ದಾವಣಗೆರೆಯ ಅತ್ಯಾಚಾರ ಆರೋಪಿ ಉಪನ್ಯಾಸಕನಿಗೆ ಜೈಲು ಶಿಕ್ಷೆ
ದಾವಣಗೆರೆ, ಫೆಬ್ರವರಿ 18: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ದಾವಣಗೆರೆಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪೋಕ್ಸೋ ಕಾಯ್ದೆಯಡಿ ಹತ್ತು ವರ್ಷ ಜೈಲು ಶಿಕ್ಷೆ ಹಾಗೂ 40 ಸಾವಿರ ರುಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಸೆಪ್ಟೆಂಬರ್ 03, 2018 ರಂದು ಉಪನ್ಯಾಸಕ ದಾದಾಪೀರ ಎನ್ನುವರು ಚಾಕೊಲೇಟ್ ನ ಅಸೆ ತೋರಿಸಿ ಅಪಹರಿಸಿ ಬಾಲಕಿಯನ್ನು ಆಂಧ್ರಪ್ರದೇಶದ ಎಮ್ಮಿಗನೂರು ಆಲಿಪೀರ ದರ್ಗಾಕ್ಕೆ ಕರೆದುಕೊಂಡು ಹೋಗಿ ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ.
ಈ ಬಗ್ಗೆ ಸಂತ್ರಸ್ಥೆಯ ತಂದೆ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ ಹಿನ್ನೆಲೆಯಲ್ಲಿ, ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿತನ ವಿರುದ್ದ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣದ ಸಂಪೂರ್ಣ ತನಿಖೆ ನಡೆಸಿದ ಪೊಲೀಸರು, ಆರೋಪಿಯ ವಿರುದ್ಧದ ಆರೋಪವು ರುಜುವಾದ ಹಿನ್ನೆಲೆಯಲ್ಲಿ ೨ ನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ನಾಗಶ್ರೀ ಅವರ ಅಪರಾಧಿಗೆ ೧೦ ವರ್ಷ ಜೈಲು ಶಿಕ್ಷೆ, ೪೦ ಸಾವಿರ ರುಪಾಯಿ ದಂಡ ವಿಧಿಸಿ ತೀರ್ಪು ನೀಡಿದರು.












Click it and Unblock the Notifications