ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆ ಚಿತ್ರಣ : ಬಿಜೆಪಿ ಗೆಲುವಿನ ಓಟಕ್ಕೆ ತಡೆ ಬೀಳಲಿದೆಯೇ?

|
Google Oneindia Kannada News

ದಾವಣಗೆರೆ, ಏಪ್ರಿಲ್ 16 : ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ದಾವಣಗೆರೆ ಲೋಕಸಭಾ ಕ್ಷೇತ್ರ ಈಗ ಬಿಜೆಪಿಯ ವಶದಲ್ಲಿದೆ. ಈ ಬಾರಿಯ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಕುಟುಂಬದಿಂದ ಯಾರೂ ಚುನಾವಣಾ ಅಖಾಡಕ್ಕೆ ಇಳಿದಿಲ್ಲ.

ಏಪ್ರಿಲ್ 23ರಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆ ನಡೆಯುತ್ತಿದೆ. ಬಿಜೆಪಿಯಿಂದ ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ ಅವರು ಕಣದಲ್ಲಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಅವರು ಅಭ್ಯರ್ಥಿ.

ದಾವಣಗೆರೆ ಚುನಾವಣಾ ಪುಟ

ಕಾಂಗ್ರೆಸ್ ಮೊದಲು ಶಾಮನೂರು ಶಿವಶಂಕರಪ್ಪ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು. ಆದರೆ, ವಯಸ್ಸಿನ ಕಾರಣ ನೀಡಿದ ಅವರು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದರು. ಬಳಿಕ ಅವರ ಪುತ್ರ ಎಸ್‌.ಎಸ್.ಮಲ್ಲಿಕಾರ್ಜುನ ಅವರನ್ನು ಅಭ್ಯರ್ಥಿ ಆಗಬಹುದು ಎಂಬ ನಿರೀಕ್ಷೆ ಇತ್ತು.

ದಾವಣಗೆರೆಯಲ್ಲಿ ಹ್ಯಾಟ್ರಿಕ್ ಬಾರಿಸಿರುವ ಜಿ.ಎಂ.ಸಿದ್ದೇಶ್ವರ ಪರಿಚಯದಾವಣಗೆರೆಯಲ್ಲಿ ಹ್ಯಾಟ್ರಿಕ್ ಬಾರಿಸಿರುವ ಜಿ.ಎಂ.ಸಿದ್ದೇಶ್ವರ ಪರಿಚಯ

ಎಸ್.ಎಸ್.ಮಲ್ಲಿಕಾರ್ಜುನ ಅವರು ಸ್ಪರ್ಧಿಸಲು ನಿರಾಕರಿಸಿದರು. ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಆಪ್ತರಾದ ಎಚ್.ಬಿ.ಮಂಜಪ್ಪ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಲಾಯಿತು. ಎಸ್.ಎಸ್.ಮಲ್ಲಿಕಾರ್ಜುನ ಅವರು ಮಂಜಪ್ಪ ಅವರನ್ನು ಗೆಲ್ಲಿಸಲು ಪಣ ತೊಟ್ಟಿದ್ದಾರೆ.

ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮ, ಎಚ್.ಬಿ.ಮಂಜಪ್ಪಗೆ ಟಿಕೆಟ್ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮ, ಎಚ್.ಬಿ.ಮಂಜಪ್ಪಗೆ ಟಿಕೆಟ್

ಬಿಜೆಪಿ ಅಭ್ಯರ್ಥಿ ಜಿ.ಎಂ.ಸಿದ್ದೇಶ್ವರ ಅವರು 2004, 2009, 2014ರ ಚುನಾವಣೆಯಲ್ಲಿ ಸತತವಾಗಿ ಜಯಗಳಿಸುವ ಮೂಲಕ ಹ್ಯಾಟ್ರಿಕ್ ಗೆಲುವು ದಾಖಲು ಮಾಡಿದ್ದಾರೆ. ಇದು ಕೊನೆಯ ಚುನಾವಣೆ ಎಂದು ಅವರು ಪ್ರಚಾರ ನಡೆಸುತ್ತಿದ್ದಾರೆ....

ಕಾಂಗ್ರೆಸ್ ಭದ್ರಕೋಟೆಯಾಗಿತ್ತು

ಕಾಂಗ್ರೆಸ್ ಭದ್ರಕೋಟೆಯಾಗಿತ್ತು

ದಾವಣಗೆರೆ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿತ್ತು. 90ರ ದಶಕದ ಬಳಿಕ ಬಿಜೆಪಿ ವಶಕ್ಕೆ ಕ್ಷೇತ್ರ ಬಂದಿದೆ. 2004 ರಿಂದ 2014ರ ತನಕ ಬಿಜೆಪಿಯ ಜಿ.ಎಂ.ಸಿದ್ದೇಶ್ವರ ಅವರು ಸತತವಾಗಿ ಗೆಲುವು ಸಾಧಿಸಿದ್ದಾರೆ. 2019ರ ಚುನಾವಣೆಗೂ ಅವರೇ ಅಭ್ಯರ್ಥಿ.

ವಿಧಾನಸಭೆ ಬಲಾಬಲ

ವಿಧಾನಸಭೆ ಬಲಾಬಲ

ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 8 ವಿಧಾನಸಭಾ ಕ್ಷೇತ್ರಗಳಿವೆ. 2014ರಲ್ಲಿ ಲೋಕಸಭಾ ಚುನಾವಣೆ ನಡೆದಾಗ ಬಿಜೆಪಿಯ ಶಾಸಕರೇ ಇರಲಿಲ್ಲ. ಆದರೂ ಜಿ.ಎಂ.ಸಿದ್ದೇಶ್ವರ ಅವರು ಗೆಲುವು ಸಾಧಿಸಿದ್ದರು.

* ಬಿಜೆಪಿ -ಜಗಳೂರು, ಹೊನ್ನಾಳಿ, ದಾವಣಗೆರೆ ಉತ್ತರ, ಚನ್ನಗಿರಿ, ಮಾಯಕೊಂಡ, ಹರಪನಹಳ್ಳಿ
* ಕಾಂಗ್ರೆಸ್‌ - ಹರಿಹರ, ದಾವಣಗೆರೆ ದಕ್ಷಿಣ
* ಜೆಡಿಎಸ್ - ಯಾವುದೇ ಶಾಸಕರು ಇಲ್ಲ.

ಜಿ.ಎಂ.ಸಿದ್ದೇಶ್ವರ ಪ್ಲಸ್ ಪಾಯಿಂಟ್

ಜಿ.ಎಂ.ಸಿದ್ದೇಶ್ವರ ಪ್ಲಸ್ ಪಾಯಿಂಟ್

ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಜಿ.ಎಂ.ಸಿದ್ದೇಶ್ವರ ಅವರಿಗೆ ಮಾಡಿರುವ ಕೆಲಸಗಳು, ನರೇಂದ್ರ ಮೋದಿ ಅವರ ಅಲೆ ಪ್ಲಸ್ ಪಾಯಿಂಟ್. ಸ್ಮಾರ್ಟ್ ಸಿಟಿ ಯೋಜನೆಯಡಿ 400 ಕೋಟಿ ರೂ. ಅನುದಾನ ತಂದಿದ್ದಾರೆ. ಹರಿಹರ-ಯಶವಂತಪುರ ಇಂಟರ್ ಸಿಟಿ ರೈಲು, ಚಿಕ್ಕಜಾಜೂರು-ದಾವಣಗೆರೆ-ಹುಬ್ಭಳ್ಳಿ ಜೋಡಿ ಹಳಿ ನಿರ್ಮಾಣ, ದಾವಣಗೆರೆ ರೈಲ್ವೆ ನಿಲ್ದಾಣ ಅಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸ ಮಾಡಿದ್ದಾರೆ.

ಶಾಮನೂರು ಕುಟುಂಬದ ಬಲ

ಶಾಮನೂರು ಕುಟುಂಬದ ಬಲ

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಅವರು ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ. ಶಾಮನೂರು ಕುಟುಂಬದ ಬಲ ಅವರಿಗೆ ಇದೆ. ಶಾಮನೂರು ಶಿವಶಂಕರಪ್ಪ ಅವರ ಪ್ರಭಾವ ಮಂಜಪ್ಪ ಅವರ ಬೆನ್ನಿಗಿದೆ. ಎಸ್.ಎಸ್.ಮಲ್ಲಿಕಾರ್ಜುನ ಅವರು ಎಚ್.ಬಿ.ಮಂಜಪ್ಪ ಅವರನ್ನು ಗೆಲ್ಲಿಸಲು ಪಣ ತೊಟ್ಟಿದ್ದಾರೆ.

2014ರ ಚುನಾವಣೆ ಫಲಿತಾಂಶ

2014ರ ಚುನಾವಣೆ ಫಲಿತಾಂಶ

2014ರ ಚುನಾವಣೆಯಲ್ಲಿ ಜಿ.ಎಂ.ಸಿದ್ದೇಶ್ವರ ಅವರು 5,18,894 ಮತಗಳನ್ನು ಪಡೆದು ಗೆದ್ದಿದ್ದರು. ಕಾಂಗ್ರೆಸ್‌ನ ಎಸ್.ಎಸ್.ಮಲ್ಲಿಕಾರ್ಜುನ ಅವರು 501,287 ಮತ ಪಡೆದಿದ್ದರು. ಜೆಡಿಎಸ್‌ನಿಂದ ಕಣಕ್ಕಿಳಿದಿದ್ದ ಮಹಿಮಾ ಪಟೇಲ್ ಅವರು 46,911 ಮತಗಳನ್ನು ಪಡೆದಿದ್ದರು.

English summary
Davanagere lok sabha seat political picture. Sitting MP G.M.Siddeshwara BJP candidate. H.B.Manjappa Congress-JD(S) candidate. Election will be held on April 23, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X