Ration: ಅನ್ನಭಾಗ್ಯ ಯೋಜನೆಯ ಪಡಿತರ ಅಕ್ರಮ ಸಾಗಾಣೆಗೆ ಕಡಿವಾಣ: ಪಡಿತರ ವಿತರಣೆ ಸಮಯದಲ್ಲಿ ಬದಲಾವಣೆ
Ration: ರಾಜ್ಯದಲ್ಲಿ ಸದ್ಯ ಇದೀಗ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಪಡಿತರ ಚೀಟಿಗಳನ್ನು ಎಪಿಎಲ್‌ಗೆ ವರ್ಗಾಹಿಸುವ ಕೆಲಸ ಮುಂದುವರೆದಿದೆ. ಈ ನಡುವೆಯೇ ಜಿಲ್ಲೆಯೊಂದರಲ್ಲಿ ಪಡಿತರ ಅಕ್ರಮ ಸಾಗಾಟ ಮತ್ತು ತೂಕದಲ್ಲಿ ವಂಚನೆ ಆರೋಪ ಕೇಳಿಬಂದಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ರೇಷನ್ ವಿತರಣೆ ಸಮಯವನ್ನು ಸಹ ಬದಲಾವಣೆ ಮಾಡಿದ್ದಾರೆ. ಹಾಗಾದ್ರೆ, ಎಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸಾಮಾನ್ಯವಾಗಿ ಬಿಪಿಎಲ್ ಪಡಿತರ ಚೀಟಿಯನ್ನು ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡಲಾಗುತ್ತದೆ. ಆದರೆ, ಅನರ್ಹರು ಸಹ ಬಿಪಿಎಲ್ ಪಡಿತರ ಚೀಟಿ ಹೊಂದಿದ್ದು, ಇಂತಹವರ ವಿರುದ್ಧ ಸರ್ಕಾರ ಸಮರ ಸಾರಿದೆ. ಈ ನಡುವೆಯೇ ಮತ್ತೊಂದೆಡೆ ಕೆಲವು ಭಾಗಗಳಲ್ಲಿ ಪಡಿತರ ಅಕ್ರಮ ಸಾಗಾಟ ಹಾಗೂ ತೂಕದಲ್ಲಿ ವಂಚನೆ ಮಾಡುತ್ತಿರುವ ಆರೋಪ ಕೇಳಿಬಂದಿವೆ.

ಇದೀಗ ದಾವಣಗೆರೆ ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ರಮ ಸಾಗಟ ಹಾಗೂ ತೂಕದಲ್ಲಿ ವಂಚನೆ ಮಾಡಿದ 12 ನ್ಯಾಯಬೆಲೆ ಅಂಗಡಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.
ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳು ಜಿಲ್ಲಾ ಮಟ್ಟದ ಗ್ಯಾರಂಟಿ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಇದೇ ವೇಳೆ ಫಲಾನುಭವಿಗಳ ಬಳಿ ಹಣ ವಸೂಲಿ ಸೇರಿದಂತೆ ಹಲವು ಲೋಪದೋಷಗಳನ್ನು ಗಮನಿಸಿ 12 ನ್ಯಾಯಬೆಲೆ ಅಂಗಡಿಗಳನ್ನು ಅಮಾನತು ಮಾಡಲಾಗಿದೆ ಎಂದರು.
ಕೂಲಿ ಕಾರ್ಮಿಕರಿಗೆ ಅನುಕೂಲ ಆಗುವಂತೆ ಬೆಳಗ್ಗೆ 6ರಿಂದ ಸಂಜೆ 8 ಗಂಟೆಯವರೆಗೆ ಅನ್ನಭಾಗ್ಯ ಯೋಜನೆಯ ಪಡಿತರ ವಿತರಣೆ ಮಾಡಬೇಕು ಎಂದು ಗಿತ್ತೆ ಮಾಧವ ವಿಠಲ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಿಳಿಸಿರು.
ಇನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ 450 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ 150 ಕ್ವಿಂಟಾಲ್ ರಾಗಿ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
2023ರಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ 3,312 ಫಲಾನುಭವಿಗಳು ಮರಣ ಹೊಂದಿದ್ದಾರೆ. ಈ ಪೈಕಿ 215 ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಯಿಂದ 25.60 ಲಕ್ಷವನ್ನು ಸರ್ಕಾರಕ್ಕೆ ಮರು ಪಾವತಿ ಮಾಡಲಾಗಿದೆ ಎಂದು ತಿಳಿಸಿದರು. ಇನ್ನು ಇನ್ಮುಂದೆ ಕೂಲಿ ಕಾರ್ಮಿಕರಿಗೆ ಅನುಕೂಲ ಆಗುವಂತೆ ಬೆಳಿಗ್ಗೆ 6ರಿಂದ ಸಂಜೆ 8 ಗಂಟೆಯವರೆಗೆ ಅನ್ನಭಾಗ್ಯ ಯೋಜನೆಯ ಪಡಿತರ ವಿತರಣೆ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠಲ ರಾವ್ ಸೂಚಿಸಿದರು.
ಒಂದೆಡೆ ಅರ್ಹರಲ್ಲದಿದ್ದರೂ ಸಹ ರಾಜ್ಯದಲ್ಲಿ ತುಂಬಾ ಜನ ಬಿಪಿಎಲ್ ಪಡಿತರ ಚೀಟಿ ಪಡೆದುಕೊಂಡು ಅರ್ಹರ ಅನ್ನ ಹಾಗೂ ಸೌಲಭ್ಯಗಳನ್ನು ಕಿತ್ತುಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರ ಇಂತಹವರ ವಿರುದ್ಧ ಸಮರ ಸಾರುವ ಮೂಲಕ ಕಡಿವಾಣ ಹಾಕುವ ಕೆಲಸವನ್ನು ಮುಂದುವರೆಸಿದೆ. ಇದರ ನಡುವೆಯೇ ಅಕ್ರಮವಾಗಿ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ರಮವಾಗಿ ಸಾಗಣೆ ಮಾಡುವವರ ವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳುತ್ತಿದೆ. ಈ ಮೂಲಕ ಬಡವರಿಗೆ ಸಿಗಬೇಕಾದ ಸೌಲಭ್ಯಗಳನ್ನು ಅವರಿಗೆ ತಲುಪುವಂತೆ ಮಾಡುವ ಮಹತ್ವದ ಕಾರ್ಯಕ್ಕೆ ಸರ್ಕಾರ ಕೈಹಾಕಿದೆ.












Click it and Unblock the Notifications