ಸಚಿವರಿಂದ ಜಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ
ದಾವಣಗೆರೆ, ಏಪ್ರಿಲ್ 27: ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಬಸವರಾಜ್ ಅವರು ಇಂದು ಜಗಳೂರಿನಲ್ಲಿ ಕೋವಿಡ್-19 ವೈರಾಣು ನಿಯಂತ್ರಣ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿದ್ದರು.
ಪಟ್ಟಣದ ತರಳುಬಾಳು ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಜಗಳೂರು ತಾಲೂಕಿನ ಕಡುಬಡವರಿಗೆ ಸಂಸದರಾದ ಜಿ.ಎಂ ಸಿದ್ದೇಶ್ವರ, ಶಾಸಕರಾದ ಎಸ್.ವಿ ರಾಮಚಂದ್ರ ನೇತೃತ್ವದಲ್ಲಿ 500 ಕ್ಕೂ ಹೆಚ್ಚು ರೇಷನ್ ಕಿಟ್ ಗಳನ್ನು ವಿತರಣೆ ಮಾಡಿದರು.
ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಜಗಳೂರು ತಾಲ್ಲೂಕು ಬರಪೀಡಿತ ಪಟ್ಟಿಗೆ ಸೇರಿದ್ದು, ಇಲ್ಲಿನ ಜನಗಳಿಗೆ ಯಾವುದೇ ತೊಂದರೆಯಾಗದಂತೆ ಕುಡಿಯುವ ನೀರು, ಮೂಲಭೂತ ಸೌಕರ್ಯಗಳು, ಪಡಿತರ ಕೊಡುವುದರಲ್ಲಿ ಯಾವುದೇ ಲೋಪದೋಷಗಳು ಆಗದಂತೆ ಜಿಲ್ಲಾಧಿಕಾರಿಗಳಿಗೆ ಮತ್ತು ತಾಲ್ಲೂಕಿನ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅದೇ ರೀತಿ ದಾವಣಗೆರೆ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು. ತಾಲೂಕಿನ ಎಲ್ಲಾ ಇಲಾಖೆಗಳು ಸಮರ್ಪಕ ಕರ್ತವ್ಯ ಪಾಲಿಸಿ ಜನರ ಆರೋಗ್ಯವನ್ನು ಕಾಪಾಡಬೇಕು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಮತ್ತು ರೈತರು ಬೆಳೆದ ಹಣ್ಣು ಹಂಪಲುಗಳು ಮತ್ತು ತರಕಾರಿಗಳನ್ನು ಸರ್ಕಾರದ ಬೆಂಬಲ ಬೆಲೆಗೆ ನೀಡಲು ಕ್ರಮ ಕೈಗೊಳ್ಳಬೇಕೆಂದರು.
ಸಂಸದ ಜಿ.ಎಂ ಸಿದ್ದೇಶ್ವರ್ ಮಾತನಾಡಿ, ನಮ್ಮ ಜಿಲ್ಲೆ ಕೋವಿಡ್-19 ಮುಕ್ತ ಜಿಲ್ಲೆಯಾಗಿದೆ, ನಮ್ಮ ಸರ್ಕಾರದ ವತಿಯಿಂದ ವೃದ್ಧಾಪ್ಯ ವೇತನ, ಅಂಗವಿಕಲ ವೇತನ, ವೃದ್ಧರಿಗೆ ಮತ್ತು ಅಂಗವಿಕಲರಿಗೆ ವೇತನ ನೀಡುತ್ತಿದ್ದೇವೆ. ಪಡಿತರ ಕಾರ್ಡುದಾರರಿಗೆ 2 ತಿಂಗಳಿಗೆ ರೇಷನ್ ಕೊಟ್ಟಿದೆ. ಪ್ರಧಾನಮಂತ್ರಿ ಮೋದಿಜಿ ಅವರ ಯೋಜನೆಯಾದ ಉಜ್ವಲ್ ಯೋಜನೆ ಅಡಿಯಲ್ಲಿ ಗ್ಯಾಸ್ ಹೊಂದಿದ ಫಲಾನುಭವಿಗಳಿಗೆ ಅವರ ಖಾತೆಗೆ ಹಣವನ್ನು ಜಮಾ ಮಾಡಿದ್ದೇವೆ ಎಂದು ತಿಳಿಸಿದರು.
ಶಾಸಕ ಎಸ್.ವಿ ರಾಮಚಂದ್ರ ಮಾತನಾಡಿ, ನಮ್ಮ ತಾಲ್ಲೂಕು ಆಡಳಿತದ ಸಿಬ್ಬಂದಿಗಳು ಇದುವರೆಗೆ ಯಾವುದೇ ಪ್ರಕರಣಗಳಿಲ್ಲದಂತೆ ನೋಡಿಕೊಂಡಿರುವುದು ಶ್ಲಾಘನೀಯ ನಮ್ಮ ತಾಲೂಕಿನಲ್ಲಿ ಅತ್ಯಂತ ಕಡು ಬಡವರಿದ್ದಾರೆ. ಅವರಿಗೆ ನಮ್ಮ ಕೈಲಾದಷ್ಟು ನಾವು ಸಹಾಯ ಮಾಡುತ್ತಿದ್ದೇವೆ ಎಂದರು.
ಈ ವೇಳೆ ಉಸ್ತುವಾರಿ ಕಾರ್ಯದರ್ಶಿ ಉಮಾಶಂಕರ್, ಜಿ.ಪಂ ಸಿಇಒ ಪದ್ಮಾ ಬಸವಂತಪ್ಪ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ನಗರ ಯೋಜನಾ ನಿರ್ದೇಶಕಿ ನಜ್ಮಾ, ಡಿಹೆಚ್ಒ ರಾಘವೇಂದ್ರ ಸ್ವಾಮಿ, ತಹಶೀಲ್ದಾರ್ ತಿಮ್ಮಣ್ಣ ಹುಲ್ಲುಮನೆ, ಪ.ಪಂ ಮುಖ್ಯಾಧಿಕಾರಿ ರಾಜು ಡಿ. ಬಣಕಾರ್, ವೃತ್ತ ನಿರೀಕ್ಷಕರಾದ ದುರ್ಗಪ್ಪ, ಇಒ ಮಲ್ಲನಾಯಕ ಇದ್ದರು.












Click it and Unblock the Notifications