ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೇಯರ್-ಉಪಮೇಯರ್ ಚುನಾವಣೆ: MLC ಮತದಾನಕ್ಕೆ ಅವಕಾಶ, ಡಿಸಿಗೆ ಧಿಕ್ಕಾರ

|
Google Oneindia Kannada News

ದಾವಣಗೆರೆ, ಫೆಬ್ರವರಿ.18: ವಿಧಾನ ಪರಿಷತ್ ಸದಸ್ಯರೂ ಕೂಡಾ ಮೇಯರ್ ಮತ್ತು ಉಪ ಮೇಯರ್ ಚುನಾವಣೆಯಲ್ಲಿ ಮತದಾನ ಮಾಡಬಹುದು ಎಂದು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸ್ಪಷ್ಟಪಡಿಸಿದ್ದಾರೆ.

ಫೆಬ್ರವರಿ.19ರ ಬುಧವಾರವೇ ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್ ಉಪ ಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪರಿಷತ್ ಸದಸ್ಯರ ಹೆಸರನ್ನು ಅಕ್ರಮವಾಗಿ ದಾವಣಗೆರೆ ವ್ಯಾಪ್ತಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಕಾಂಗ್ರೆಸ್ ಮತ್ತು ಬಿಜೆಪಿಯ ಪಾಲಿಕೆ ಸದಸ್ಯರು ಆರೋಪಿಸಿದ್ದರು.

ನಾಳೆ ದಾವಣಗೆರೆ ಮೇಯರ್ ಚುನಾವಣೆ; ಇಂದು 12 ಎಂಎಲ್ಸಿಗಳಿಗೆ ನೋಟಿಸ್ನಾಳೆ ದಾವಣಗೆರೆ ಮೇಯರ್ ಚುನಾವಣೆ; ಇಂದು 12 ಎಂಎಲ್ಸಿಗಳಿಗೆ ನೋಟಿಸ್

ನಗರದಲ್ಲಿ ಇರುವ ಎಂಎಲ್ ಸಿಗಳ ಮತದಾನಕ್ಕೆ ಅವಕಾಶ ನೀಡದಂತೆ ಕೋರಿ ಹೈಕೋರ್ಟ್ ಗೆ ಅರ್ಜಿಯನ್ನೂ ಸಹ ಸಲ್ಲಿಸಲಾಗಿತ್ತು. ಮಂಗಳವಾರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಬುಧವಾರವೇ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ನಡೆಯಲಿದೆ. ಇಂಥ ಸಂದರ್ಭದಲ್ಲಿ ನ್ಯಾಯಾಲಯವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳಿ ವಿಚಾರಣೆಯನ್ನು ಫೆಬ್ರವರಿ.24ಕ್ಕೆ ಮುಂದೂಡಿದೆ.

Davanagere Mayor-Deputy Mayor Election: MLC Also Get Right To Vote

ಹೈಕೋರ್ಟ್ ಆದೇಶದ ಬೆನ್ನಲ್ಲೇ ಜಿಲ್ಲಾಧಿಕಾರಿ ಸ್ಪಷ್ಟನೆ:

ಬುಧವಾರ ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್-ಉಪ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಹೀಗಾಗಿ ಎಂಎಲ್ ಸಿಗಳಿಗೆ ಮತದಾನದ ಅವಕಾಶ ನೀಡಬೇಕೇ ಬೇಡವೇ ಎಂಬುದನ್ನು ಜಿಲ್ಲಾಧಿಕಾರಿಗಳೇ ತೀರ್ಮಾನಿಸಲಿ ಎಂದು ಹೈಕೋರ್ಟ್ ಸೂಚನೆ ನೀಡಿತ್ತು. ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿದ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲೆಯಲ್ಲಿ ಇರುವ 12 ಬಿಜೆಪಿ ಮತ್ತು ಕಾಂಗ್ರೆಸ್ ನ ಎಂಎಲ್ ಸಿಗಳಿಗೆ ಮತದಾನಕ್ಕೆ ಅವಕಾಶ ನೀಡಲಾಗುತ್ತದೆ ಎಂದರು.

ಇನ್ನು, ಅದಕ್ಕೂ ಮೊದಲು ಮತದಾರರ ಪಟ್ಟಿಯಲ್ಲಿ ಇರುವ ಎಂಎಲ್ ಸಿಗಳು ಜಿಲ್ಲೆಯಲ್ಲೇ ವಾಸವಿರುವ ಬಗ್ಗೆ ಸ್ಥಳ ಪರಿಶೀಲನೆ ಮೂಲಕ ಖಾತ್ರಿಪಡಿಸಿಕೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಇನ್ನು, ಎಂಎಲ್ ಸಿಗಳ ಮತದಾನಕ್ಕೆ ಅವಕಾಶ ನೀಡುತ್ತಿದ್ದಂತೆ ಕೆರಳಿದ ಪಾಲಿಕೆಯ ಸದಸ್ಯರು ಜಿಲ್ಲಾಧಿಕಾರಿ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿದರು.

English summary
Davanagere Mayor-Deputy Mayor Election: MLC Also Get Right To Vote. DC Mahantesh Bilagi Clarification After Highcourt Direction.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X