ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಸವಣ್ಣರಂತೆ ಕಾಯಕದಲ್ಲಿ ದೇವರನ್ನು ಕಾಣಬೇಕು: ದಾವಣಗೆರೆ ಡಿಸಿ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಏಪ್ರಿಲ್ 26: ದಿನದ 24 ತಾಸಿನಲ್ಲಿ ಒಂದು ನಿಮಿಷವಾದರೂ ಬಸವಣ್ಣನವರಾಗುವ ಪ್ರಯತ್ನವನ್ನು ನಾವೆಲ್ಲ ಮಾಡಬೇಕೆಂದು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಏರ್ಪಡಿಸಲಾಗಿದ್ದ ಬಸವೇಶ್ವರರ ಜಯಂತಿಯ ಕಾರ್ಯಕ್ರಮದಲ್ಲಿ ಬಸವರೇಶ್ವರರ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸಿ ಮಾತನಾಡಿದರು.

ಸ್ವಾರ್ಥ, ದ್ವೇಷ ಮತ್ತು ಅಸೂಯೆಯನ್ನು ಮನದಲ್ಲಿ ಇಟ್ಟುಕೊಂಡು ಎಷ್ಟೇ ಪೂಜೆ ಮಾಡಿದರೂ ಪ್ರಯೋಜನವಿಲ್ಲ. ಬದಲಾಗಿ ನಿಸ್ವಾರ್ಥ ಕಾಯಕದಲ್ಲಿ ತೊಡಗಿ ದೇವರನ್ನು ಕಾಣಬೇಕು. ದಾವಣಗೆರೆಯವರೇ ಆದ ಹರ್ಡೇಕರ್ ಮಂಜಪ್ಪನವರು ಆರಂಭಿಸಿದ ಈ ಜಯಂತಿಯನ್ನು ದಾವಣಗೆರೆಯಲ್ಲೇ ಸರಳವಾಗಿ ಆಚರಿಸುತ್ತಿರುವುದು ಹಾಗೂ ಇಲ್ಲಿ ಸೇವೆ ಸಲ್ಲಿಸುತ್ತಿರುವುದು ಕೂಡ ನನ್ನ ಸೌಭಾಗ್ಯ ಎಂದರು.

Davanagere DC Said God Should Be Seen In Work As Basaveshwara

ಬಸವ ಬಳಗದ ಸಂಚಾಲಕ ಸಿದ್ದರಾಮಣ್ಣ ಮಾತನಾಡಿ, ನಾವೆಲ್ಲಾ ಬಸವನ ಹೃದಯ ಬಳ್ಳಿಗಳು. ಜಗತ್ತಿಗೇ ಬೆಳಕು ನೀಡಿದ ಜಗಜ್ಯೋತಿ ಬಸವಣ್ಣನವರು ನುಡಿದಂತೆ ನಡೆದ ಮಹಾನ್ ಚೇತನ. ಎಲ್ಲ ಜಾತಿ, ಧರ್ಮ, ಮತದವರನ್ನು ಒಟ್ಟುಗೂಡಿಸಿ ಸಮಾನತೆಯನ್ನು ಎತ್ತಿ ಹಿಡಿದವರು.

ಕಾಯಕದಲ್ಲಿ ದೇವರನ್ನು ಕಂಡು, ಕಾಯವೇ ಕೈಲಾಸವೆಂದು ಸಾರಿದ ಬಸವಣ್ಣನವರು ನಮ್ಮ ನಿಮ್ಮೆಲ್ಲರೂ ಮಧ್ಯೆ ಇರಬೇಕು. ಎಲ್ಲಿ ನೋಡಿದರಲ್ಲಿ ಬಸವಣ್ಣನವರನ್ನು ಕಾಣಬೇಕು. ಜಿಲ್ಲಾಧಿಕಾರಿಗಳೂ ಬಸವ ತತ್ವಗಳನ್ನು ಪಾಲಿಸುತ್ತ ಆಡಳಿತ ಕೈಂಕರ್ಯದಲ್ಲಿ ತೊಡಗಿಕೊಂಡಿರುವುದು ಅತ್ಯಂತ ಸಂತೋಷದ ವಿಚಾರವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಶಿಕ್ಷಕರಾದ ಮಂಜಣ್ಣನವರು ಬಸವಣ್ಣನವರ "ನಿಮ್ಮನರಿಯದ ಕಾರಣ..' ಎಂಬ ವಚನವನ್ನು ವಾಚಿಸಿದರು. ಕಾರ್ಯಕ್ರಮದಲ್ಲಿ ಜಿ.ಪಂ. ಅಧ್ಯಕ್ಷೆ ಯಶೋಧಮ್ಮ ಮರುಳಪ್ಪ, ಸಿಇಒ ಪದ್ಮಾ ಬಸವಂತಪ್ಪ, ಬಸವ ಬಳಗದ ಅಧ್ಯಕ್ಷ ಹೆಚ್.ಎಂ.ಸ್ವಾಮಿ, ರೈತ ಮುಖಂಡರಾದ ಬಲ್ಲೂರು ರವಿಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ, ಬಸವ ಬಳಗದ ಪದಾಧಿಕಾರಿಗಳು ಇದ್ದರು.

English summary
Davangere DC Mahantesha Beelagi said that, we should make an effort to become a basavanna even if it is just one minute in the 24 hours of the day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X