ದಾವಣಗೆರೆ ಮೇಯರ್ ಚುನಾವಣೆ: ಮೀಸಲಾತಿ ಪಟ್ಟಿ ಪ್ರಕಟ
ದಾವಣಗೆರೆ, ಫೆಬ್ರವರಿ 12: ದಾವಣಗೆರೆ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಆಯ್ಕೆಗೆ ಮೀಸಲಾತಿ ಪ್ರಕಟವಾಗಿದೆ. ರಾಜ್ಯ ಸರ್ಕಾರ ಈ ಕುರಿತು ಶುಕ್ರವಾರ ಮೀಸಲಾತಿ ಪಟ್ಟಿ ಬಿಡುಗಡೆ ಮಾಡಿದೆ.
ಮೇಯರ್, ಉಪ ಮೇಯರ್ ಆಯ್ಕೆಗೆ ದಿನಾಂಕವೂ ನಿಗದಿಯಾಗಿದ್ದು, ಫೆಬ್ರವರಿ 24 ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ.
ಮೈಸೂರು ಮೇಯರ್ ಚುನಾವಣೆ; ಮೀಸಲಾತಿ ಪ್ರಕಟ
ಮಧ್ಯ ಕರ್ನಾಟಕದ ದಾವಣಗೆರೆ ಮಹಾನಗರ ಪಾಲಿಕೆಯ ಒಂದು ವರ್ಷದ ಮೇಯರ್ ಅವಧಿ ಮುಕ್ತಾಯವಾಗಿದ್ದು, ಎರಡನೇ ಅವಧಿಗೆ ಮೀಸಲಾತಿ ಪ್ರಕಟವಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿರುವ ದಾವಣಗೆರೆಯ ಪಾಲಿಕೆ ಗದ್ದುಗೆ ಹಿಡಿಯಲು ಪ್ರತಿ ವರ್ಷ ಪೈಪೋಟಿ ನಡೆಯುತ್ತದೆ.
ಹೊಸತಾಗಿ ಮೀಸಲಾತಿ ಪ್ರಕಾರ, ಮೇಯರ್ ಹುದ್ದೆ ಪರಿಶಿಷ್ಟ ಜಾತಿ (ಮಹಿಳೆ) ಹಾಗೂ ಉಪ ಮೇಯರ್ ಹುದ್ದೆ ಸಾಮಾನ್ಯ (ಮಹಿಳೆ)ಗೆ ಒಲಿದು ಬಂದಿದ್ದು, ಪಾಲಿಕೆಯಲ್ಲಿ ಸಮಬಲದ ಸದಸ್ಯರ ಸಂಖ್ಯೆ ಹೊಂದಿರುವ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಅಧಿಕಾರ ಪಡೆಯಲು ಹಲವು ತಂತ್ರಗಳನ್ನು ಮಾಡುತ್ತಿವೆ. ಅಂತಿಮವಾಗಿ ಬೆಣ್ಣೆನಗರಿ ಗದ್ದುಗೆ ಯಾರ ಪಾಲಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.