Lok Sabha Election 2024 Result: ದಾವಣಗೆರೆಯಲ್ಲಿ ಪ್ರಭಾ ಮಲ್ಲಿಕಾರ್ಜುನ್ ಗೆಲುವು
ದಾವಣಗೆರೆ, ಜೂನ್ 04; ದಾವಣಗೆರೆ ಲೋಕಸಭಾ ಚುನಾವಣೆ 2024ರ ಫಲಿತಾಂಶ ಪ್ರಕಟವಾಗಿದೆ. ಎರಡೂ ರಾಷ್ಟ್ರೀಯ ಪಕ್ಷದಿಂದ ಮಹಿಳಾ ಅಭ್ಯರ್ಥಿಗಳು ಕ್ಷೇತ್ರದಲ್ಲಿ ಕಣದಲ್ಲಿದ್ದರು.
ಮಂಗಳವಾರ ದಾವಣಗೆರೆ ಲೋಕಸಭಾ ಚುನಾವಣೆ 2024ರ ಮತ ಎಣಿಕೆ ತೋಳಹುಣಸೆ ದಾವಣಗೆರೆ ವಿಶ್ಯವಿದ್ಯಾನಿಲಯದಲ್ಲಿನ ಶಿವಗಂಗೋತ್ರಿಯಲ್ಲಿ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಪ್ರಭಾ ಮಲ್ಲಿಕಾರ್ಜುನ್ ಗೆಲುವು ಸಾಧಿಸಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿದ್ದ ಗಾಯತ್ರಿ ಸಿದ್ದೇಶ್ವರ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ, ಸಿದ್ದರಾಮಯ್ಯ ಆಪ್ತರಾದ ಜಿ. ಬಿ. ವಿನಯ್ ಕುಮಾರ್ ಟಿಕೆಟ್ ಕೈ ತಪ್ಪಿದ ಬಳಿಕ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಅವರು ಸಹ ಸೋಲು ಕಂಡಿದ್ದಾರೆ.
ದಾವಣಗೆರೆ ಚುನಾವಣೆ ಎಂದರೆ ಜಿ. ಎಂ. ಸಿದ್ದೇಶ್ವರ ಮತ್ತು ಶಾಮನೂರು ಶಿವಶಂಕರಪ್ಪ ಕುಟುಂಬದ ನಡುವಿನ ಹೋರಾಟ. ಈ ಬಾರಿಯ ಚುನಾವಣೆಯಲ್ಲಿ ಜಿ. ಎಂ. ಸಿದ್ದೇಶ್ವರ ಪತ್ನಿ ಗಾಯತ್ರಿ ಸಿದ್ದೇಶ್ವರ ಬಿಜೆಪಿ ಅಭ್ಯರ್ಥಿಯಾಗಿದ್ದರು. ಶಾಮನೂರು ಶಿವಶಂಕರಪ್ಪ ಸೊಸೆ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು.
ದಾವಣಗೆರೆ Lok Sabha Election 2024 Results LIVE: ಪ್ರಭಾ ಮಲ್ಲಿಕಾರ್ಜುನ್ ಗೆಲುವು
ಪ್ರಭಾ ಮಲ್ಲಿಕಾರ್ಜುನ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಬಾಕಿ ಇದೆ. ಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರಭಾ ಮಲ್ಲಿಕಾರ್ಜುನ್ 4,27,926 ಮತಗಳನ್ನು ಪಡೆದಿದ್ದಾರೆ. ಗಾಯತ್ರಿ ಸಿದ್ದೇಶ್ವರ 3,84,391 ಮತಗಳನ್ನು ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿದ್ದ ಜಿ. ಬಿ. ವಿನಯ್ ಕುಮಾರ್ 27,672 ಮತಗಳನ್ನು ಪಡೆದಿದ್ದಾರೆ.
2019ರ ಚುನಾವಣೆಯಲ್ಲಿ ದಾವಣಗೆರೆಯಲ್ಲಿ ಬಿಜೆಪಿಯ ಜಿ. ಎಂ. ಸಿದ್ದೇಶ್ವರ ಗೆಲುವು ಸಾಧಿಸಿದ್ದರು. ಆದರೆ ಈ ಬಾರಿಯ ಚುನಾವಣೆಗೆ ಬಿಜೆಪಿ ಅವರ ಬದಲು ಪತ್ನಿ ಗಾಯತ್ರಿ ಸಿದ್ದೇಶ್ವರಗೆ ಟಿಕೆಟ್ ನೀಡಿತ್ತು. ಆದರೆ ಈ ತಂತ್ರ ಕೈ ಕೊಟ್ಟಿದ್ದು, ದಾವಣಗೆರೆ ಕಾಂಗ್ರೆಸ್ ವಶವಾಗಿದೆ.
ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆ ಜಿ. ಎಂ. ಸಿದ್ದೇಶ್ವರ ಮತ್ತು ಶಾಮನೂರು ಶಿವಶಂಕರಪ್ಪ ಕುಟುಂಬದ ನಡುವಿನ ಹೋರಾಟ ಎಂದೇ ಖ್ಯಾತಿಗಳಿಸಿದೆ. 2004, 2009, 2014ರಲ್ಲಿ ಶಾಮನೂರು ಶಿವಶಂಕರಪ್ಪ ಪುತ್ರ ಎಸ್. ಎಸ್. ಮಲ್ಲಿಕಾರ್ಜುನ್ ಜಿ. ಎಂ. ಸಿದ್ದೇಶ್ವರ ವಿರುದ್ಧ ಸೋತಿದ್ದಾರೆ.
2019ರಲ್ಲಿ ಕಾಂಗ್ರೆಸ್ ಹೆಚ್. ಬಿ. ಮಂಜಪ್ಪ ಕಣಕ್ಕಿಳಿದರೂ ಅವರು ಸಹ ಸೋಲು ಕಂಡಿದ್ದರು. 2024ರ ಚುನಾವಣೆಯಲ್ಲಿ ಗಾಯತ್ರಿ ಸಿದ್ದೇಶ್ವರ ಅವರನ್ನು ಡಾ. ಪ್ರಭಾ ಮಲ್ಲಿಕಾರ್ಜುನ್ ಸೋಲಿಸುವ ಮೂಲಕ ಹಿಂದಿನ ಚುನಾವಣೆ ಸೇಡು ತೀರಿಸಿಕೊಂಡಿದ್ದಾರೆ.
ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜಗಳೂರು, ಹರಪನಹಳ್ಳಿ, ಹರಿಹರ, ದಾವಣಗೆರೆ ಉತ್ತರ, ದಾವಣಗೆರೆ ದಕ್ಷಿಣ, ಮಾಯಕೊಂಡ, ಚನ್ನಗಿರಿ, ಹೊನ್ನಾಳಿ ವಿಧಾನಸಭಾ ಕ್ಷೇತ್ರಗಳಿವೆ. ದಾವಣಗೆರೆ ಉತ್ತರ ಮತ್ತು ದಕ್ಷಿಣದಲ್ಲಿ ಶಾಮನೂರು ಕುಟುಂಬದವರೇ ಶಾಸಕರಾಗಿದ್ದಾರೆ.
ಹರಪನಹಳ್ಳಿಯಲ್ಲಿ ಪಕ್ಷೇತರ ಶಾಸಕಿ ಲತಾ ಮಲ್ಲಿಕಾರ್ಜುನ ಕಾಂಗ್ರೆಸ್ ಬೆಂಬಲಿಸುತ್ತಾರೆ. ಹರಿಹರ ಶಾಸಕರು ಬಿ. ಪಿ. ಹರೀಶ್ (ಬಿಜೆಪಿ). ಈ ಅಂಶದ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸಹಾಯಕವಾಗಿದೆ. ಡಾ. ಪ್ರಭಾ ಮಲ್ಲಿಕಾರ್ಜುನ್ ಪತಿ ಎಸ್. ಎಸ್. ಮಲ್ಲಿಕಾರ್ಜುನ್ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರು. ಶಾಮನೂರು ಶಿವಶಂಕರಪ್ಪ ಸಹ ಹಾಲಿ ಶಾಸಕರು.
ಶಾಮನೂರು ಕುಟುಂಬದ ಪ್ರಭಾವ, ಪ್ರಭಾ ಮಲ್ಲಿಕಾರ್ಜುನ್ ಮಾಡುವ ಸಮಾಜ ಸೇವಾ ಚಟುವಟಿಕೆಗಳು ಅವರ ಗೆಲುವು ಸುಲಭವಾಗಿದೆ. ದಾವಣಗೆರೆ ಕ್ಷೇತ್ರದಿಂದ ಮೊದಲ ಬಾರಿಗೆ ಮಹಿಳೆಯೊಬ್ಬರು ಸಂಸದರಾಗಿ ಆಯ್ಕೆಯಾಗಿ, ಇತಿಹಾಸ ನಿರ್ಮಾಣ ಮಾಡಿದ್ದಾರೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications