ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂಕ್ರಾಂತಿ ಹಬ್ಬಕ್ಕೂ ಮಾರ್ಗಸೂಚಿ ಪ್ರಕಟಿಸಿದ ದಾವಣಗೆರೆ ಜಿಲ್ಲಾಡಳಿತ; ಜ.31ರವರೆಗೆ ನಿರ್ಬಂಧ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಜನವರಿ 13: ಕೋವಿಡ್ ಪ್ರಕರಣಗಳು ದಿಢೀರನೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ಜ.4ರಂದು ಹೊರಡಿಸಿದ್ದ ಮಾರ್ಗಸೂಚಿ ಇದೇ ಜ.31ರವರೆಗೂ ಮುಂದುವರೆಯಲಿದೆ. ಇದರೊಂದಿಗೆ ವಾರಾಂತ್ಯ ಕರ್ಫ್ಯೂ ಕೂಡ ಇರಲಿದೆ.

ದಾವಣಗೆರೆ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ, ಚಿತ್ರಮಂದಿರ, ಹೋಟೆಲ್, ರೆಸ್ಟೋರೆಂಟ್ ಮುಂತಾದೆಡೆ ಶೇ.50 ಆಸನ ಸಾಮರ್ಥ್ಯದೊಂದಿಗೆ ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಸೇರಿದಂತೆ ಹಲವು ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ.

ಸಾರ್ವಜನಿಕರು ಮಾರ್ಗಸೂಚಿಯನ್ನು ತಪ್ಪದೇ ಪಾಲಿಸುವುದರ ಮೂಲಕ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು. ಸಂಕ್ರಾಂತಿ ಹಬ್ಬದ ಪ್ರಯುಕ್ತ, ದೇವಾಲಯದ ಒಳ ಆವರಣದಲ್ಲಿ ಮಾತ್ರ ಸಂಪ್ರದಾಯದಂತೆ ದೈನಂದಿನ ಪೂಜಾ ಕೈಂಕರ್ಯ ನಡೆಸಲು ಅನುಮತಿಸಿದೆ.

ಪೂರ್ಣ ಪ್ರಮಾಣದ ಕೋವಿಡ್ ಲಸಿಕೆ ಪಡೆದ 50 ಜನರಿಗೆ ಮಾತ್ರ ಒಂದು ಬಾರಿಗೆ ದೇವರ ದರ್ಶನಕ್ಕೆ ಅವಕಾಶವಿರುತ್ತದೆ. ಉಳಿದಂತೆ ಯಾವುದೇ ಸೇವೆಗೆ ಅನುಮತಿ ಇಲ್ಲ. ಹಬ್ಬಗಳ ಆಚರಣೆ ಸಲುವಾಗಿ ಯಾವುದೇ ರೀತಿಯ ಮೆರವಣಿಗೆ, ಮನೋರಂಜನಾ ಕಾರ್ಯಕ್ರಮ ಇತ್ಯಾದಿ ಆಯೋಜಿಸುವಂತಿಲ್ಲ.

 ಎಲ್ಲೆಲ್ಲಿ ನಿರ್ಬಂಧ?

ಎಲ್ಲೆಲ್ಲಿ ನಿರ್ಬಂಧ?

ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸುವುದು ಅಲ್ಲದೆ ತುರ್ತು ಸೇವೆಯ ಚಟುವಟಿಕೆ ಹೊರತುಪಡಿಸಿ, ಉಳಿದಂತೆ ಎಲ್ಲ ಬಗೆಯ ಸಾರ್ವಜನಿಕರ ಸಂಚಾರ ನಿಷೇಧಿಸಲಾಗಿದೆ. ಎಲ್ಲ ಕಚೇರಿಗಳು ಸೋಮವಾರದಿಂದ ಶುಕ್ರವಾರದವರೆಗೆ ವಾರದ 5 ದಿನ ಕಾರ್ಯ ನಿರ್ವಹಿಸಲಿವೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ, ಕೋವಿಡ್ ನಿಯಂತ್ರಣ ಮಾರ್ಗಸೂಚಿಯಂತೆ ಜಾರಿಯಲ್ಲಿರುತ್ತದೆ. ಪಬ್, ಕ್ಲಬ್, ರೆಸ್ಟೋರೆಂಟ್ಸ್, ಬಾರ್‌ಗಳು, ಹೋಟೆಲ್‌ಗಳು, ಚಿತ್ರಮಂದಿರಗಳು, ಮಲ್ಟಿಪ್ಲೆಕ್ಸ್, ರಂಗಮಂದಿರಗಳು, ಆಡಿಟೋರಿಯಂ, ಈಜುಕೊಳ, ಜಿಮ್, ಕ್ರೀಡಾ ಕಾಂಪ್ಲೆಕ್ಸ್ ಇತ್ಯಾದಿ ಸ್ಥಳಗಳಲ್ಲಿಯೂ ಕೂಡ ಆಸನ ಸಾಮರ್ಥ್ಯದ ಶೇ.50 ರಷ್ಟು ಮಾತ್ರ ಕಾರ್ಯ ಚಟುವಟಿಕೆಯನ್ನು ಕೋವಿಡ್ ನಿಯಂತ್ರಣ ಮಾರ್ಗಸೂಚಿ ಪಾಲಿಸಿಕೊಂಡು ಕೈಗೊಳ್ಳಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ.

 ಯಾರಿಗೆ ನಿರ್ಬಂಧವಿರುವುದಿಲ್ಲ?

ಯಾರಿಗೆ ನಿರ್ಬಂಧವಿರುವುದಿಲ್ಲ?

ಕೈಗಾರಿಕೆ, ಕಂಪನಿಗಳ ವ್ಯಕ್ತಿಗಳ ಅಗತ್ಯ ಚಟುವಟಿಕೆಗಳಿಗಾಗಿ ಸಂಚಾರಕ್ಕೆ ನಿರ್ಬಂಧ ಇರುವುದಿಲ್ಲ, ಇಂತಹವರು ಅಧಿಕೃತ ಗುರುತಿನ ಚೀಟಿ ತೋರಿಸಬೇಕಾಗುತ್ತದೆ. ಟೆಲಿಕಾಂ, ಇಂಟರ್‍ನೆಟ್ ಸೇವೆ ಪೂರೈಕೆದಾರರು, ತುರ್ತು ಸೇವೆಗೆ ಸಂಬಂಧಿಸಿದ ವಾಹನ ಹಾಗೂ ಸಿಬ್ಬಂದಿ ಗುರುತಿನ ಕಾರ್ಡ್ ತೋರಿಸಬೇಕು. ವೈದ್ಯಕೀಯ, ಔಷಧಿ ಸೇವೆ ಸಂಬಂಧಪಟ್ಟವರಿಗೆ ನಿರ್ಬಂಧ ಇರುವುದಿಲ್ಲ. ಸರಕು ಸಾಗಾಣಿಕೆ ಸಾಗಿಸುವ ವಾಹನ, ಟ್ರಕ್, ಗೃಹ ಪೂರೈಕೆ ವಾಹನಗಳು, ಇ-ಕಾಮರ್ಸ್ ಚಟುವಟಿಕೆಗಳಿಗೆ ನಿರ್ಬಂಧ ಇಲ್ಲ. ಬಸ್, ರೈಲು, ಸಾರ್ವಜನಿಕ ಸಾಗಾಣಿಕೆ ವಾಹನ, ಟ್ಯಾಕ್ಸಿ ಇತ್ಯಾದಿ ವಾಹನಗಳ ಓಡಾಟಕ್ಕೆ ಅಡ್ಡಿ ಇರುವುದಿಲ್ಲ. ಆದರೆ ಸಾರ್ವಜನಿಕರು ಇದಕ್ಕೆ ಸಂಬಂಧಿಸಿದ ದಾಖಲೆ, ಟಿಕೆಟ್ ಹೊಂದಿರಬೇಕು. ಇವುಗಳನ್ನು ಹೊರತುಪಡಿಸಿ ಇತರೆ ಎಲ್ಲ ಬಗೆಯ ಚಟುವಟಿಕೆಗಳಿಗೂ ನಿರ್ಬಂಧ ವಿಧಿಸಲಾಗಿದೆ.

 ವಾರಾಂತ್ಯ ಕರ್ಫ್ಯೂನಲ್ಲಿ ಏನಿರುತ್ತೆ? ಏನಿರಲ್ಲ?

ವಾರಾಂತ್ಯ ಕರ್ಫ್ಯೂನಲ್ಲಿ ಏನಿರುತ್ತೆ? ಏನಿರಲ್ಲ?

ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿದ್ದು, ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಸಂಪೂರ್ಣ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ರಾಜ್ಯ, ಕೇಂದ್ರ ಸರ್ಕಾರಿ ಕಚೇರಿಗಳಲ್ಲಿನ ಹಾಗೂ ಕೋವಿಡ್-19 ಕಂಟೈನ್‍ಮೆಂಟ್ ಮತ್ತು ನಿರ್ವಹಣೆಗೆ, ತುರ್ತು ಸೇವೆಗೆ ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿಗಳ ಓಡಾಟಕ್ಕೆ ನಿರ್ಬಂಧ ಇರುವುದಿಲ್ಲ. ಎಲ್ಲ ಸಾರ್ವಜನಿಕ ಪಾರ್ಕ್‍ಗಳು ಮುಚ್ಚಲಾಗುತ್ತದೆ. ಆಹಾರ ಧಾನ್ಯ, ಆಹಾರ, ಹಣ್ಣು, ತರಕಾರಿ, ಮಾಂಸ, ಮೀನು, ಹಾಲು ಮತ್ತು ಇತರೆ ಡೈರಿ ಪದಾರ್ಥಗಳು, ಪಶು ಆಹಾರಕ್ಕೆ ಸಂಬಂಧಿಸಿದ ಅಂಗಡಿಗಳು ತೆರೆಯಲು ಅವಕಾಶವಿದೆ. ತಳ್ಳುಗಾಡಿಯಲ್ಲಿ ತರಕಾರಿ, ಹಣ್ಣುಗಳ ವ್ಯಾಪಾರಕ್ಕೆ ನಿರ್ಬಂಧ ಇಲ್ಲ. ಹೋಟೆಲ್, ರೆಸ್ಟೋರೆಂಟ್‍ಗಳಲ್ಲಿ ಪಾರ್ಸಲ್ ಸೇವೆ ಲಭ್ಯವಿರುತ್ತದೆ. ಹೋಂ ಡೆಲಿವರಿ ವ್ಯವಸ್ಥೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಬಟ್ಟೆ, ಪಾತ್ರೆ, ಬೆಳ್ಳಿ-ಬಂಗಾರದಂತಹ ಅಂಗಡಿಗಳಿಗೆ ಅವಕಾಶ ಇರುವುದಿಲ್ಲ.

 ಮಾರ್ಗಸೂಚಿಯನ್ನು ಪಾಲಿಸುವುದು ಕಡ್ಡಾಯ

ಮಾರ್ಗಸೂಚಿಯನ್ನು ಪಾಲಿಸುವುದು ಕಡ್ಡಾಯ

ಬಸ್, ರೈಲು, ಸಾರ್ವಜನಿಕ ಸಾಗಾಣಿಕೆ ವಾಹನ, ಟ್ಯಾಕ್ಸಿ ಇತ್ಯಾದಿ ವಾಹನಗಳ ಓಡಾಟಕ್ಕೆ ಅಡ್ಡಿ ಇರುವುದಿಲ್ಲ, ಆದರೆ ಸಾರ್ವಜನಿಕರು ಇದಕ್ಕೆ ಸಂಬಂಧಿಸಿದ ದಾಖಲೆ, ಟಿಕೆಟ್ ಹೊಂದಿರಬೇಕು. ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ನು ಪಾಲಿಸುವುದು ಕಡ್ಡಾಯವಾಗಿರುತ್ತೆ. ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿರುವುದರಿಂದ, ಶನಿವಾರದಂದು ಶಾಲಾ- ಕಾಲೇಜುಗಳು ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಮಾಹಿತಿ ನೀಡಿದ್ದಾರೆ.

ಜ.31ರವರೆಗೆ ದಾವಣಗೆರೆ ಜಿಲ್ಲೆಯಲ್ಲಿ ಯಾವುದೇ ಧರಣಿ, ಪ್ರತಿಭಟನೆ, ಮೆರವಣಿಗೆ, ಉತ್ಸವ, ಜಾತ್ರೆಗಳಿಗೆ ಅವಕಾಶವಿರುವುದಿಲ್ಲ. ಮದುವೆಗಳಲ್ಲಿ ಹೊರಾಂಗಣದಲ್ಲಿ ಗರಿಷ್ಠ 200, ಒಳಾಂಗಣದಲ್ಲಿ ಗರಿಷ್ಠ 100 ಜನ ಮಾತ್ರ ಭಾಗವಹಿಸಲು ಅವಕಾಶವಿದೆ. ದೇವಾಲಯಗಳಲ್ಲಿ ಕೂಡ ಕೇವಲ ದರ್ಶನಕ್ಕೆ ಮಾತ್ರ ಅವಕಾಶವಿದೆ. ಸಾರ್ವಜನಿಕರು ತಪ್ಪದೆ ಮಾಸ್ಕ್ ಧರಿಸಬೇಕು. ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು, ಇಲ್ಲದಿದ್ದಲ್ಲಿ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Recommended Video

ಆ ಒಂದು ವಿಡಿಯೋ ಜೀವನಕ್ಕೆ ಮುಳುವಾಯಿತಂತೆ !! | Oneindia Kannada

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ, ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಇದು ಜ.31 ರ ಬೆಳಿಗ್ಗೆ 5 ರವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಪ್ರತಿದಿನ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ.

English summary
Several restrictions have been put in Davanagere district, including the weekend curfew and strict adherence to the Covid-19 control guidelines.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X