ಭ್ರಷ್ಟಾಚಾರ ಹಗರಣ: ದಾವಣಗೆರೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ವಜಾ
ದಾವಣಗೆರೆ, ಆಗಸ್ಟ್ 14: ದಾವಣಗೆರೆ ಜಿಲ್ಲಾ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಬಿವಿ ಚಂದ್ರಶೇಖರ್ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ.
ಚಂದ್ರಶೇಖರ್ ವಿರುದ್ಧ ಹಲವಾರು ಆರೋಪಗಳು ಕೇಳಿಬಂದಿದ್ದವು, ಸಹಕಾರ ಇಲಾಖೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿತ್ತು, ಪ್ರಕರಣದ ವಿಚಾರಣೆ ನಡೆಸಿರುವ ಜಂಟಿ ಪ್ರಬಂಧಕರು ಆರೋಪ ಸಾಭೀತಾಗಿದೆ ಎಂದು ವರದಿ ನೀಡಿದ್ದರು. ಈ ವರದಿ ಅನ್ವಯ ಅವರನ್ನು ಅಧ್ಯಕ್ಷ ಹುದ್ದೆಯಿಂದ ವಜಾ ಮಾಡಲಾಗಿದೆ.

ಅಷ್ಟೇ ಅಲ್ಲದೆ ಇನ್ನು ಮುಂದಿನ 6 ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸಲು ಅನರ್ಹರಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಚಂದ್ರಶೇಖರ್ ಅವರು ದಾವಣಗೆರೆ ಜಿಲ್ಲಾ ಸಹಕಾರಿ ಬ್ಯಾಂಕ್‌ನಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು, ತೆರವಾದ ಅಧ್ಯಕ್ಷ ಸ್ಥಾನಕ್ಕೆ ಶೀಘ್ರವೇ ಚುನಾವಣೆ ನಡೆಯಲಿದ್ದು, ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ.












Click it and Unblock the Notifications