ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಾಮಾಜಿಕ ಅಂತರ ಪಾಲಿಸದ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರು

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಮೇ 26: ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಬಸವರಾಜ್ ದಾವಣಗೆರೆಯ ಮಹಾನಗರ ಪಾಲಿಕೆಯಲ್ಲಿಂದು ಫಲಾನುಭವಿಗಳಿಗೆ ಹೊಲಿಗೆಯಂತ್ರ, ಕಿಟ್ ಹಾಗೂ ಲ್ಯಾಪ್ ಟಾಪ್ ವಿತರಣೆ ಮಾಡಿದರು. ಆದರೆ ಈ ವೇಳೆ ಸಾಮಾಜಿಕ ಅಂತರ ಪಾಲನೆಯಾಗದಿರುವುದು ಕಂಡುಬಂತು.

ಸಚಿವ ಭೈರತಿ ಬಸವರಾಜ್ ಮಹಾನಗರ ಪಾಲಿಕೆಗೆ ಆಗಮಿಸುತ್ತಿದ್ದಂತೆ ನೂರಾರು ಜನರು ಒಮ್ಮೆಲೆ ಜಮಾವಣೆಗೊಂಡರು. ಈ ವೇಳೆ ನೂಕುನುಗ್ಗಲು ಏರ್ಪಟ್ಟಿತು. ಆದರೆ ಅಧಿಕಾರಿಗಳು ಜನರಲ್ಲಿ ಸಾಮಾಜಿಕ ಅಂತರ ಕಾಯ್ದುಗೊಳ್ಳುವಂತೆ ಮನವಿ ಮಾಡಿದರೂ ಸಹ ಯಾವುದೇ ಪ್ರಯೋಜನವಾಗಲಿಲ್ಲ.

ಸಾವನ್ನೇ ಗೆದ್ದುಬಂದ ಈ ಎಳೆಗೂಸಿಗೆ ಚಪ್ಪಾಳೆಯ ಸುರಿಮಳೆಸಾವನ್ನೇ ಗೆದ್ದುಬಂದ ಈ ಎಳೆಗೂಸಿಗೆ ಚಪ್ಪಾಳೆಯ ಸುರಿಮಳೆ

ಜಿಲ್ಲಾ ಉಸ್ತುವಾರಿ ಸಚಿವರೂ ಸಹ ಸಾಮಾಜಿಕ ಅಂತರ ಪಾಲನೆ ಮಾಡದೇ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡಿದ್ದು ಕಂಡುಬಂದಿತು. ಈ ವೇಳೆ ಸಂಸದ ಜಿ.ಎಂ ಸಿದ್ದೇಶ್ವರ್, ಶಾಸಕರಾದ ಶಾಮನೂರು ಶಿವಶಂಕರಪ್ಪ, ಎಸ್.ಎ ರವೀಂದ್ರನಾಥ್, ಮೇಯರ್ ಬಿ.ಜಿ ಅಜಯ್ ಕುಮಾರ್, ಆಯುಕ್ತ ವಿಶ್ವನಾಥ್ ಮುದ್ದಜ್ಜಿ, ಉಪಮೇಯರ್ ಸೌಮ್ಯ ನರೇಂದ್ರಕುಮಾರ್ ಹಾಗೂ ಪಾಲಿಕೆ ಸದಸ್ಯರಿದ್ದರು.

Davanagere District Incharge Minister Bhairathi Basavaraj Not Maintained Social Distance

ಮಹಾನಗರ ಪಾಲಿಕೆ ಪ್ರಗತಿ ಪರಿಶೀಲನೆ ಸಭೆಗೆ ಸದಸ್ಯರನ್ನು ಆಹ್ವಾನಿಸಲಾಗಿಲ್ಲ ಎಂದು ಆಕ್ರೋಶಗೊಂಡ ಸದಸ್ಯರು, ಜಿಲ್ಲಾ ಉಸ್ತುವಾರಿ ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಘಟನೆ ಪಾಲಿಕೆಯಲ್ಲಿ ಜರುಗಿತು.

Davanagere District Incharge Minister Bhairathi Basavaraj Not Maintained Social Distance

ಅಧಿಕಾರಿಗಳು ಮಹಾನಗರ ಪಾಲಿಕೆ ಪ್ರಗತಿ ಪರಿಶೀಲನೆ ಸಭೆಗೆ ಸದಸ್ಯರನ್ನು ಆಹ್ವಾನಿಸಿಲ್ಲ. ಇದರಿಂದಾಗಿ ನಮ್ಮ ವಾರ್ಡ್ ನ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ. ಸದಸ್ಯರನ್ನು ಹೊರಗಿಟ್ಟು ಸಭೆ ನಡೆಸಲು ಮುಂದಾದರೆ ಹೇಗೆ ಎಂದು ಸಚಿವರ ವಿರುದ್ಧ ಸಿಟ್ಟಿಗೆದ್ದ ಸದಸ್ಯರನ್ನು ಸಂಸದ ಜಿ.ಎಂ ಸಿದ್ದೇಶ್ವರ್ ಸಮಾಧಾನ ಪಡಿಸಿದರು.

English summary
Bairati Basavaraj, the Minister in charge of the Davanagere District, distributed sewing machines, kits and laptops to the beneficiaries in Davanagere. But this time there was no maintained social Distance.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X