• search
 • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

'ಸಚಿವ ಸಂಪುಣ ವಿಸ್ತರಣೆ ಅಥವಾ ಪುನಾರಚನೆ: ಮುಖ್ಯಮಂತ್ರಿ ನಿರ್ಧಾರಕ್ಕೆ ನಾನು ಬದ್ಧ'

By ದಾಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಮೇ.14: ಬಿಜೆಪಿ ಪಕ್ಷದಲ್ಲಿ ನಾನು ಸಾಮಾನ್ಯ ಕಾರ್ಯಕರ್ತನಾಗಿದ್ದೆ. ನನ್ನನ್ನು ಚುನಾವಣೆಗೆ ನಿಲ್ಲಿಸಿ ಸಚಿವರನ್ನಾಗಿ ಮಾಡಿದೆ. ಮುಂದೆ ಕೂಡ ಪಕ್ಷ ಯಾವ ನಿರ್ಣಯ ತೆಗೆದುಕೊಳ್ಳುತ್ತೋ ಅದಕ್ಕೆ ನಾನು ಅದಕ್ಕೆ ಸಿದ್ಧನಿದ್ದೇನೆ ಎಂದು ಇಂಧನ ಸಚಿವ ಸುನೀಲ್‌ಕುಮಾರ್ ಹೇಳಿದರು.

ಸಚಿವ ಸ್ಥಾನಕ್ಕೆ 60 ರಿಂದ 100 ಕೋಟಿ ನೀಡುತ್ತಿದ್ದಾರೆ ಎನ್ನುವ ಆರೋಪ ದಾವಣಗೆರೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, "ಪಕ್ಷ ನಮಗೆ ಎಲ್ಲವನ್ನೂ ಕೊಟ್ಟಿದೆ ವಿನಃ ನಾವು ಪಕ್ಷಕ್ಕೆ ಏನು ಕೊಟ್ಟಿಲ್ಲ. ನಮ್ಮ ಪಕ್ಷದಲ್ಲಿ ವಿಚಾರಕ್ಕೆ ಆದ್ಯತೆಯೇ ಹೊರತು, ಹಣಕ್ಕೆ ಅಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ ನಾವು ಮುಂದಿನ ಚುನಾವಣೆಗೆ ಹೋಗುತ್ತೇವೆ. ಸಚಿವ ಸಂಪುಟದ ವಿಸ್ತರಣೆ ಹಾಗೂ ಪುನಾರಚನೆ ಮುಖ್ಯಮಂತ್ರಿ ಅವರ ಪರಮಾಧಿಕಾರ. ಅವರು ಕರ್ನಾಟಕಕ್ಕೆ ಒಳಿತಾಗುವ ನಿರ್ಣಯವನ್ನು ತೆಗೆದುಕೊಳ್ಳುತ್ತಾರೆ," ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಯಾವುದೇ ವಿಚಾರದಲ್ಲಾಗಲಿ ನಮ್ಮ ಪಕ್ಷ ವರಿಷ್ಠರಿಗೆ ದೂರದೃಷ್ಠಿಯಿದೆ. ಅದಕ್ಕಾಗಿ ನಮ್ಮ ನಾಯಕರಿಗೆ ಯಾವ ಸಮಯಕ್ಕೆ ಯಾವ ನಿರ್ಣಯ ತೆಗೆದುಕೊಳ್ಳಬೇಕು ಎನ್ನುವುದು ಗೊತ್ತಿದೆ. ಆರ್ ಎಸ್ಎಸ್ ಮೂಲದವರಿಗೆ ಸಚಿವ ಸ್ಥಾನದಿಂದ ಕೆಳಗಿಳಿಸುವುದಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತಮ ಬಜೆಟ್ ಮಂಡಿಸಿದ್ದಾರೆ. 180 ಯೋಜನೆಗಳಿಗೆ ಬಜೆಟ್ ಮಂಡಿಸುವ ಮೂಲಕ ಜೀವ ತುಂಬಿದ್ದಾರೆ. ಅವರಿಗೆ ಎಲ್ಲವೂ ತಿಳಿದಿದೆ ಎಂದು ಹೇಳಿದರು.

ಕಾಂಗ್ರೆಸ್‌ನವರು ನಾಯಕರಿಲ್ಲದ ಅನಾಥವಾದ ಕೋಣೆಯಲ್ಲಿದ್ದಾರೆ

ಕಾಂಗ್ರೆಸ್ ನವರು ನಾಯಕರಿಲ್ಲದ ಅನಾಥವಾದ ಕೋಣೆಯಲ್ಲಿ ಇದ್ದಾರೆ. ಕಾರ್ಯಕರ್ತರು, ನಾಯಕರು ಕೂಡ ಅನಾಥರಾಗಿದ್ದಾರೆ. ಇಂದು ರಾಜ್ಯದ ಜನರಿಗೆ ಭರವಸೆ ಇದ್ದರೆ ಅದು ಬಿಜೆಪಿ ಹಾಗೂ‌ ಮೋದಿಯವರ ಮೇಲೆ ಮಾತ್ರ. ಕಾಂಗ್ರೆಸ್ ಹತ್ತು ಸುಳ್ಳು ಹೇಳಿ ನಿಜ ಮಾಡಲು ಹೊರಟಿದೆ. ಕಾಂಗ್ರೆಸ್ ನ ಭ್ರಷ್ಟಾಚಾರಿಗಳು ಜಾಮೀನಿನ ಮೇಲೆ ಇದ್ದವರು. ರಾಷ್ಟ್ರೀಯ ಅಧ್ಯಕ್ಷರಿಂದ ಹಿಡಿದು, ರಾಜ್ಯ ಅಧ್ಯಕ್ಷರೂ ಸಹ ಬೇಲ್ ಮೇಲೆ ಇದ್ದಾರೆ. ಆದರೆ ಅವರು ನಮ್ಮ ಮೇಲೆ ಆರೋಪ ಮಾಡುತ್ತಾರೆ ಎಂದು ವ್ಯಂಗ್ಯವಾಡಿದರು.

Davanagere: I am agree for CM cabinet expantion decision- Sunil Kumar

ಹರಿಹರ ತಾಲೂಕಿನ‌ ನಿರಂತರ ಜ್ಯೋತಿ ಅಕ್ರಮ ಪ್ರಕರಣ

   ಜನತೆ ಜೊತೆ ಕಾಂಗ್ರೆಸ್ ಕೊಂಡಿ ಕಳಚಿದೆ ಎಂದು ಒಪ್ಪಿಕೊಂಡ ರಾಹುಲ್ ಗಾಂಧಿ | Oneindia Kannada

   ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ‌ಲ್ಲಿ ನಿರಂತರ ಜ್ಯೋತಿ ಅಕ್ರಮ ಪ್ರಕರಣ ಕುರಿತಂತೆ ಈಗಾಗಲೇ ತನಿಖೆಗೆ ಆದೇಶ ನೀಡಲಾಗಿದೆ. ಹರಿಹರ ತಾಲೂಕಿನ ಎರಡು ಪೀಢರ್ ಗಳಲ್ಲಿ ತನಿಖೆ ನಡೆಸಿದ್ದೇವೆ. ಅದು ಸಮಾಧಾನ ತಂದಿಲ್ಲ. ಉಳಿದ 29 ಫೀಡರ್ ಗಳ ತನಿಖೆ ಮಾಡುವುದಕ್ಕೆ ಆದೇಶಿಸಿದ್ದೇನೆ. ನಿರಂತರ ಜ್ಯೋತಿ ಅಕ್ರಮ ಪ್ರಕರಣದಲ್ಲಿ ಯಾರನ್ನು ರಕ್ಷಿಸುವುದಿಲ್ಲ. ನಾನು ಇಂಧನ ಇಲಾಖೆ ಸಚಿವನಾದ ಮೇಲೆ 100ಕ್ಕೂ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೇನೆ. ಅದೇ ರೀತಿ ಹರಿಹರದಲ್ಲಿ ಸಮಗ್ರ ತನಿಖೆ ಮಾಡಿಸಿ ಕ್ರಮ ಕೈಗೊಳ್ಳುವುದಾಗಿ ದಾವಣಗೆರೆಯಲ್ಲಿ ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದರು.

   English summary
   Energy Minister Sunil Kumar said that agree for Chief Minister Basavaraja Bommai was taken the decision of Cabinet expansion or restructuring.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X