ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆ : 4ನೇ ಬಾರಿಗೆ ಗೆಲುವು ದಾಖಲಿಸಿದ ಜಿ.ಎಂ.ಸಿದ್ದೇಶ್ವರ

|
Google Oneindia Kannada News

ದಾವಣಗೆರೆ, ಮೇ 23 : ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಜಿ.ಎಂ.ಸಿದ್ದೇಶ್ವರ ಅವರು 4ನೇ ಬಾರಿಗೆ ಜಯಗಳಿಸುವ ಮೂಲಕ ಕ್ಷೇತ್ರವನ್ನು ಬಿಜೆಪಿ ಭದ್ರಕೋಟೆ ಎಂದು ಸಾಬೀತು ಮಾಡಿದರು.

ಗುರುವಾರ ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆ ನಡೆಯಿತು. ಜಿ.ಎಂ.ಸಿದ್ದೇಶ್ವರ ಅವರು 1,69, 702 ಮತಗಳ ಅಂತರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಎಚ್.ಬಿ.ಮಂಜಪ್ಪ ಅವರನ್ನು ಸೋಲಿಸಿದರು.

ಲೋಕಸಭಾ ಚುನಾವಣೆ 2019 : ಕರ್ನಾಟಕದಲ್ಲಿ ಗೆದ್ದವರು, ಸೋತವರುಲೋಕಸಭಾ ಚುನಾವಣೆ 2019 : ಕರ್ನಾಟಕದಲ್ಲಿ ಗೆದ್ದವರು, ಸೋತವರು

ಜಿ.ಎಂ.ಸಿದ್ದೇಶ್ವರ ಅವರು ಸತತವಾಗಿ 2004, 2009, 2014 ಮತ್ತು 2019ರ ಚುನಾವಣೆಯಲ್ಲಿ ಜಯಗಳಿಸುವ ಮೂಲಕ ಕ್ಷೇತ್ರವನ್ನು ಬಿಜೆಪಿ ಭದ್ರಕೋಟೆಯಾಗಿ ಮಾಡಿದರು.

Davanagere Lok Sabha Election Result 2019

ಶಾಮನೂರು ಶಿವಶಂಕರಪ್ಪ ಕುಟುಂಬದ ಬೆಂಬಲದೊಂದಿಗೆ ಕಣಕ್ಕಿಳಿದಿದ್ದ ಮೈತ್ರಿಕೂಟದ ಎಚ್.ಬಿ.ಮಂಜಪ್ಪ ಅವರು 4,83,294 ಮತಗಳನ್ನು ಪಡೆಯುವ ಮೂಲಕ ಸೋಲು ಅನುಭವಿಸಿದರು.

ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಭಾರಿ ಗೊಂದಲಕ್ಕೆ ಕಾರಣವಾಗಿತ್ತು. ನಾಮಪತ್ರ ಸಲ್ಲಿಸಲು ಎರಡು ದಿನಗಳು ಬಾಕಿ ಇರುವಾಗ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿತ್ತು.

ಜಿ.ಎಂ.ಸಿದ್ದೇಶ್ವರ ಅವರು 2004, 2009, 2014ರ ಚುನಾವಣೆಯಲ್ಲಿ ಸತತವಾಗಿ ಜಯಗಳಿಸಿ, ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಿದರು. ಜನರು ಅವರಿಗೆ ಮತ್ತೊಮ್ಮೆ ಬೆಂಬಲ ನೀಡಿದರು.

ಪಡೆದ ಮತಗಳು

* ಜಿ.ಎಂ.ಸಿದ್ದೇಶ್ವರ : 6,52,996

* ಎಚ್.ಬಿ.ಮಂಜಪ್ಪ : 4,83,294 ಮತಗಳು

English summary
Davanagere Lok Sabha Election Result 2019. G.M.Siddeshwara BJP candidate and H.B.Manjappa Congress-JD(S) candidate. Here are the result in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X