ್ದರು.

ಈ ಘಟನೆ ನಂತರ ಶಾಸಕ ಎನ್.ಎ.ಹ್ಯಾರಿಸ್ ಅವರ ಮಗ ಮೊಹಮ್ಮದ್ ನಲಪಾಡ್ ನನ್ನು ಕಾಂಗ್ರೆಸ್ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿತ್ತು. ನಲಪಾಡ್ ಗೆ ಈ ವರೆಗೆ ಜಾಮೀನು ಸಿಕ್ಕಿಲ್ಲ. ಈ ಘಟನೆ ಬಗ್ಗೆ ವಿವಿಧ ವಲಯಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಹ್ಯಾರಿಸ್ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಶಾಂತಿನಗರ ಕ್ಷೇತ್ರದಿಂದ ಜಯ ಗಳಿಸಿದ್ದಾರೆ.












Click it and Unblock the Notifications