ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

Posted By:
Subscribe to Oneindia Kannada

ದಾವಣಗೆರೆ, ಸೆ. 18: ಇಲ್ಲಿನ ಕಾರಿಗನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಐಶ್ವರ್ಯ ಭಾನುವಾರದಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಆದರೆ, ತಮ್ಮ ಮಗಳ ಸಾವು ಅನುಮಾನಾಸ್ಪದವಾಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಪೋಷಕರು ಬಸವಾಪಟ್ಟಣ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

ವಸತಿ ಶಾಲೆಯೊಂದರ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಕಂಡಿದ್ದು, ತನಿಖೆ ನಡೆಸುವಂತೆ ಪೋಷಕರು ಬಸವಾಪಟ್ಟಣ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

Davanagere : Kariganur Residential school student death mystery

ಸೆಪ್ಟಂಬರ್ 13 ರಂದು ಪೋಷಕರು ಬಸವಾಪಟ್ಟಣ ಸಮೀಪದ ಕಾರಿಗನೂರಿಗೆ ಬಂದು, ಬಾಲಕಿಯನ್ನು ದಾವಣಗೆರೆಯ ಜಿಲ್ಲಾ ಆಸ್ಪತ್ರೆಗೆ ಸೇರಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಭಾನುವಾರದಂದು ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಮೃತಪಟ್ಟಿದ್ದಾಳೆ.

'ಮೃತ ಬಾಲಕಿಯ ಕಾಲು ಊದಿಕೊಂಡಿತ್ತು. ಜ್ವರ ಬಂದು ನಿತ್ರಾಣಳಾಗಿದ್ದಳು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಳಾಗಿದ್ದಾಳೆ ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ದಾವಣಗೆರೆ ಎಸ್ಪಿ ಡಾ. ಭೀಮಶಂಕರ್ ಗುಳೇದ ಅವರು ಹೇಳಿದ್ದಾರೆ.

ಸೆಪ್ಟೆಂಬರ್ 10ರಂದು ಶಾಲಾ ಆವರಣದಲ್ಲಿ ಬಿದ್ದು ಕಾಲಿಗೆ ಗಾಯ ಮಾಡಿಕೊಂಡಿದ್ದಳು. ನೋವಿಗೆ ಜ್ವರ ಬಂದಿತ್ತು ಎಂದು ತಿಳಿದು ಬಂದಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕುಮಾರ ಹನುಮಂತಪ್ಪ ತಿಳಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A Class 7 student Aishwarya of Morarji Desai residential school in Kariganur near Basavapatna in the Davanagere district died at McGann Hospital in Shivamogga on Sunday. Her parents lodged a complaint with police, raising doubts over the cause of the her death.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ